ಪೌರಕಾರ್ಮಿಕರ ಮರು ನೇಮಿಸಿ
Team Udayavani, Jun 14, 2018, 9:59 AM IST
ಶಹಾಬಾದ: ನಗರಸಭೆಯಿಂದ ತೆಗೆದು ಹಾಕಿದ ದಿನಗೂಲಿ ಪೌರಕಾರ್ಮಿಕರು ಹಾಗೂ ವಿವಿಧ ಹಂತದ ಸಿಬ್ಬಂದಿಗಳನ್ನು ಕೆಲಸಕ್ಕೆ ತೆಗೆದುಕೊಂಡು ಕಾಯಂಗೊಳಿಸಬೇಕೆಂದು ಒತ್ತಾಯಿಸಿ ಬುಧವಾರ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ನಗರಸಭೆ ಮುಂಭಾಗದಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದರು.
ನಂತರ ಮಾತನಾಡಿದ, ಕರ್ನಾಟಕ ರಾಜ್ಯ ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಕೃಷ್ಣಪ್ಪ ಕರಣಿಕ್ ಜಿಲ್ಲೆಯಲ್ಲಿಯೇ ದೊಡ್ಡ ನಗರವಾದ ಶಹಾಬಾದನಲ್ಲಿ ಸುಮಾರು 50 ಸಾವಿರಕ್ಕಿಂತ ಹೆಚ್ಚು ಜನಸಂಖ್ಯೆಯಿದೆ. ಅಲ್ಲದೇ ಜಿಲ್ಲೆಯಲ್ಲಿಯೇ ಏಕೈಕ ನಗರಸಭೆ ಹೊಂದಿದೆ. ರಾಜ್ಯ ಪೌರಾಡಳಿತ ಇಲಾಖೆ ನಗರಸಭೆಗೆ ನೂರು ಜನ ಪೌರಕಾರ್ಮಿಕರು, ಕರವಸೂಲಿಗಾರರು, ವಾಲ್ ಮ್ಮಾನಗಳು ಹಾಗೂ ವಿವಿಧ ಹಂತದ ಸಿಬ್ಬಂದಿಗಳನ್ನು ತುಂಬಬೇಕೆಂಬ ಆದೇಶವಿದೆ.
ಆದರೆ ಇಲ್ಲಿನ ಪೌರಾಯುಕ್ತರ ಬೇಜವಾಬ್ದಾರಿತನದಿಂದ ಸುಮಾರು 17-18 ವರ್ಷಗಳಿಂದ ದಿನಗೂಲಿ ನೌಕರರಾಗಿ
ಕೆಲಸ ಮಾಡಿದ ಪೌರಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಲಾಗಿದೆ. ಇದರಿಂದ ಪೌರಕಾರ್ಮಿಕರ ಬದುಕು ಬೀದಿ
ಪಾಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಪ್ರಭಾರಿ ಪ್ರೊಜೆಕ್ಟ್ ಡೈರಕ್ಟರ್ ಶಿವನಗೌಡ ಸತ್ಯಾಗ್ರಹ ಸ್ಥಳಕ್ಕೆ ಬೇಟಿ ನೀಡಿ, ಪೌರಕಾರ್ಮಿರ
ಸಮಸ್ಯೆಯನ್ನು ಜಿಲ್ಲಾಧಿಕಾರಿಗಳ ಜತೆ ಮಾತನಾಡಿ ವಾಸ್ತವ ಸ್ಥಿತಿಯ ಬಗ್ಗೆ ವಿವರಿಸುತ್ತೇನೆ. ಗುರುವಾರ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ನಿಯೋಗದೊಂದಿಗೆ ಬಂದು ಮಾತನಾಡಿ, ನಿಮ್ಮ ಸಮಸ್ಯೆ ಪರಿಹರಿಸುತ್ತಾರೆ ಎಂದರು. ಪಟ್ಟು ಬಿಡದ ಪ್ರತಿಭಟನಾಕಾರರು ಲಿಖೀತವಾಗಿ ಬರೆದುಕೊಡಿ ಆಗ ಮಾತ್ರ ಸತ್ಯಾಗ್ರಹ ಕೈಬಿಡುತ್ತೇವೆ ಎಂದರು. ಆಗ ಪಿಡಿ ಶಿವನಗೌಡ ಅವರು ಲಿಖೀತವಾಗಿ ಬರೆದು ಕೊಟ್ಟ ನಂತರ ಸತ್ಯಾಗ್ರಹವನ್ನು ಮುಖಂಡರು ಕೈಬಿಟ್ಟರು.
ಪೌರಾಯುಕ್ತ ಬಿ.ಬಸಪ್ಪ, ನಗರಸಭೆ ಅಧ್ಯಕ್ಷೆ ಗೀತಾಸಾಹೇಬಗೌಡ ಬೋಗುಂಡಿ, ಉಪಾಧ್ಯಕ್ಷೆ ಲಕ್ಷ್ಮೀಬಾಯಿ ಕುಸಾಳೆ, ಡಾ| ರಶೀದ್ ಮರ್ಚಂಟ್, ದಸಂಸ ಮುಖಂಡರಾದ ಮಹಾದೇವ ತರನಳ್ಳಿ, ನಗರಸಭೆ ಸದಸ್ಯರಾದ ರಾಮಕುಮಾರ ಸಿಂಘೆ, ಮಲ್ಲಿಕಾರ್ಜುನ ಜಲಂಧರ್,ಶರಣಬಸಪ್ಪ ಪಗಲಾಪುರ, ಸೂರ್ಯಕಾಂತ ಕೋಬಾಳ, ಡಾ| ಅಹ್ಮದ್ ಪಟೇಲ್ ಹಾಗೂ ಪೌರಕಾರ್ಮಿಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.