ತೆಲುಗು, ಮಲಯಾಳಂಗೆ ರಘು ದೀಕ್ಷಿತ್
Team Udayavani, Jun 13, 2018, 11:09 AM IST
ಕಳೆದ ವರ್ಷ ಬಿಡುಗಡೆಯಾದ “ಹ್ಯಾಪಿ ನ್ಯೂ ಇಯರ್’ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದರು ರಘು ದೀಕ್ಷಿತ್. ಅದಾದ ಮೇಲೆ “ಆರ್ಕೆಸ್ಟ್ರಾ’, “ಗರುಡ’ ಸೇರಿದಂತೆ ಇನ್ನೊಂದಿಷ್ಟು ಚಿತ್ರಗಳಿಗೆ ಕೆಲಸ ಮಾಡುತ್ತಿರುವುದಾಗಿ ಅವರು ಹೇಳಿದ್ದರು. ಅದ್ಯಾಕೋ, “ಹ್ಯಾಪಿ ನ್ಯೂ ಇಯರ್’ ನಂತರ ಅವರು ಸಂಗೀತ ನಿರ್ದೇಶಿಸಿರುವ ಯಾವೊಂದು ಚಿತ್ರವೂ ಬಿಡುಗಡೆಯಾಗಲೇ ಇಲ್ಲ.
ಹಾಗೆ ಬಿಡುಗಡೆಯಾಗುವುದಕ್ಕಿಂತ ಮುನ್ನವೇ ರಘು ಸದ್ದಿಲ್ಲದೆ ತೆಲುಗು ಮತ್ತು ಮಲಯಾಳಂಗೆ ಹಾರಿದ್ದಾರೆ. ಹೌದು, ರಘು ದೀಕ್ಷಿತ್ ಇದೀಗ ತೆಲುಗು ಮತ್ತು ಮಲಯಾಳಂ ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ವಿಜಯ್ ವೇಲಕಂಠಿ ನಿರ್ದೇಶಿಸಿರುವ “ವೈಫ್ ಆಫ್ ರಾಮ್’ ಎಂಬ ಚಿತ್ರಕ್ಕೆ ರಘು ದೀಕ್ಷಿತ್ ಸಂಗೀತ ಸಂಯೋಜಿಸಿದ್ದಾರೆ. ಇದೊಂದು ಥ್ರಿಲ್ಲರ್ ಚಿತ್ರವಾಗಿದ್ದು, ಮೋಹನ್ ಬಾಬು ಅವರ ಮಗಳು ಲಕ್ಷ್ಮೀ ಮಂಚು ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ.
ಈ ಚಿತ್ರದ ಟ್ರೇಲರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಇದಲ್ಲದೆ ಅವರು ಮಲಯಾಳಂನಲ್ಲಿ “ಕೂಡೆ’ ಎಂಬ ಚಿತ್ರಕ್ಕೂ ಸಂಗೀತ ಸಂಯೋಜಿಸುತ್ತಿದ್ದಾರೆ. ಈ ಚಿತ್ರವನ್ನು ಅಂಜಲಿ ಮೆನನ್ ಎನ್ನುವವರು ನಿರ್ದೇಶಿಸಿದ್ದು, ಚಿತ್ರಕ್ಕೆ ಇಬ್ಬರು ಸಂಗೀತ ಸಂಯೋಜಿಸುತ್ತಿದ್ದಾರೆ. ಚಿತ್ರದ ನಾಲ್ಕು ಹಾಡುಗಳು ಮತ್ತು ಹಿನ್ನೆಲೆ ಸಂಗೀತವನ್ನು ರಘು ದೀಕ್ಷಿತ್ ಸಂಯೋಜಿಸಿದರೆ, ಹಿರಿಯ ಸಂಗೀತ ನಿರ್ದೇಶಕ ಎಂ. ಜಯಚಂದ್ರನ್ ಎರಡು ಹಾಡುಗಳನ್ನು ಸಂಯೋಜಿಸುತ್ತಿದ್ದಾರೆ. ಈ ಎರಡೂ ಚಿತ್ರಗಳು ಬಹುತೇಕ ಮುಗಿದಿದ್ದು, ಸದ್ಯದಲ್ಲೇ ಬಿಡುಗಡೆಯಾಗಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?
Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.