ಮಳೆಹಾನಿ,ಕಡಲ್ಕೊರೆತಪ್ರದೇಶಗಳಿಗೆ ಸಚಿವ ದೇಶಪಾಂಡೆ ಭೇಟಿ,ಪರಿಹಾರವಿತರಣೆ
Team Udayavani, Jun 15, 2018, 10:41 AM IST
ಮಹಾನಗರ: ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ಬಿಜೈ ಆನೆಗುಂಡಿ ಪ್ರದೇಶ ಹಾಗೂ ಉಳ್ಳಾಲ ಕಡಲ್ಕೊರೆತ ಪ್ರದೇಶಗಳಿಗೆ ಕಂದಾಯ ಮತ್ತು ಕೌಶಲಾಭಿವೃದ್ಧಿ ಸಚಿವ ಆರ್.ವಿ. ದೇಶಪಾಂಡೆ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಿಜೈ ಆನೆಗುಂಡಿ ಎಂಬಲ್ಲಿ ಮರ ಬಿದ್ದು ಬಹುತೇಕವಾಗಿ ಹಾನಿಗೊಳಗಾಗಿರುವ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಬಳಿಕ ತುರ್ತು ಪರಿಹಾರವಾಗಿ ತಲಾ 1ಲಕ್ಷ 19 ಸಾವಿರ ರೂ.ಗಳನ್ನು ಆ ಮನೆಗಳ ಮಾಲಕರಾದ ಭವಾನಿ ಹಾಗೂ ಅನುರಾಧಾ ಎಂಬವರಿಗೆ ಹಸ್ತಾಂತರಿಸಿದರು.
ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾಗಿ ಸಾಕಷ್ಟು ಹಾನಿಯಾಗಿದೆ. ತುರ್ತು ಪರಿಹಾರಕ್ಕಾಗಿ 2 ಜಿಲ್ಲೆಗಳಿಗೆ ತಲಾ 3 ಕೋ. ರೂ. ಬಿಡುಗಡೆ ಮಾಡಿರುವುದಾಗಿ ಹೇಳಿದರು.
5 ಕೋಟಿ ರೂ. ಮೀಸಲಿಡಲು ಸೂಚನೆ
ಪ್ರಾಕೃತಿಕ ವಿಕೋಪದ ಪರಿಹಾರವಾಗಿ ಪ್ರತಿಯೊಂದು ಜಿಲ್ಲಾಧಿಕಾರಿ ಕನಿಷ್ಠ 5 ಕೋಟಿ ರೂ. ಮೀಸಲಿಡುವಂತೆ ಹಾಗೂ ತುರ್ತು ಪರಿಹಾರ ಕ್ರಮಗಳು ಯುದ್ಧೋ ಪಾದಿಯಲ್ಲಿ ನಡೆಸಲು ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದರು. ಪ್ರಾಕೃತಿಕ ವಿಕೋಪದಿಂದಾಗಿ ಮನೆಗಳಿಗೆ ಸಂಪೂರ್ಣ ಅಥವಾ ಭಾಗಶಃ ಹಾನಿಯಾಗಿದ್ದಲ್ಲಿ ಪರಿಹಾರವಾಗಿ ಸಿಗುವ ಮೊತ್ತ ಕಡಿಮೆ. ಅದನ್ನು ಯಾವ ರೀತಿಯಲ್ಲಿ ಹೆಚ್ಚಿಸಬಹುದು ಎಂಬ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ. ಕೆಲವರು ಬಾಡಿಗೆ ಮನೆಯಲ್ಲಿದ್ದಾರೆ. ಅವರಿಗೆ ಸಿಕ್ಕಿಲ್ಲ. ಅವರಿಗೂ ಯಾವ ರೀತಿಯಲ್ಲಿ ಸಹಾಯ ಮಾಡಲು ಸಾಧ್ಯ ಎಂಬುದನ್ನು ನಿರ್ಣಯಿಸಲಾಗುವುದು ಎಂದು ಹೇಳಿದರು.
ಚಾರ್ಮಾಡಿ ಘಾಟಿಯಲ್ಲಿ ನಿನ್ನೆ ಮತ್ತೆ ಸಮಸ್ಯೆ ಆಗಿದೆ. ಜಿಲ್ಲಾಧಿಕಾರಿ ಈಗಾಗಲೇ ವಾಹನ ಸಂಚಾರವನ್ನು ನಿಷೇಧಿಸಿ ಆದೇಶಿಸಿದ್ದಾರೆ. ಆ ರಸ್ತೆ ಜನ ಸಂಚಾರಕ್ಕೆ ಸುರಕ್ಷಿತವಾದಾಕ್ಷಣ ಬಂದ್ ತೆರವುಗೊಳಿಸಲಾಗುವುದು ಎಂದರು. ನಗರಾಭಿವೃದ್ಧಿ ಸಚಿವ ಖಾದರ್, ಮೇಯರ್ ಭಾಸ್ಕರ ಮೊಲಿ, ವಿ. ಪ. ಸದಸ್ಯ ಹರೀಶ್ ಕುಮಾರ್, ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್, ಮನಪಾ ಆಯುಕ್ತ ಮಹಮ್ಮದ್ ನಝೀರ್, ಶಶಿಧರ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.
ಕಡಲ್ಕೊರೆತ ತಡೆ ಕಾಮಗಾರಿ ವೀಕ್ಷಣೆ
ಬಳಿಕ ಸಚಿವರು ಸೋಮೇಶ್ವರ- ಉಚ್ಚಿಲ ಹಾಗೂ ಉಳ್ಳಾಲದ ಸಮುದ್ರ ತೀರದಲ್ಲಿ ಕಡಲ್ಕೊರೆತ ಸಮಸ್ಯೆ ಪರಿಹಾರಕ್ಕಾಗಿ ನಡೆಸಲಾದ ತಡೆಗೋಡೆ ನಿರ್ಮಾಣ ಕಾಮಗಾರಿ ವೀಕ್ಷಣೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.