ಕಸಾಪಗೆ ಬಜೆಟ್ನಲ್ಲಿ ಪ್ರತ್ಯೇಕ ಅನುದಾನ ಕೋರಿಕೆ
Team Udayavani, Jun 13, 2018, 11:54 AM IST
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿಗೆ ಬಜೆಟ್ನಲ್ಲಿ ಪ್ರತ್ಯೇಕವಾಗಿ ಅನುದಾನ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರಿಗೆ ಪರಿಷತ್ತಿನ ಅಧ್ಯಕ್ಷ ಡಾ. ಮನು ಬಳಿಗಾರ ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿ ಆದ ಬಳಿಕ ಇದೇ ಮೊದಲ ಬಾರಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಕುಮಾರಸ್ವಾಮಿಯವರೊಂದಿಗೆ ಸೌಹಾರ್ದ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಮನು ಬಳಿಗಾರ, ಇದೇ ವೇಳೆ ಕಸಾಪ ಚಟುವಟಿಕೆಗಳಿಗೆ ಸರ್ಕಾರ ನೀಡುತ್ತಿರುವ ಅನುದಾನವನ್ನು ಈ ವರ್ಷದ ಬಜೆಟ್ನಲ್ಲಿ ಪ್ರತ್ಯೇಕವಾಗಿ ಘೋಷಿಸಬೇಕೆಂದು ಮನವಿ ಮಾಡಿದರು.
ತಮ್ಮ ಅಧಿಕಾರವಧಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಶ್ರೀಮಂತವಾಗಲೆಂದು ಕುಮಾರಸ್ವಾಮಿಯವರಿಗೆ ಹಾರೈಸಿದ ಅವರು, ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಹೆಚ್ಚಿನ ಅನುದಾನ ನೀಡಿದ್ದನ್ನು ಸ್ಮರಿಸಿಕೊಂಡರು.
ಪರಿಷತ್ತಿನ ಅಭಿನಂದನೆ ಸ್ವೀಕರಿಸಿ ಮನವಿಯನ್ನು ಆಲಿಸಿದ ಮುಖ್ಯಮಂತ್ರಿ, ನನ್ನ ಸರ್ಕಾರ ಕನ್ನಡ, ಕನ್ನಡಿಗರ ಹಿತವನ್ನು ಸದಾ ಕಾಪಾಡುತ್ತದೆ. ಕನ್ನಡ ಸಾಹಿತ್ಯ ಪರಿಷತ್ತಿನ ಎಲ್ಲ ಕಾರ್ಯಕ್ರಮಗಳಿಗೆ ಬೇಕಾದ ನೆರವು ನೀಡುವುದಾಗಿ ಭರವಸೆ ನೀಡಿದರು ಎಂದು ಮನು ಬಳಿಗಾರ “ಉದಯವಾಣಿ’ಗೆ ತಿಳಿಸಿದರು. ಈ ವೇಳೆ ಕಸಾಪ ಗೌರವ ಕಾರ್ಯದರ್ಶಿ ವ.ಚ. ಚನ್ನೇಗೌಡ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.