ನಗರದ ಒಳರಸ್ತೆಗಳಲ್ಲಿ  ಗುಂಡಿಗಳದ್ದೇ ಸಾಮ್ರಾಜ್ಯ


Team Udayavani, Jun 17, 2018, 11:20 AM IST

17-june-3.jpg

ಮಹಾನಗರ: ಮಂಗಳೂರು ಸ್ಮಾರ್ಟ್‌ ಸಿಟಿಯಾಗಲು ಆಯ್ಕೆಗೊಂಡರೂ ಇಲ್ಲಿನ ಮೂಲಸೌಕರ್ಯ ಅಗತ್ಯಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಸ್ಥಳೀಯಾಡಳಿತ, ಜನಪ್ರತಿನಿಧಿಗಳು ವಿಫಲರಾಗಿದ್ದಾರೆ ಎಂಬುದಕ್ಕೆ ನಗರದ ಒಳರಸ್ತೆಗಳೇ ಸಾಕ್ಷಿ. ಮಳೆಗಾಲ ಆರಂಭವಾಗಿ ಕೆಲವೇ ದಿನಗಳಾಗಿವೆ. ಆದರೆ ನಗರದಿಂದ ಒಳರಸ್ತೆಗಳ ಮೂಲಕ ಸಾಗಿದರೆ ಮಳೆಗಾಲ ಆರಂಭವಾಗಿ ಅದೆಷ್ಟೋ ತಿಂಗಳುಗಳಾಗಿವೆ ಎನ್ನುವ ಯೋಚನೆ ನಮ್ಮಲ್ಲಿ ಬಾರದೆ ಇರದು. ಏಕೆಂದರೆ ಬಹುತೇಕ ಒಳರಸ್ತೆಗಳು ಗುಂಡಿ ಬಿದ್ದಿವೆ.

ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆಯಲ್ಲೇ ಹರಿದು ಗುಂಡಿಗಳು ಉದ್ಭವಿಸಿದೆ. ಗುಂಡಿಗಳಲ್ಲಿ ಮಳೆ ನೀರು ನಿಂತು ವಾಹನ ಸವಾರರು ಹಾಗೂ ಪಾದಚಾರಿಗಳು ಪರದಾಡವಂತಾಗಿದೆ. ಈ ಬಗ್ಗೆ ಜನ ಪ್ರತಿನಿಧಿಗಳಲ್ಲಿ ಅಲವತ್ತುಗೊಂಡರೆ ಮಳೆಗಾಲದಲ್ಲಿ ಇದೆಲ್ಲ ಸಹಜ ಎನ್ನುವ ಉದ್ಧಟತನದ ಉತ್ತರ ಸಿಗುತ್ತದೆ. ಇದರಿಂದ ಜನಸಾಮಾನ್ಯರು ತಮ್ಮ ಸಮಸ್ಯೆಗಳ ಕುರಿತಂತೆ ಯಾರಲ್ಲಿ ದೂರು ನೀಡುವುದು ಎಂದು ತಿಳಿಯದೆ ಅಸಹಾಯಕರಾಗಿದ್ದಾರೆ.

ಕುದ್ರೋಳಿ, ಬೋಳಾರ, ಮಠದ ಕಣಿ, ಇನ್ಫೋಸಿಸ್‌, ಮರೋಳಿ, ಕಂಕನಾಡಿ ಬಸ್‌ ನಿಲ್ದಾಣ, ಮಂಗಳಾದೇವಿಯ, ಬಿಜೈ, ಬೋಂದೆಲ್‌ ಸೇರಿದಂತೆ ನಗರದ ಬಹುತೇಕ ಒಳರಸ್ತೆಗಳು ಗುಂಡಿಗಳಿಂದ ಆವೃತಗೊಂಡಿವೆ.

