ಚಾಮುಂಡೇಶ್ವರಿಯ ಸೋಲು ನನಗೆ ಶಾಕಿಂಗ್ ಅಲ್ಲ: ಸಿದ್ದು
Team Udayavani, Jun 14, 2018, 6:00 AM IST
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿನ ನನ್ನ ಸೋಲು ಮಾಧ್ಯಮಗಳಿಗೆ ಶಾಕಿಂಗ್ ಆಗಿರಬಹುದು, ನನಗೆ ಶಾಕಿಂಗ್ ಅಲ್ಲ. ಜನರ ತೀರ್ಪನ್ನು
ಒಪ್ಪಿಕೊಂಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿ, ಚುನಾವಣೆಯ ಸೋಲಿನಿಂದ ಎದೆಗುಂದಿಲ್ಲ. ಆದರೆ, ಮುಖ್ಯಮಂತ್ರಿಯಾಗಿ ಇಷ್ಟೆಲ್ಲಾ
ಕೆಲಸ ಮಾಡಿದರೂ ಜನತೆ ಯಾಕೆ ಒಪ್ಪಿಕೊಳ್ಳಲಿಲ್ಲ ಎಂಬ ನೋವಿದೆ ಎಂದರು. ಕಾಂಗ್ರೆಸ್‌ನಲ್ಲಿ ಅತೃಪ್ತರು ಯಾರೂ ಇಲ್ಲ. ಸಚಿವ ಸಂಪುಟ ವಿಸ್ತರಣೆ ನಂತರ ಎಂ.ಬಿ.ಪಾಟೀಲ್, ಬಿ.ಸಿ.ಪಾಟೀಲ್, ಸುಧಾಕರ್, ಎಂ.ಟಿ.ಬಿ.ನಾಗರಾಜ್, ಸಂಗಮೇಶ್, ಈಶ್ವರ ಖಂಡ್ರೆ, ಎಸ್.ಆರ್.ಪಾಟೀಲ್ ಸೇರಿದಂತೆ ಎಲ್ಲರ ಜೊತೆಯೂ ಮಾತನಾಡಿದ್ದೇನೆ. ಯಾರೂ ಅಸಮಾಧಾನ ವ್ಯಕ್ತಪಡಿಸಿಲ್ಲ. ಹಣ, ಅಧಿಕಾರ ಕೊಡುತ್ತೇವೆ ಎಂದು ಬಿಜೆಪಿಯವರು ನಮ್ಮ ಶಾಸಕರಿಗೆ ದೂರವಾಣಿ ಕರೆ ಮಾಡಿ ಸೆಳೆಯಲು ಪ್ರಯತ್ನ ಮಾಡಿದ್ದಾರೆ. ಅವರು ಆಮಿಷ ಒಡ್ಡಿದ್ದನ್ನು ಬಿ.ಸಿ.ಪಾಟೀಲ್, ರಹೀಂಖಾನ್ ರೆಕಾರ್ಡ್
ಮಾಡಿಕೊಂಡಿದ್ದಾರೆ. ಜನಾರ್ದನರೆಡ್ಡಿ, ಶ್ರೀರಾಮುಲು ಬಹಳ ಪ್ರಯತ್ನ ಮಾಡಿದ್ದರು. ಬಿಡದಿಯ ಈಗಲ್‌ಟನ್ ರೆಸಾರ್ಟ್‌ನಲ್ಲಿ ನಮ್ಮ ಶಾಸಕರು ಉಳಿದುಕೊಂಡಿದ್ದಾಗ ಜನಾರ್ದನ ರೆಡ್ಡಿ ಕಡೆಯವರು ಅಲ್ಲಿಗೂ ಬಂದಿದ್ದರು, ಅವರು ಎಷ್ಟೇ ಆಮಿಷ ಒಡ್ಡಿದರು ನಮ್ಮ ಶಾಸಕರ್ಯಾರು ಬಿಜೆಪಿ ಜೊತೆಗೆ ಹೋಗಲ್ಲ ಎಂದರು.
ಜನರೇ ಟೋಪಿ ಹಾಕಿದ್ದಾರೆ ಬಿಡಪ್ಪಾ: ಮಂಗಳವಾರ ತವರಿಗೆ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ಅಭಿಮಾನಿಯೊಬ್ಬ ಮೈಸೂರು ಪೇಟಾ
ತೊಡಿಸಿ ಗೌರವಿಸಲು ಬಂದಾಗ, “ಇದೆಲ್ಲಾ ಯಾಕಪ್ಪ, ಜನರೇ ಟೋಪಿ ಹಾಕಿದ್ದಾರೆ’ ಎಂದು ಪರೋಕ್ಷವಾಗಿ ಚುನಾವಣೆ ಸೋಲಿನ ಕಹಿಯನ್ನು ಹೊರ ಹಾಕಿದರು. ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಏರ್ಪಡಿಸಿದ್ದ ವರುಣಾ ಕ್ಷೇತ್ರದ ಮತದಾರರಿಗೆ ಕೃತಜ್ಞತಾ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನೂತನ ಶಾಸಕ ಡಾ.ಯತೀಂದ್ರ ಅವರನ್ನು ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Monkey disease: ಶೀಘ್ರ ಶಿರಸಿಗೆ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ
Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..
Ullal: ಬಾವಿ, ಬೋರ್‌ವೆಲ್‌ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್‌ಲೈನ್
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.