ನಮ್ಮ ಮೆಟ್ರೋಗೆ ವರ್ಷದ ಹರ್ಷ

Team Udayavani, Jun 17, 2018, 11:26 AM IST

namma-metro.jpg

ಬೆಂಗಳೂರು: “ನಮ್ಮ ಮೆಟ್ರೋ’ ಮೊದಲ ಹಂತ ಪೂರ್ಣ ಪ್ರಮಾಣದಲ್ಲಿ ಕಾರ್ಯರಂಭ ಮಾಡಿ ಭಾನುವಾರ ಒಂದು ವರ್ಷ ತುಂಬಲಿದೆ. ಹೀಗಾಗಿ, ಎಲ್ಲ ನಿಲ್ದಾಣಗಳಲ್ಲಿ ಮತ್ತು ಮೆಟ್ರೋ ರೈಲುಗಳಲ್ಲಿ ಹರ್ಷ ಮನೆ ಮಾಡಿದೆ.

2017ರ ಜೂನ್‌ 17ರಂದು 42.3 ಕಿ.ಮೀ ಉದ್ದದ ಮೊದಲ ಹಂತದ ಮೆಟ್ರೋ ಸೇವೆಯನ್ನು ಅಂದಿನ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಲೋಕಾರ್ಪಣೆ ಮಾಡಿದ್ದರು. ಈಗ ಆ ಸೇವೆಗೆ ಒಂದು ವರ್ಷ ತುಂಬಿದ್ದು, ಸಂಭ್ರಮಾಚರಣೆಗೆ ಭರದ ಸಿದ್ಧತೆ ನಡೆದಿದೆ. ಈ ಮಧ್ಯೆ ಮೆಟ್ರೋ ರೈಲು ಮತ್ತು ನಿಲ್ದಾಣಗಳಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿ)ದಿಂದ ಪ್ರಯಾಣಿಕರಿಗೆ ಕೃತಜ್ಞತೆ ಸಲ್ಲಿಸುವ ಫ‌ಲಕಗಳು ಕೂಡ ರಾಜಾಜಿಸುತ್ತಿವೆ.  

ನಗರದ ನಾಲ್ಕು ದಿಕ್ಕುಗಳಿಗೂ ಸಂಪರ್ಕ ಕಲ್ಪಿಸುವ “ನಮ್ಮ ಮೆಟ್ರೋ’ ಅಲ್ಪಾವಧಿಯಲ್ಲಿ ಬೆಂಗಳೂರಿಗರ ಸಂಚಾರ ನಾಡಿ ಆಗಿದೆ. ನಿತ್ಯ ಲಕ್ಷಾಂತರ ಜನ ಈ ರೈಲುಗಳಲ್ಲಿ ಸಂಚರಿಸುತ್ತಿದ್ದು, ಕೋಟ್ಯಂತರ ಆದಾಯ ಹರಿದುಬರುತ್ತಿದೆ. ಪ್ರಯಾಣಿಕರ ದಟ್ಟಣೆ ಅವಧಿಯಲ್ಲಿ ಪ್ರತಿ ನಾಲ್ಕು ನಿಮಿಷಕ್ಕೊಂದು ಮೆಟ್ರೋ ಕಾರ್ಯಾಚರಣೆ ಆಗುತ್ತಿದೆ. ಈಗ ನಿರೀಕ್ಷೆ ಮೀರಿ ಜನ ಮೆಟ್ರೋದತ್ತ ಹರಿದುಬರುತ್ತಿದ್ದು, ಬೋಗಿಗಳು ತುಂಬಿತುಳುಕುವುದರಿಂದ ಕಿರಿಕಿರಿ ಕೂಡ ಅನುಭವಿಸುವಂತಾಗಿದೆ.

