“ಎಂ.ಬಿ.ಪಾಟೀಲ್ ಕಾಂಗ್ರೆಸ್ ಬಿಟ್ಟು ಹೊರಬರಲಿ’
Team Udayavani, Jun 14, 2018, 6:25 AM IST
ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು ಎಂಬ ಕಾರಣಕ್ಕೆ ಎಂ.ಬಿ.ಪಾಟೀಲ್‌ಗೆ ಸಚಿವ ಸ್ಥಾನ ನೀಡದೆ ಕಾಂಗ್ರೆಸ್ ನಾಯಕರು ವಂಚಿಸಿದ್ದು, ಈ ಕೂಡಲೇ ಅವರು ಕಾಂಗ್ರೆಸ್ ಪಕ್ಷ ಬಿಟ್ಟು ಹೊರ ಬರಬೇಕು ಎಂದು ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಆಗ್ರಹಿಸಿದ್ದಾರೆ.
ಎಂ.ಬಿ.ಪಾಟೀಲ್ ಸಚಿವ ಸ್ಥಾನ ನೀಡದೆ ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್ ಅವಮಾನ ಮಾಡಿದೆ. ಇವರೊಂದಿಗೆ ಉತ್ತರ ಕರ್ನಾಟಕ ಪ್ರಭಾವಿ ಶಾಸಕ ಹಾಗೂ ಪ್ರಗತಿಪರ ಕೆಲಸಗಳಿಗೆ ಆದ್ಯತೆ ನೀಡಿರುವ ಸತೀಶ್ ಜಾರಕಿಹೊಳಿ ಅವರಿಗೂ ಸಚಿವ ಸ್ಥಾನ ನೀಡದಿರುವುದು ಖಂಡನೀಯ ಎಂದರು.
ಈ ಹಿಂದಿನ ಸಿದ್ದರಾಮಯ್ಯ ಅವರ ಸರಕಾರವು ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಬೇಕು ಎಂದು ಸಲ್ಲಿಸಿದ್ದ ಕಡತವನ್ನು ಕೇಂದ್ರ ಸರಕಾರ ವಾಪಸು ಕಳಿಸಿದೆ ಎಂದು ಮಾಧ್ಯಮಗಳು ವರದಿ ಪ್ರಕಟಿಸಿವೆ. ಆದರೆ ಕೇಂದ್ರದಿಂದ ಯಾವುದೇ ಕಡತ ವಾಪಸು ಬಂದಿಲ್ಲ ಹಾಗೂ ಅದಕ್ಕೆ ಸಂಬಂಧಿಸಿದಂತೆ ಯಾವುದೇ ಪತ್ರವನ್ನು ಕೇಂದ್ರ ಸರಕಾರ ಕಳಿಸಿಲ್ಲ ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಸ್ಪಷ್ಟ ಪಡಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ
Power Prayers: ಡಿಸಿಎಂ ಟೆಂಪಲ್ ರನ್ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.