10 ಬಾಲ ಕಾರ್ಮಿಕರ ರಕ್ಷಣೆ
Team Udayavani, Jun 12, 2018, 11:14 AM IST
ವಿಜಯಪುರ: ವಿವಿಧ ಕಡೆಗಳಲ್ಲಿ ಬಾಲ ಕಾರ್ಮಿಕರಾಗಿ ದುಡಿಯುತ್ತಿದ್ದ 10 ಮಕ್ಕಳನ್ನು ರಕ್ಷಿಸಲಾಗಿದ್ದು, ಇದರಲ್ಲಿ
ಮಾದಕ ವ್ಯಸನಿಯಾಗಿದ್ದ ಓರ್ವ ಬಾಲಕ ಸೇರಿರುವುದು ಗಮನೀಯ. ಜೂನ್ 12ರಂದು ವಿಶ್ವ ಬಾಲಕಾರ್ಮಿಕ
ವಿರೋಧಿ ದಿನಾಚರಣೆ ಇದ್ದು, ಇಂಥ ಆಚರಣೆಗಳು ಔಪಚಾರಿಕತೆ ಎಂಬುದು ಬಾಲ ಕಾರ್ಮಿಕರ ದುಸ್ಥಿತಿ ಮನವರಿಕೆ ಮಾಡಿಕೊಡುತ್ತದೆ.
ಬಾಲಕಾರ್ಮಿಕ ಮಕ್ಕಳ ರಕ್ಷಣಾ ಸಪ್ತಾಹದ ಅಂಗವಾಗಿ ಜೂ. 6ರಿಂದ 11ರವರೆಗೆ ವಿಜಯಪುರ ಮಕ್ಕಳ ಸಹಾಯವಾಣಿ-1098ರ ತಂಡದ ಕಾರ್ಯಕರ್ತರು ನಡೆಸಿದ ಕಾರ್ಯಾಚರಣೆಯಲ್ಲಿ ಚಹಾದ ಅಂಗಡಿ, ಕಿರಾಣಿ, ಚಪ್ಪಲಿ ಅಂಗಡಿ, ಸ್ಟೇಷನರಿ, ಮಾಂಸ, ಹಣ್ಣು, ಮಾರಾಟದ ಅಂಗಡಿ ಹೀಗೆ ವಿವಿಧ ನಡೆಗಳಲ್ಲಿ ದುಡಿಯುತ್ತಿದ್ದ ಬಾಲ ಕಾರ್ಮಿಕರನ್ನು ರಕ್ಷಿಸಲಾಗಿದೆ.
ನಗರದ ಸುಮಾರು 70 ಕ್ಕೂ ಹೆಚ್ಚು ಬಾಲ ಕಾರ್ಮಿಕ ಮಕ್ಕಳನ್ನು ಗುರುತಿಸಲಾಗಿದೆ. ದುಡಿಯುವ ಮಕ್ಕಳಿಗೆ ಸಮಾಲೋಚಿಸಿ ಮಾಲೀಕರಿಗೆ ತಿಳಿವಳಿಕೆ ನೀಡಲಾಯಿತು. ಈ ಹಂತದಲ್ಲಿ 8 ಮಕ್ಕಳ ಮನವೊಲಿಸಿ ಮನೆಗೆ ಕಳುಹಿಸಲಾಗಿದೆ. ಇಬ್ಬರು ಮಕ್ಕಳನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಲಾಗಿದೆ. ಇದಲ್ಲದೇ ಮಾದಕ ದ್ರವ್ಯ ಸೇವಿಸುತ್ತಿದ್ದ 12 ವರ್ಷದ ಬಾಲಕ ಸೇರಿದಂತೆ 10 ಮಕ್ಕಳನ್ನು ರಕ್ಷಿಸಲಾಗಿದೆ.
ಸರಕಾರ ಬಾಲ ಕಾರ್ಮಿಕರ ಸಂಖ್ಯೆ ಕಡಿಮೆಯಗುತ್ತಿದೆ ಎಂದು ಹೇಳಿಕೊಳ್ಳುತ್ತಿದೆ. ಶಾಲೆಯಲ್ಲಿ ಇರಬೇಕಾದ ಮಕ್ಕಳು ವಿವಿಧ ಕಡೆಗಳಲ್ಲಿ ಬಾಲ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಕಾಲಕಾರ್ಮಿಕರ ನಿಗ್ರಹಕ್ಕಾಗಿ ಸರಕಾರದಿಂದ ನೇಮಕಗೊಂಡ ಅಧಿಕಾರಿಗಳ ಪ್ರಾಮಾಣಿಕ ಕಾಳಜಿ ಕೊರತೆ ಪರಿಣಾಮವೇ ಇಂಥ ಮಕ್ಕಳನ್ನು ಮುಖ್ಯವಾಹಿನಿಗೆ ತರುವಲ್ಲಿ ಬದ್ಧತೆಯ ಕೆಲಸವಾಗುತ್ತಿಲ್ಲ.
ಭೀಕರ ಬರದ ಹಿನ್ನೆಲೆಯಲ್ಲಿ ಸಾವಿರಾರು ಬಡ ಕುಟುಂಬಗಳು ಗುಳೆ ಹೋಗಿದ್ದು, ಹಲವು ಕುಟುಂಬಗಳ ಮಕ್ಕಳು ವಾರ್ಷಿಕ ಕೂಲಿ ಹೆಸರಿನ ಜೀತಕ್ಕಿದ್ದು, ಕುರಿ, ಮೇಕೆ, ದನ ಕಾಯುತ್ತಿದ್ದಾರೆ. ಸುಮಾರು ಮಕ್ಕಳು ಪಾಲಕರೊಂದಿಗೆ ವಲಸೆ ಹೋಗಿ, ಅಲ್ಲಿಯೂ ದುಡಿಯುತ್ತಿದ್ದಾರೆ. ಬಾಲ ಕಾರ್ಮಿಕರ ನಿರ್ಮೂಲನೆಗಾಗಿ ಸರ್ಕಾರದಿಂದ ನಿಯುಕ್ತ ಅಧಿಕಾರಿಗಳು, ಎಲ್ಲ ರೀತಿಯ ಉದ್ಯೋಗಿ-ಉದ್ಯಮಿಗಳು ಮನಸ್ಥಿತಿ ಬದಲಾವಣೆ ಆಗಬೇಕಿದೆ.
ಎಲ್ಲಕ್ಕಿಂತ ಹೆಚ್ಚಾಗಿ ಪಾಲಕರು ತಮ್ಮ ಮಕ್ಕಳ ಭವಿಷ್ಯದ ಕುರಿತು ಪ್ರಾಮಾಣಿಕ ಕಾಳಜಿ ವಹಿಸುವುದು ಇಂದಿನ ಅಗತ್ಯವಾಗಿದೆ ಎಂದು ಮಕ್ಕಳ ಸಹಾಯವಾಣಿ ಜಿಲ್ಲಾ ಸಂಯೋಜಕಿ ಸುನಂದಾ ತೋಳಬಂದಿ ಹೇಳುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್; ಆರೋಪಿ ಸೆರೆಗೆ 3 ತಂಡ ರಚನೆ
Bomb Threat: ಹೋಟೆಲ್, ಶಾಲೆ ಆಯ್ತು, ಈಗ ಬ್ಯಾಂಕ್ಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.