ಕೃಷಿ ವಿಶ್ವವಿದ್ಯಾಲಯ ಕಾಯ್ದೆ ತಿದ್ದುಪಡಿ ಆಗ್ರಹಿಸಿ ಪ್ರತಿಭಟನೆ
Team Udayavani, Jun 18, 2018, 6:55 AM IST
ಬೆಂಗಳೂರು: ಕೃಷಿ ವಿಶ್ವವಿದ್ಯಾಲಯ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ರಾಜ್ಯದಲ್ಲಿ ಆಸ್ತಿತ್ವದಲ್ಲಿರು ಖಾಸಗಿ ಕೃಷಿ ಕಾಲೇಜುಗಳನ್ನು ಸಂಪೂರ್ಣ ನಿಷೇಧಿಸಬೇಕು ಎಂದು ಆಗ್ರಹಿಸಿ ಕಳೆದ 6 ದಿನಗಳಿಂದ ರಾಜ್ಯದ ಎಲ್ಲಾ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದು, ಜೂ.19ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಪ್ರತಿಭಟನಾ ರ್ಯಾಲಿ ನಡೆಸಲು ತೀರ್ಮಾನಿಸಿದ್ದಾರೆ.
ಈ ಕುರಿತು ಕೃಷಿ ವಿಶ್ವವಿದ್ಯಾನಿಲಯ ಸಂಘದ ರಾಜ್ಯ ಸಂಚಾಲಕ ವಿ ರಮೇಶ್ ಮಾತನಾಡಿ, ಈ ಹಿಂದೆ 2009ರಲ್ಲಿ ಬಿಜೆಪಿ ಸರ್ಕಾರ ಅಧಿಕಾರವಧಿಯಲ್ಲಿ ಕೃಷಿ ವಿಶ್ವವಿದ್ಯಾನಿಲಯಗಳ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಖಾಸಗಿ ಕಾಲೇಜುಗಳಿಗೆ ಅನುಮತಿ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 8 ಕ್ಕೂ ಹೆಚ್ಚು ಖಾಸಗಿ ಕೃಷಿ ಕಾಲೇಜುಗಳ ಆರಂಭವಾದವು. ಆದರೆ ಇವುಗಳು ಎಸಿಎಆರ್ ಹಾಗೂ 1963ರ ಕೃಷಿ ಕಾಯ್ದೆ ನಿಯಮಗಳನ್ನು ಗಾಳಿಗೆ ತೂರಿ ಕೇವಲ ಲಾಭದ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿವೆ. ಇವುಗಳಲ್ಲಿ ಸೂಕ್ತ ಪ್ರಯೋಗಾಲಯ, ನುರಿತ ಶಿಕ್ಷಕರಿಲ್ಲ, ವಿದಾರ್ಥಿಗಳಿಗೆ ಅನುಗುಣವಾಗಿ ಕೃಷಿಭೂಮಿ ಇಲ್ಲ. ಕೇವಲ ಒಂದು ಕಟ್ಟಡವನ್ನು ಕಟ್ಟಿಸಿ ಶಿಕ್ಷಣಕ್ಕೆ ಅಗತ್ಯವಿರುವ ಮೂಲಭೂತ ವ್ಯವಸ್ಥೆಗಳಿಲ್ಲದೇ ಕಾಲೇಜು ನಡೆದುತ್ತಿದ್ದಾರೆ. ಹಾಗಾಗಿ ಕೃಷಿ ವಿಶ್ವವಿದ್ಯಾಲಯ ಕಾಯ್ದೆಗೆ ತಿದ್ದುಪಡಿ ತಂದು ರಾಜ್ಯದ ಎಲ್ಲಾ ಖಾಸಗಿ ಕೃಷಿ ವಿವಿಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು.
ಪ್ರಸ್ತುತ ರಾಜ್ಯದ 6 ಕೃಷಿ ವಿವಿಗಳಲ್ಲಿ ಸಿಇಟಿ ಮೂಲಕ ಆಯ್ಕೆಯಾಗ ಅರ್ಹ 2000 ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ನೀಡುತ್ತಿದ್ದರೇ ಖಾಸಗಿ ಕಾಲೇಜುಗಳು ಈ ನಿಯಮಗಳನ್ನು ಗಾಳಿಗೆ ತೂರಿ ವಿದ್ಯಾರ್ಥಿ ಬೇಕಾಬಿಟ್ಟಿಯಾಗಿ ವಿದ್ಯಾರ್ಥಿಗಳನ್ನು ಸೇರಿಸಿಕೊಂಡು ಅವರ ಜೀವನದ ಜೊತೆ ಚಲ್ಲಾಟವಾಡುತ್ತಿದ್ದಾರೆ. ಇನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸ್ಥಾಪನೆಯಾಗಿರುವ ರೈ ಟೆಕ್ ಎಂಬ ಖಾಸಗಿ ಕೃಷಿ ಕಾಲೇಜು ಕೃಷಿ ಖಾಯ್ದೆಯ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ, ವರ್ಷಕ್ಕೆ ಸಾವಿರಕ್ಕೂ ಹೆಚ್ಚು ವಿದಾರ್ಥಿಗಳನ್ನು ಕೋರ್ಸಗೆ ಸೇರಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಖಾಯ್ದೆ ತಿದ್ದುಪಡಿ ಈ ಕುರಿತು 2009ರಲ್ಲಿ ಹೋರಾಟ ಮಾಡಿದಾಗ ಎಚ್.ಡಿ. ಕುಮಾರಸ್ವಾಮಿ ಅವರು ನಮ್ಮನ್ನು ಬೆಂಬಲಿಸಿದ್ದರು. ಈಗ ಅವರೇ ಮುಖ್ಯಮಂತ್ರಿಗಳಾಗಿದ್ದು ಖಾಯ್ದೆ ತಿದ್ದುಪಡಿಗೆ ಮುಂದಾಗಬೇಕು. ಇನ್ನು ಜೂ.19ರಂದು ಬೆಳಗ್ಗೆ 10ಗಂಟೆಗೆ ಟೌನ್ಹಾಲ್ನಿಂದ ಸ್ವಾತಂತ್ರ್ಯ ಉದ್ಯಾನವನದವರೆಗೆ ರಾಜ್ಯಮಟ್ಟದ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಂಡಿದ್ದು, ಈ ರ್ಯಾಲಿಯಲ್ಲಿ ರಾಜ್ಯದ ಎಲ್ಲಾ ಕೃಷಿ ವಿವಿಗಳ ವಿದ್ಯಾರ್ಥಿಗಳು ಹಾಗೂ ಕೃಷಿ ಚಿಂತಕರು, ತಜ್ಞರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ
CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ
Congress Government 11 ಲಕ್ಷ ಕುಟುಂಬಗಳ ಅನ್ನವನ್ನು ಕಿತ್ತುಕೊಳ್ಳುತ್ತಿದೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.