ಮಣಿಪಾಲ ವೈರಸ್ ಸಂಶೋಧನ ಕೇಂದ್ರ ದೇಶದ ಆಸ್ತಿ
Team Udayavani, Jun 17, 2018, 6:00 AM IST
ಉಡುಪಿ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನ (ಮಾಹೆ)ಯ ಮಣಿಪಾಲ್ ಸೆಂಟರ್ ಫಾರ್ ವೈರಸ್ ರಿಸರ್ಚ್ (ಎಂಸಿವಿಆರ್) ಮತ್ತಷ್ಟು ಅತ್ಯಾಧುನಿಕವಾಗಿ ರೂಪುಗೊಂಡು ತನ್ನ ಸಂಶೋಧನೆ ಮತ್ತು ಆರೋಗ್ಯ ಸೇವೆಯ ಮೂಲಕ ಮುಂದಿನ ದಿನಗಳಲ್ಲಿ ದೇಶದ ಆಸ್ತಿಯಾಗಲಿದೆ ಎಂದು ಮಾಹೆ ಕುಲಪತಿ ಡಾ| ಎಚ್. ವಿನೋದ್ ಭಟ್ ಹೇಳಿದರು.
ಎಂಸಿವಿಆರ್‌ನ 7.43 ಎಕರೆ ಪ್ರದೇಶದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ಅತ್ಯಾಧುನಿಕ ಪ್ರಯೋಗಾಲಯಗಳನ್ನು ಹೊಂದುವ ಮೂಲಕ ವಿಶೇಷವಾಗಿ ವೈರಾಲಜಿ ಸಂಬಂಧಿಸಿದ ಆರೋಗ್ಯ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ಎಂಸಿವಿಆರ್‌ನಿಂದ ದೊರೆಯಲಿದೆ ಎಂದು ಡಾ| ಭಟ್ ಹೇಳಿದರು.
ರಾಷ್ಟ್ರೀಯ ಸಂಶೋಧನ ಪ್ರಾಧ್ಯಾಪಕ ಹಾಗೂ ಮಾಹೆಯ ನಿವೃತ್ತ ಕುಲಪತಿ ಡಾ| ಎ.ಎಸ್. ವಲಿಯತ್ತಾನ್ ಅವರು ಮಾತನಾಡಿ, ವೈರಸ್ ಹಾಗೂ ಪ್ರಾಣಿಗಳಿಂದ ಹರಡುವ ರೋಗಗಳು ಜಗತ್ತಿಗೆ ಸವಾಲಾಗುತ್ತಿರುವ ಈ ಕಾಲಘಟ್ಟದಲ್ಲಿ ಎಂಸಿವಿಆರ್ ಮಹತ್ವದ ಕೊಡುಗೆ ನೀಡುತ್ತಿದೆ ಎಂದು ಹೇಳಿದರು. ಎಂಸಿವಿಆರ್ ಮುಖ್ಯಸ್ಥ ಡಾ| ಅರುಣ್ ಕುಮಾರ್ ಅವರು ಮಾತನಾಡಿ, ಎಂಸಿವಿಆರ್ ದೇಶದಲ್ಲಿ ವೈರಸ್ ರೋಗಗಳ ಪತ್ತೆ ಹಚ್ಚುವ ಮತ್ತು ನಿಯಂತ್ರಣ ಕಾರ್ಯದಲ್ಲಿ ಸರಕಾರಗಳ ಜತೆಗೆ ಮಹತ್ವದ ಜವಾಬ್ದಾರಿ ನಿಭಾಯಿಸುತ್ತಿದೆ ಎಂದರು.
