ಕುಕ್ಕೆ ದೇಗುಲ ಪರಿಸರ: ಚರಂಡಿ ನಿರ್ಮಾಣ, ಹೂಳೆತ್ತುವ ಕಾರ್ಯಕ್ಕೆಚಾಲನೆ

Team Udayavani, Jun 14, 2018, 4:35 PM IST

14-june-16.jpg

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ದೇಗುಲದ ವ್ಯಾಪ್ತಿಯ ಸಂಪರ್ಕ ರಸ್ತೆ ಹಾಗೂ ಬೈಪಾಸ್‌ ರಸ್ತೆಗಳ ಬದಿ ಚರಂಡಿ ತೆಗೆಯುವ ಕಾರ್ಯಕ್ಕೆ ಬುಧವಾರ ನಗರದಲ್ಲಿ ಚಾಲನೆ ದೊರಕಿದೆ. ದೇಗುಲ ಹಾಗೂ ಗ್ರಾ.ಪಂ. ವತಿಯಿಂದ ನಗರದ ಪ್ರಮುಖ ರಸ್ತೆ ಹಾಗೂ ಬೈಪಾಸ್‌ ರಸ್ತೆಗಳ ಬದಿ ಚರಂಡಿ ತೆಗೆಯುವ ಕಾರ್ಯಾಚರಣೆ ಭರದಿಂದ ನಡೆಯುತ್ತಿದೆ.

ದೇಗುಲದ ಕಡೆಯಿಂದ ಕುಮಾರ ಧಾರಾ – ಕಾಶಿಕಟ್ಟೆ ಪ್ರಮುಖ ರಸ್ತೆಯ ಬದಿಯಲ್ಲಿ ಇರುವ ಚರಂಡಿಯ ಹೂಳೆತ್ತುವ ಕಾರ್ಯ ಜೆಸಿಬಿ ಮೂಲಕ ನಡೆಯುತ್ತಿದೆ. ಈ ಮಾರ್ಗದ ಎರಡೂ ಬದಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆ ಮೇಲೆಯೇ ಹರಿದು ದೊಡ್ಡ ರಾದ್ಧಾಂತವಾಗುತ್ತಿತ್ತು. ವಾಹನ ಸಂಚಾರ ಹಾಗೂ ಪಾದಚಾರಿಗಳಿಗೆ, ಶಾಲಾ ಮಕ್ಕಳು ತೊಂದರೆಗೆ ಒಳಗಾಗುತ್ತಿದ್ದರು.

ಕುಮಾರಧಾರಾ ಪ್ರವೇಶ ದ್ವಾರ, ಪೆಟ್ರೋಲ್‌ ಪಂಪ್‌ ಬಳಿ, ಜೂನಿಯರ್‌ ಕಾಲೇಜು ಬಳಿ, ಕೆಎಸ್‌ಎಸ್‌ ಕಾಲೇಜು, ಬಿಲದ್ವಾರ, ಕಾಶಿಕಟ್ಟೆ, ಕೆಎಸ್‌ಆರ್‌ಟಿಸಿ ನಿಲ್ದಾಣ ಮುಖ್ಯ ರಸ್ತೆಗೆ ಸಂಪರ್ಕಿಸುವಲ್ಲಿ ಸಮಸ್ಯೆ ಸೃಷ್ಟಿಯಾಗುತ್ತಿತ್ತು. ದೇಗುಲದ ಕಾಶಿಕಟ್ಟೆ-ಹನುಮನ ಗುಡಿ ಬೈಪಾಸ್‌ ರಸ್ತೆಯಲ್ಲೂ ನೀರು ನುಗ್ಗುತ್ತಿತ್ತು. ಕೆಎಸ್‌ ಆರ್‌ಟಿಸಿ ಬಳಿಯಿಂದ ಆದಿಸುಬ್ರಹ್ಮಣ್ಯ ಹಾಗೂ ಸರ್ಪಸಂಸ್ಕಾರ ಯಾಗ ಶಾಲೆಗೆ ತೆರಳುವ ರಸ್ತೆ, ಆದಿಸುಬ್ರಹ್ಮಣ್ಯ ಮುಂತಾದ ಕಡೆಗಳಲ್ಲಿ ಚರಂಡಿ ವ್ಯವಸ್ಥೆ ಸಮರ್ಪಕವಾಗಿ ರಲಿಲ್ಲ. ಇದನ್ನು ಗಮನಿಸಿದ ದೇಗುಲದ ಆಡಳಿತ ಮಂಡಳಿ ಇದೀಗ ಚರಂಡಿ ನಿರ್ಮಾಣ ಮತ್ತು ಚರಂಡಿಯ ಹೂಳೆತ್ತಿ ಸೂಕ್ತ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಿದೆ. ಗ್ರಾ.ಪಂ. ವತಿಯಿಂದಲೂ ಚರಂಡಿಯ ಹೂಳೆತ್ತುವ ಕಾರ್ಯ ಕೈಗೆತ್ತಿಕೊಂಡಿದ್ದು, ಬಿಲದ್ವಾರ-ವಿದ್ಯಾನಗರ, ದೇವರಗದ್ದೆ, ಆದಿಸುಬ್ರಹ್ಮಣ್ಯ ಮುಂತಾದ ಕಡೆಗೆ ತೆರಳುವ ಕಡೆಗಳಲ್ಲಿ ಹೂಳೆತ್ತುವ ಕೆಲಸ ನಡೆಯುತ್ತಿದೆ.

ಸುದಿನ ವರದಿ
ನಗರದಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಮಳೆಗೆ ಉಂಟಾಗುವ ಸಮಸ್ಯೆ ಕುರಿತು ಉದಯವಾಣಿ ಸುದಿನ ಜೂ. 11ರಂದು ವಿಸ್ತೃತ ವರದಿ ಪ್ರಕಟಿಸಿತ್ತು. ಗ್ರಾ.ಪಂ. ವತಿಯಿಂದ ಚರಂಡಿ ವ್ಯವಸ್ಥೆ ಕುರಿತು ದೇಗುಲಕ್ಕೆ ಮನವಿ ಸಲ್ಲಿಸಲಾಗಿತ್ತು. ಇದೆಲ್ಲದರ ಫಲಶ್ರುತಿ ಎಂಬಂತೆ ಚರಂಡಿ ನಿರ್ಮಾಣ ಮತ್ತು ಹೂಳೆತ್ತುವ ಕಾರ್ಯ ಕ್ಷೇತ್ರ ವ್ಯಾಪ್ತಿಯಲ್ಲಿ ಭರದಿಂದ ನಡೆಯುತ್ತಿದೆ. ಸಾರ್ವಜನಿಕರ ಸುಗಮ ಸಂಚಾರಕ್ಕೆ ನಗರ ತೆರೆದುಕೊಳ್ಳುತ್ತಿದೆ.

ಟಾಪ್ ನ್ಯೂಸ್

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.