ಈ ಹಿನ್ನೆಲೆಯಲ್ಲಿ ಬೋಗಿಯ ಮೊದಲೆರಡು ಪ್ರವೇಶ ದ್ವಾರಗಳನ್ನು ಮಹಿಳೆಯರಿಗಾಗಿಯೇ ಮೀಸಲಿಡಲಾಗಿದೆ. ಈಗ ಇನ್ನೂ ಒಂದು ಹೆಜ್ಜೆ ಮುಂದೆಹೋಗಿ ಬಿಎಂಆರ್‌ಸಿಯು ಮೆಟ್ರೋ ರೈಲನ್ನು ಮೂರರಿಂದ ಆರು ಬೋಗಿಗಳಿಗೆ ವಿಸ್ತರಿಸಲು ನಿರ್ಧರಿಸಿದೆ. ಈಗಾಗಲೇ ಮೊದಲ ಹಂತದಲ್ಲಿ ಆರು ಬೋಗಿಗಳ ಮೆಟ್ರೋ ಪ್ರಾಯೋಗಿಕ ಸಂಚಾರ ಆರಂಭಿಸಿದ್ದು, ಶೀಘ್ರದಲ್ಲೇ ವಾಣಿಜ್ಯ ಸೇವೆಗೆ ಮುಕ್ತಗೊಳ್ಳಲಿದೆ.

ಅಂದಹಾಗೆ, ನಗರದಲ್ಲಿ ಮೆಟ್ರೋ ಮೊದಲ ಬಾರಿಗೆ ಸಂಚಾರ ಆರಂಭಿಸಿದ್ದು ಎಂ.ಜಿ. ರಸ್ತೆ-ಬೈಯಪ್ಪನಹಳ್ಳಿ (6 ಕಿ.ಮೀ.) ನಡುವೆ 2011ರ ಅಕ್ಟೋಬರ್‌ 20ರಂದು. ಇದಾದ ನಂತರ ಹಂತ-ಹಂತವಾಗಿ ಎಲ್ಲ ರೀಚ್‌ಗಳು ಲೋಕಾರ್ಪಣೆಗೊಂಡವು. ಮೊದಲ ಹಂತ ಪೂರ್ಣಗೊಳ್ಳಲು ಆರು ವರ್ಷ ಹಿಡಿಯಿತು. ಸುಮಾರು ಎಂಟೂವರೆ ಸಾವಿರ ಕೋಟಿ ಇದ್ದ ಯೋಜನೆಯ ಅಂದಾಜು ವೆಚ್ಚ, ಮುಕ್ತಾಯಗೊಂಡಾಗ 13,865 ಕೋಟಿ ರೂ. ತಲುಪಿತ್ತು.

ಮೂರ್‍ನಾಲ್ಕು ದಿನದಲ್ಲಿ ಆರು ಬೋಗಿ?: ಬಹುನಿರೀಕ್ಷಿತ ಆರು ಬೋಗಿಯ ಮೆಟ್ರೋ ರೈಲು ಮುಂದಿನ ಮೂರ್‍ನಾಲ್ಕು ದಿನಗಳಲ್ಲಿ ಸಾರ್ವಜನಿಕ ಸೇವೆ ಆರಂಭಿಸಲಿದೆ. ವರ್ಷ ತುಂಬಿದ ಸಂಭ್ರಮದಲ್ಲೇ ಮತ್ತೆ ಮೂರು ಬೋಗಿಗಳು ಸೇರ್ಪಡೆಗೊಳ್ಳುತ್ತಿರುವುದರಿಂದ “ನಮ್ಮ ಮೆಟ್ರೋ’ ಸಾಮರ್ಥ್ಯ ದುಪ್ಪಟ್ಟುಗೊಳ್ಳುತ್ತಿದೆ. ಈ ಮೂಲಕ ಸಂಭ್ರಮ ಕೂಡ ಇಮ್ಮಡಿ ಆಗಲಿದೆ.

