ಇಬ್ಬರು ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Team Udayavani, Jun 13, 2018, 1:44 PM IST

m4-jivavdhi.jpg

ಮೈಸೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ ಯುವತಿಯ ನಗದು ಹಾಗೂ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮೈಸೂರು ನ್ಯಾಯಾಲಯ ತೀರ್ಪು ನೀಡಿದೆ. 

ಗುಂಡ್ಲುಪೇಟೆ ತಾಲೂಕು, ಬೇಗೂರು ಹೋಬಳಿ ರಂಗನಾಥಪುರ ನಿವಾಸಿಗಳಾದ ಸ್ವಾಮಿ ಮತ್ತು ಶಂಕರ, ಜೀವಾವಧಿ ಶಿಕ್ಷೆಗೊಳಗಾದ ಆರೋಪಿಗಳು. ರಂಗನಾಥಪುರದ ಪುಟ್ಟಮ್ಮಣ್ಣಿ ಎಂಬಾಕೆಯನ್ನು ಪ್ರೀತಿಸುವ ನಾಟಕವಾಡಿದ್ದ ಸ್ವಾಮಿ, ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿದ್ದ.

ಆದರೆ ಇದಕ್ಕೆ ಪುಟ್ಟಮ್ಮಣ್ಣಿ ಅವರ ತಾಯಿ ಹಾಗೂ ಅಣ್ಣ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ತಂಗಿಗೆ ಒಳ್ಳೆಯ ಸಂಬಂಧ ಹುಡುಕುವ ಆಸೆ ಹೊತ್ತಿದ್ದ ಅಣ್ಣ ಮಂಜುನಾಥ್‌, ತಂಗಿ ಪುಟ್ಟಮ್ಮಣ್ಣಿಗಾಗಿ ಆಭರಣಗಳನ್ನು ಮಾಡಿಸಿ, 50 ಸಾವಿರ ರೂ. ಹಣವನ್ನು ಮನೆಯಲ್ಲಿಟ್ಟಿದ್ದ.

ಈ ವಿಷಯ ತಿಳಿದ ಆರೋಪಿ ಸ್ವಾಮಿ, ಮದುವೆಯಾಗುವುದಾಗಿ ನಂಬಿಸಿ, ಹಣ ಮತ್ತು ಆಭರಣದೊಂದಿಗೆ ಬರುವಂತೆ ಹೇಳಿ 2014ರ ಜನವರಿ 6ರಂದು ಪುಟ್ಟಮ್ಮಣ್ಣಿಯನ್ನು ಕರೆಸಿಕೊಂಡಿದ್ದಾನೆ. ನಂತರ ತನ್ನ ಸಹಚರರಾದ ಶಂಕರ ಹಾಗೂ ಮತ್ತೋರ್ವ ಅಪ್ರಾಪ್ತನ ನೆರವಿನಿಂದ ಆಕೆಯನ್ನು ನಂಜನಗೂಡಿನ ಸಮೀಪ ಆಕೆಯನ್ನು ಹತ್ಯೆ ಮಾಡಿ, 50 ಸಾವಿರ ರೂ. ನಗದು ಹಾಗೂ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದರು. 

ಈ ನಡುವೆ ತಂಗಿ ಪುಟ್ಟಮ್ಮಣ್ಣಿ¡ ನಾಪತ್ತೆಯಾದ ಬಗ್ಗೆ ಗುಂಡ್ಲುಪೇಟೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು. ನಂತರ ಕೊಳೆತ ಸ್ಥಿತಿಯಲ್ಲಿ ನಂಜನಗೂಡಿನ ಸಮೀಪ ದೊರೆತ ದೇಹ ಪುಟ್ಟಮ್ಮಣ್ಣಿಯದು ಎಂದು ಗುರುತು ಪತ್ತೆ ಮಾಡಿ ಪೊಲೀಸರು ಮೃತದೇಹವನ್ನು ಕುಟುಂಬಸ್ಥರಿಗೆ ಒಪ್ಪಿಸಿದ್ದರು.

ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದ ನಂಜನಗೂಡು ಪಟ್ಟಣ ಠಾಣೆ ಪೊಲೀಸರು ಸೂಕ್ತ ತನಿಖೆ ನಡೆಸಿ ಆರೋಪಿಗಳಾದ ಸ್ವಾಮಿ, ಶಂಕರ ಹಾಗೂ ಮತ್ತೋರ್ವನನ್ನು ಬಂಧಿಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆ ನಡೆಸಿದ ಮೈಸೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯ ಕುಮಾರ್‌ ಎಂ. ಆನಂದ ಶೆಟ್ಟಿ ಅವರು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಆನಂದಕುಮಾರ್‌ ವಾದ ಮಂಡಿಸಿದ್ದರು. 

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.