ಹಸನಬ್ಬ ಕೊಲೆ ಪ್ರಕರಣ ನ್ಯಾಯಾಂಗ ಬಂಧನ ಜೂ.28ರವರೆಗೆ ವಿಸ್ತರಣೆ
Team Udayavani, Jun 16, 2018, 1:25 PM IST
ಉಡುಪಿ: ಪೆರ್ಡೂರಿನ ಶೇನರಬೆಟ್ಟಿನಲ್ಲಿ ನಡೆದಿದ್ದ ಹಸನಬ್ಬ ಕೊಲೆ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನವನ್ನು ಜೂ.28ರವರೆಗೆ ವಿಸ್ತರಿಸಲಾಗಿದೆ.
ಆರೋಪಿಗಳಾದ ಸುರೇಶ್ ಮೆಂಡನ್, ಪ್ರಸಾದ್ ಕೊಂಡಾಡಿ, ಉಮೇಶ್ ಶೆಟ್ಟಿ, ರತನ್ ಪೂಜಾರಿ, ಚೇತನ್ ಆಚಾರ್ಯ, ಶೈಲೇಶ್ ಶೆಟ್ಟಿ ಮತ್ತು ಗಣೇಶ್ ನಾಯ್ಕ ಅವರನ್ನು ಜೂ.15ರಂದು ಕಾರವಾರ ಕಾರಾಗೃಹದಿಂದ ಹಾಗೂ ಇನ್ನೋರ್ವ ಆರೋಪಿ ದೀಪಕ್ ಹೆಗ್ಡೆ ಅವರನ್ನು ಮಂಗಳೂರು ಜೈಲಿನಿಂದ ಕರೆತಂದು ಉಡುಪಿಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ನ್ಯಾಯಿಕ ದಂಡಾಧಿಕಾರಿ ನ್ಯಾಯಾಲಯದ ನ್ಯಾಯಾಧೀಶ ವಿ.ಎಸ್.ಪಂಡಿತ್ ಅವರ ಮುಂದೆ ಹಾಜರುಪಡಿಸಲಾಯಿತು.
ಪೊಲೀಸ್ ಸಿಬಂದಿ ಗೈರು
ಇತರ ಆರೋಪಿಗಳಾಗಿರುವ ಎಸ್‌ಐ ಡಿ.ಎನ್.ಕುಮಾರ್, ಹೆಡ್‌ಕಾನ್‌ಸ್ಟೆಬಲ್ ಮೋಹನ್ ಕೊತ್ವಾಲ್ ಮತ್ತು ಚಾಲಕ ಗೋಪಾಲ ಅವರು ವೈದ್ಯಕೀಯ ಕಾರಣಗಳಿಂದ ಆಸ್ಪತ್ರೆಗೆ ದಾಖಲಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ನ್ಯಾಯಾಲಯದ ಆವರಣದಲ್ಲಿ ಆರೋಪಿಗಳ ಮನೆಯವರು, ಗೆಳೆಯರು ಹೆಚ್ಚಿನ ಸಂಖ್ಯೆಯಲ್ಲಿದ್ದರು.
ಮಾರಾಟ ಮಾಡಿದ್ದೂ ತಪ್ಪು
ಸ್ಕಾರ್ಪಿಯೋ ವಾಹನದಲ್ಲಿ 13 ದನಗಳನ್ನು ಸಾಗಿಸಲಾಗಿದೆ. ಈ ರೀತಿ ಸಾಗಿಸುತ್ತಾರೆ ಎಂಬುದು ತಿಳಿದೂ ಮಾರಾಟ ಮಾಡಿದವರ ಪೈಕಿ ದೀಪಕ್ ಘಟನೆ ಕುರಿತು ಇತರರಿಗೆ ಆಗಾಗ್ಗೆ ಮೊಬೈಲ್ ಸಂದೇಶಗಳನ್ನು ರವಾನಿಸುತ್ತಿದ್ದರು. ಹಾಗಾಗಿ ಅವರನ್ನು ಕೊಲೆ ಪ್ರಕರಣದಲ್ಲಿಯೂ ಆರೋಪಿಯನ್ನಾಗಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೊಡೆತ ಖಚಿತವಾಗಿಲ್ಲ: ಮರಣೋತ್ತರ ಪರೀಕ್ಷಾ ವರದಿ ಪ್ರಕಾರ ಹಸನಬ್ಬ ತಲೆಗೆ ಪೆಟ್ಟು ಬಿದ್ದು ಮೃತಪಟ್ಟಿದ್ದಾರೆ. ಹಾಗಾಗಿ ಇದೊಂದು ಕೊಲೆ ಪ್ರಕರಣವಾಗಿದೆ. ಆದರೆ ಪೆಟ್ಟು ಕೈಯಿಂದಲೋ, ಕಲ್ಲಿನಿಂದಲೋ ಅಥವಾ ಇತರ ವಸ್ತುಗಳಿಂದಲೋ ಎಂಬುದು ಇನ್ನಷ್ಟೇ ತಿಳಿಯಬೇಕಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.