ನಗರದೆಲ್ಲೆಡೆ ರಂಜಾನ್‌ ಸಂಭ್ರಮ


Team Udayavani, Jun 17, 2018, 12:30 PM IST

m1-jilla.jpg

ಮೈಸೂರು: ರಂಜಾನ್‌ ಹಬ್ಬವನ್ನು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಸಗಡರ ಸಂಭ್ರಮದಿಂದ ಆಚರಿಸಿದರು. ಮೈಸೂರಿನ ತಿಲಕ್‌ನಗರದ ಈದ್ಗಾ ಮೈದಾನ, ರಾಜೀವ್‌ನಗರದ ಈದ್ಗಾ ಮೈದಾನ, ಉದಯಗಿರಿ-ಗೌಸಿಯಾ ನಗರದ ಈದ್ಗಾ ಮೈದಾನ ಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವ ಸಾ.ರಾ.ಮಹೇಶ್‌, ಮಾಜಿ ಶಾಸಕರಾದ ವಾಸು, ಎಂ.ಕೆ.ಸೋಮಶೇಖರ್‌, ನಗರ ಪೊಲೀಸ್‌ ಆಯುಕ್ತ ಡಾ.ಎ.ಸುಬ್ರಹ್ಮಣ್ಯೇಶ್ವರ ರಾವ್‌ ಮೊದಲಾದ ಗಣ್ಯರು ಈದ್ಗಾ ಮೈದಾನಕ್ಕೆ ಭೇಟಿ ನೀಡಿ  ಧರ್ಮಗುರುಗಳಿಗೆ ಪುಪುಗುತ್ಛ ನೀಡಿ ಶುಭಾಶಯ ಕೋರಿದರು.

ರಂಜಾನ್‌ ಹಬ್ಬದ ಹಿನ್ನೆಲೆಯಲ್ಲಿ ಶನಿವಾರ ಮುಂಜಾನೆ 5.30ಕ್ಕೆ ಮಸೀದಿಗಳಿಗೆ ತೆರಳಿದ ಮುಸ್ಲಿಮರು ವಿಶೇಷ ಪ್ರಾರ್ಥನೆ ಸಲ್ಲಿಸಿ 24 ದಿನಗಳ ಉಪವಾಸ ಅಂತ್ಯಗೊಳಿಸಿದರು. ಬಳಿಕ 9ಗಂಟೆಗೆ ನಗರದ ತಿಲಕ್‌ನಗರ, ರಾಜೀವ್‌ನಗರ ಹಾಗೂ ಗೌಸಿಯಾನಗರ ಈದ್ಗಾ ಮೈದಾನಗಳಲ್ಲಿ ಏಕಕಾಲದಲ್ಲಿ ಸಾಮೂಹಿಕ ಪ್ರಾರ್ಥನೆ

ಸಲ್ಲಿಸುವ ಜತೆಗೆ ವಯಸ್ಸಿನ ಅಂತರ ಮರೆತು ಪರಸ್ಪರ ಒಬ್ಬರಿಗೊಬ್ಬರು ಅಪ್ಪಿಕೊಂಡು ರಂಜಾನ್‌ ಶುಭಾಶಯ ವಿನಿಮಯ ಮಾಡಿಕೊಂಡರು. ತಿಲಕ್‌ನಗರದ ಈದ್ಗಾ ಮೈದಾನದಲ್ಲಿ ಮೈಸೂರಿನ  ಸರ್‌ಖಾಜೀ ನೇತೃತ್ವದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಶ್ವೇತ ವಸ್ತ್ರಧಾರಿಗಳಾಗಿ ಸಾವಿರಾರು ಜನ ಭಾಗವಹಿಸಿದ್ದರು. 

ಪುರುಷರು, ಮಕ್ಕಳು ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಬಂದರೆ ಬಡಾವಣೆಗಳಲ್ಲಿ ಮಹಿಳೆಯರು ಹೊಸ ಉಡುಪುಗಳನ್ನು ಧರಿಸಿ, ಕೈತುಂಬಾ ಮೆಹಂದಿ, ಬಳೆತೊಟ್ಟು  ಸಂಭ್ರಮಿಸಿದ ದೃಶ್ಯ ಮಂಡಿಮೊಹಲ್ಲಾ, ರಾಜೀವ್‌ನಗರ, ಗೌಸಿಯಾನಗರ, ಕಲ್ಯಾಣಗಿರಿ, ಬಡೇಮಕಾನ್‌, ಬೀಡಿ ಕಾರ್ಮಿಕರ ಕಾಲೋನಿ, ಅಜೀಜ್‌ ಕಾಲೋನಿ ಮೊದಲಾದ ಪ್ರದೇಶಗಳಲ್ಲಿ ಕಂಡು ಬಂತು.

ಪೊಲೀಸ್‌ ಬಂದೋಬಸ್ತ್: ರಂಜಾನ್‌ ಹಿನ್ನೆಲೆಯಲ್ಲಿ ನಗರದ ಮಸೀದಿ ಹಾಗೂ ಈದ್ಗಾ ಮೈದಾನಗಳ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್ ಮಾಡಲಾಗಿತ್ತು. ಮುಸ್ಲಿಮರ ಬಾಹುಳ್ಯವಿರುವ ಮಂಡಿಮೊಹಲ್ಲಾ, ಅಶೋಕ ರಸ್ತೆ, ಎನ್‌.ಆರ್‌.ಮೊಹಲ್ಲಾ, ಸಾಡೇರಸ್ತೆ, ಅಕºರ್‌ ರಸ್ತೆ, ಕಲ್ಯಾಣಗಿರಿ, ಗೌಸಿಯಾನಗರ ಮೊದಲಾದ ಕಡೆಗಳಲ್ಲಿ ಹೆಚ್ಚಿನ ಪೊಲೀಸರನ್ನು ಬಂದೋಬಸ್ತ್ಗೆ ನಿಯೋಜಿಸಲಾಗಿತ್ತು.

ಟಾಪ್ ನ್ಯೂಸ್

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

SUBHODH

Bantwala: ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವು

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

WhatsApp Image 2024-11-17 at 21.01.59

Kyiv: ಉಕ್ರೇನ್‌ ವಿದ್ಯುತ್‌ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

courts

Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.