ನಿಫಾ ಪತ್ತೆಯಲ್ಲಿ ಮಹತ್ವದ ಪಾತ್ರ
ಇತ್ತೀಚೆಗೆ ಕೇರಳದಲ್ಲಿ ಹಲವರ ಸಾವಿಗೆ ಕಾರಣವಾಗಿ ಆತಂಕ ಸೃಷ್ಟಿಸಿದ ನಿಫಾ ವೈರಸ್ ಸೋಂಕಿನ ಪತ್ತೆ ಮತ್ತು ನಿಯಂತ್ರಣ ಕಾರ್ಯದಲ್ಲಿ ಎಂಸಿವಿಆರ್ ತಜ್ಞರು ಡಾ| ಅರುಣ್ ಕುಮಾರ್ ಅವರ ನೇತೃತ್ವದಲ್ಲಿ ಮಹತ್ವದ ಪಾತ್ರ ವಹಿಸಿದ್ದರು.
ನಿಫಾ ನಿಯಂತ್ರಣ: ಎಂಸಿವಿಆರ್ ತಂಡ ವಾಪಸ್
ಉಡುಪಿ: ಕೇರಳದಲ್ಲಿ ಹಲವರ ಸಾವಿಗೆ ಕಾರಣವಾಗಿ ಆತಂಕ ಸೃಷ್ಟಿಸಿದ್ದ ನಿಫಾ ವೈರಸ್ ಸೋಂಕು ಈಗ ಸಂಪೂರ್ಣ ನಿಯಂತ್ರಣಕ್ಕೆ ಬಂದಿದ್ದು, ಯಾವುದೇ ಹೊಸ ಪ್ರಕರಣಗಳು ಪತ್ತೆಯಾಗಿಲ್ಲ. ಹಾಗಾಗಿ ಅಲ್ಲಿ ವಿಶೇಷ ಕಾರ್ಯಾಚರಣೆ ನಡೆಯುತ್ತಿಲ್ಲ. ಎಂಸಿವಿಆರ್ ಸಿಬಂದಿ ಕೂಡ ಮಣಿಪಾಲಕ್ಕೆ ವಾಪಸಾಗಿದ್ದಾರೆ. ತಂಡಕ್ಕೆ ಕೇರಳ ಸರಕಾರ ವಿಶೇಷ ಕೃತಜ್ಞತೆ ಸಲ್ಲಿಸಿದೆ ಎಂದು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ತಂಡದ ಹಾಗೂ ಮಣಿಪಾಲ್ ಸೆಂಟರ್ ಫಾರ್ ವೈರಸ್ ರಿಸರ್ಚ್ (ಎಂಸಿವಿಆರ್) ಮುಖ್ಯಸ್ಥ ಡಾ| ಅರುಣ್ ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ʼಭಾರತೀಯ ಸಂಸ್ಕೃತಿ, ಭಗವದ್ಗೀತೆʼ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ
ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ
Dec. 29: ಪಡುಬಿದ್ರಿಯಲ್ಲಿ ಅಂತರ್‌ರಾಜ್ಯ ಬಂಟ ಕ್ರೀಡೋತ್ಸವ – ಎಂಆರ್‌ಜಿ ಟ್ರೋಫಿ
Udupi: ಕಲ್ಸಂಕ ಜಂಕ್ಷನ್; ಹಗಲು-ರಾತ್ರಿ ಟ್ರಾಫಿಕ್ ಕಿರಿಕಿರಿ
Padubidri: ಪಲಿಮಾರು ಉಪ್ಪು ನೀರು ತಡೆ ಅಣೆಕಟ್ಟು ನಾಲ್ಕೇ ವರ್ಷದಲ್ಲಿ ಜೀರ್ಣಾವಸ್ಥೆಗೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Women’s ODI: ಹರ್ಲೀನ್ ಶತಕ; ವಿಂಡೀಸ್ ವಿರುದ್ಧ ಭಾರತಕ್ಕೆ 2-0 ಸರಣಿ ಜಯ
Udupi: ʼಭಾರತೀಯ ಸಂಸ್ಕೃತಿ, ಭಗವದ್ಗೀತೆʼ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.