ಪ್ರೇಮಿಗಳ ದಿನಾಚರಣೆಯಂದು (ಫೆ. 14) ಹೆಚ್ಚುವರಿ ಮೂರು ಬೋಗಿಗಳು ಬಿಇಎಂಎಲ್‌ನಿಂದ ಬಿಎಂಆರ್‌ಸಿಗೆ ಹಸ್ತಾಂತರಗೊಂಡಿದ್ದವು. ಇದಾದ ನಂತರ ಪರೀಕ್ಷಾರ್ಥ ಸಂಚಾರ ಪೂರ್ಣಗೊಂಡು ರೈಲ್ವೆ ಸುರಕ್ಷತಾ ಆಯುಕ್ತರ ಅನುಮೋದನೆ ಕೂಡಿ ಸಿಕ್ಕಿದೆ. ಆದರೆ, ಈ ಮಧ್ಯೆ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂತು. ಈಗ ನೂತನ ಸಚಿವರಿಂದ ಲೋಕಾರ್ಪಣೆಗೊಳಿಸಲು ಸಿದ್ಧತೆ ನಡೆಸಿದೆ.

ಪ್ರಯಾಣಿಕರು, ಆದಾಯ ಹೆಚ್ಚಳ: ಕಳೆದ ಒಂದು ವರ್ಷದಲ್ಲಿ ಮೆಟ್ರೋದಲ್ಲಿ ಸಂಚರಿಸಿದ ಪ್ರಯಾಣಿಕರ ಸಂಖ್ಯೆ 12.77 ಕೋಟಿಯಾಗಿದ್ದು, ಇದರಿಂದ ಸಂಗ್ರಹವಾದ ಆದಾಯ 310.25 ಕೋಟಿ ರೂ. ಎಂದು ಬಿಎಂಆರ್‌ಸಿ ಅಂದಾಜಿಸಿದೆ. ಮೆಟ್ರೋದಲ್ಲಿ ನಿತ್ಯ ಸರಾಸರಿ 3.50 ಲಕ್ಷ ಜನ ಸಂಚರಿಸುತ್ತಿದ್ದು, ಇದರಿಂದ 85 ಲಕ್ಷ ರೂ. ಆದಾಯ ಸಂಗ್ರಹ ಆಗುತ್ತಿದೆ. ವಾರ್ಷಿಕವಾಗಿ 310.25 ಕೋಟಿ ಆದಾಯ ಹರಿದುಬಂದಿದೆ. ಆದಾಗ್ಯೂ ಪ್ರಸಕ್ತ ಸಾಲಿನಲ್ಲಿ 538 ಕೋಟಿ ನಷ್ಟದಲ್ಲೇ ಮೆಟ್ರೋ ಸಾಗುತ್ತಿದೆ.

ಒಂದು ವರ್ಷದಲ್ಲಿ ನಡೆದ ಘಟನೆಗಳು
-2017ರ ಜುಲೈ 7ರಂದು ನೌಕರರ ಮುಷ್ಕರದಿಂದ ಮೆಟ್ರೋ ಸ್ತಬ್ಧಗೊಂಡಿತ್ತು 
-1.9 ಲಕ್ಷ ಇದ್ದ ಮೆಟ್ರೋ ಪ್ರಯಾಣಿಕರ ಸಂಖ್ಯೆ 3.50 ಲಕ್ಷಕ್ಕೆ ಏರಿಕೆ
-25 ಬಾರಿ ಮೆಟ್ರೋ ದಿನದ ಆದಾಯ ಒಂದು ಕೋಟಿ ರೂ. ದಾಟಿದೆ
-ನಾಲ್ಕು ಬಾರಿ ನಿತ್ಯ ಸಂಚರಿಸಿದ ಪ್ರಯಾಣಿಕರ ಸಂಖ್ಯೆ ನಾಲ್ಕು ಲಕ್ಷ ದಾಟಿದೆ
-ಬಿಎಂಆರ್‌ಸಿ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಮಹೇಂದ್ರ ಜೈನ್‌ ನೇಮಕ

ಟಾಪ್ ನ್ಯೂಸ್

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-qeqwewq

Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.