ಕಾಮಗಾರಿಯಿಂದಲೇ ಗುಂಡಿ
ಮಳೆಗಾಲ ಆರಂಭವಾಗುತ್ತಿದ್ದಂತೆ ಬಹುತೇಕ ರಾಷ್ಟ್ರೀಯ ಹೆದ್ದಾರಿ, ಮುಖ್ಯ ರಸ್ತೆಗಳು ಮಾತ್ರವಲ್ಲ ಸರ್ವೀಸ್‌ ರಸ್ತೆಗಳು ಗುಂಡಿಗಳಿಂದ ಆವೃತಗೊಂಡಿವೆ. ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸದೆ ಇರುವುದರಿಂದ ಈ ಸಮಸ್ಯೆ ಸೃಷ್ಟಿಯಾಗಿದೆ ಎಂಬುದು ಒಂದುವಾದರೆ, ಮಳೆಗಾಲ ಆರಂಭಕ್ಕೂ ಮುನ್ನ ಸ್ಥಳೀಯಾಡಳಿತ ನಡೆಸಿದ ಕಾಮಗಾರಿಗಳೇ ರಸ್ತೆಗಳಲ್ಲಿ ಗುಂಡಿ ಬೀಳಲು ಮುಖ್ಯ ಕಾರಣ ಎನ್ನುವ ವಾದವೂ ಇದೆ. ಬೋಳಾರ, ಕುದ್ರೋಳಿಯ ಕೆಲವು ಭಾಗಗಳಲ್ಲಿ ಮಳೆಗಾಲಕ್ಕೂ ಮುನ್ನವೇ ಚರಂಡಿ ಸೇರಿದಂತೆ ಇನ್ನಿತರ ಕಾಮಗಾರಿಗಾಗಿ ಮಣ್ಣು ಅಗೆದು ಹಾಕಿದ್ದಾರೆ. ಇದರಿಂದ ನೀರು ಹೋಗಲು ಜಾಗವಿಲ್ಲದೆ ರಸ್ತೆಗಳಲ್ಲಿ ಗುಂಡಿಗಳಾಗಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಚರಂಡಿಗಳಲ್ಲಿ ಎದ್ದಿದೆ ಪೊದೆಗಳು
ಇನ್ನು ಕೆಲವು ಭಾಗಗಳಲ್ಲಿ ಚರಂಡಿಗಳಲ್ಲಿ ಪೊದೆಗಳೇ ಎದ್ದಿದ್ದು, ಅದನ್ನು ಸ್ವಚ್ಛಗೊಳಿಸಲು ಪಾಲಿಕೆ ವಿಫಲವಾಗಿದೆ. ಚರಂಡಿಗಳ ಹೂಳೆತ್ತುವಿಕೆ, ಸ್ವಚ್ಛಗೊಳಿಸುವುದರಲ್ಲಿ ಪಾಲಿಕೆ ತೋರುತ್ತಿರುವ ನಿರಾಸಕ್ತಿಯಿಂದ ಮಳೆಗಾಲದಲ್ಲಿ ಸಾಮಾನ್ಯ ಜನರು ಕಷ್ಟ ಅನುಭವಿಸುವ ಸ್ಥಿತಿ ನಿರ್ಮಾಣವಾಗಿದೆ. ಸುರತ್ಕಲ್‌ನ ತಡಂಬೈಲಿನ ಚರಂಡಿಯನ್ನು ಐದು ವರ್ಷಗಳಿಂದ ಸ್ವತ್ಛಗೊಳಿಸಿಲ್ಲ. ಪ್ರತಿ ವರ್ಷವೂ ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿದೆ. ದೂರು ಕೊಟ್ಟರೂ ಕೇಳುವವರೇ ಇಲ್ಲ ಎನ್ನುವುದು ಈ ಭಾಗದ ಜನರ ಅಳಲು.

ಘನವಾಹನಗಳ ಸಂಚಾರದಿಂದ ಇನ್ನಷ್ಟು ಗುಂಡಿ
ಕುದ್ರೋಳಿ, ಬಂದರು ಸೇರಿದಂತೆ ಕೆಲವು ಭಾಗಗಳಲ್ಲಿ ಗುಜರಿ ಸಾಮನು, ಮೀನು ಸೇರಿದಂತೆ ಇತರ ಸಾಮನುಗಳನ್ನು ಕೊಂಡೊಯ್ಯುವ ಲಾರಿಗಳು ಓಡಾಟ ನಡೆಸುವುದರಿಂದ ರಸ್ತೆಗಳಲ್ಲಿ ಗುಂಡಿಗಳು ಸೃಷ್ಟಿಯಾಗುತ್ತಿವೆ. ಅನಿವಾರ್ಯ ಸ್ಥಳಗಳಲ್ಲಿ ಹೊರತುಪಡಿಸಿ ಇನ್ನುಳಿದ ಒಳರಸ್ತೆಗಳಲ್ಲಿ ಘನ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಬೇಕು ಎಂದು ಬೋಳಾರದ ನಿವಾಸಿಯೊಬ್ಬರು ತಿಳಿಸಿದ್ದಾರೆ.

ಚರಂಡಿ ಸ್ವಚ್ಛಗೊಳಿಸುವುದೇ ಸೂಕ್ತ ದಾರಿ
ಮಳೆಗಾಲದಲ್ಲಿ ರಸ್ತೆಗಳಲ್ಲಿ ನೀರು ಹರಿಯುವುದು ಸೇರಿದಂತೆ ಬಹುತೇಕ ಸಮಸ್ಯೆಗಳ ಪರಿಹಾರಕ್ಕೆ ಮಳೆಗಾಲ ಆರಂಭವಾಗುವ ಮುನ್ನವೇ ಚರಂಡಿಗಳನ್ನು ಸ್ವಚ್ಛಗೊಳಿಸುವುದೊಂದೆ ಪರಿಹಾರ.
 - ಶಿವರಾಮ್‌
    ಸುರತ್ಕಲ್‌

ಮಳೆ ಬಂದ ಮೇಲೆ ಕಾಮಗಾರಿ ಯೋಚನೆ
ಮಳೆಗಾಲ ಆರಂಭವಾದ ಬಳಿಕ ರಸ್ತೆ, ಚರಂಡಿ ಕಾಮಗಾರಿಗಳನ್ನು ಆರಂಭಿಸುತ್ತಾರೆ. ಇದರಿಂದ ಸ್ಥಳೀಯರು, ವಾಹನ ಸವಾರರು ತೊಂದರೆ ಅನುಭವಿಸುತ್ತಾರೆ. ಯಾವುದೇ ಕಾಮಗಾರಿ ನಡೆಸಬೇಕಾದರೆ ಸೂಕ್ತ ಯೋಜನೆ ರೂಪಿಸಬೇಕು.
 - ಲಕ್ಷ್ಮಮ್ಮ
ಕುದ್ರೋಳಿ ನಿವಾಸಿ

ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.