ಉಚಿತ ಬಸ್ ಪಾಸ್ ವಿತರಣೆಗೆ ಒತ್ತಾಯ
Team Udayavani, Jun 12, 2018, 11:43 AM IST
ಬೆಂಗಳೂರು: ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ಮತ್ತು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ ನೇತೃತ್ವದಲ್ಲಿ ವಿವಿಧ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಸೋಮವಾರ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟಿಸಿದರು.
ಈ ಹಿಂದೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ಕೊಡುವುದಾಗಿ ಘೋಷಿಸಿದೆ. ಇಂದು ಪಕ್ಷ ಅಧಿಕಾರದಲ್ಲಿದ್ದರೂ ಪಾಸ್ ವಿತರಿಸಲು ಹಿಂದೇಟು ಹಾಕುತ್ತಿದೆ. ಈಗಾಗಲೇ ತರಗತಿಗಳು ಪ್ರಾರಂಭವಾಗಿದ್ದು, ಹೊಸ ಬಸ್‌ಪಾಸ್ ಸಿಗದೆ ಲಕ್ಷಾಂತರ ವಿದ್ಯಾರ್ಥಿಗಳು ಪ್ರಯಾಣಕ್ಕೆ ನೂರಾರು ರೂ. ವ್ಯಯಿಸುತ್ತಿದ್ದಾರೆ.
ಈ ಹಿನ್ನಲೆಯಲ್ಲಿ ಸಮ್ಮಿಶ್ರ ಸರ್ಕಾರ ಕೂಡಲೇ ಉಚಿತ ಬಸ್‌ಪಾಸ್ ವಿತರಣೆಗೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸಂಘಟನೆ ಜಿಲ್ಲಾ ಕಾರ್ಯದರ್ಶಿ ಅಜಯ್ ಕಾಮತ್, ಜಯಣ್ಣ, ಶಾಂತ, ಅಜಯ್ ಕಾಮತ್, ಕೃಷ್ಣ, ರವಿನಂದನ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Puttur: ಕಲ್ಪವೃಕ್ಷಕ್ಕೆ ಮರುಜೀವವಿತ್ತ ಎಂಜಿನಿಯರ್
Hukkeri: ಮೀನಿನ ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು
Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್ ಸ್ಟಾರ್
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.