ನಗರದಲ್ಲಿ ಯೋಗಾ ಹವಾ
Team Udayavani, Jun 18, 2018, 11:49 AM IST
ಬೆಂಗಳೂರು: ನಗರದಲ್ಲೀಗ ಯೋಗ ಹವಾ ಶುರುವಾಗಿದೆ. ಜೂ.21ರಂದು ವಿಶ್ವಯೋಗ ದಿನಾಚರಣೆ ನಡೆಯಲಿದ್ದು, ಅದಕ್ಕೂ ಮೊದಲೇ ಸಿಲಿಕಾನ್ ಸಿಟಿಯಲ್ಲಿ ಯೋಗ ಕುರಿತ ಶಿಬಿರಗಳು, ಬೈಕ್ ರಾಲಿಗಳು ಮತ್ತು ಜನಜಾಗೃತಿ ನಡೆಯುತ್ತಿವೆ.
ಭಾನುವಾರ ಅಕ್ಷರ ಯೋಗ ಅಕಾಡೆಮಿ, ನಾಗವಾರದ ಮ್ಯಾನ್ಫೋ ಕನ್ವೆನ್ಷನ್ ಸೆಂಟರ್ನಲ್ಲಿ ಹಮ್ಮಿಕೊಂಡಿದ್ದ 4ನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ನೂರಾರು ಸಂಖ್ಯೆಯಲ್ಲಿ ಅಂಧಮಕ್ಕಳು ಭಾಗವಹಿಸಿ ವಿವಿಧ ಆಸನಗಳನ್ನು ಪ್ರದರ್ಶಿಸಿದರು. ಚಿತ್ರ ನಟಿ ಸಂಜನಾ ಗಲ್ರಾನಿ ಮತ್ತು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿ ಮ್ಯಾಥ್ಯೂಹೇಡನ್ ತಮ್ಮ ಕುಟುಂಬದೊಂದಿಗೆ ವಿಶೇಷ ಚೇತನ ಮಕ್ಕಳೊಂದಿಗೆ ಬೆರೆತು ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.
ಇದಕ್ಕೂ ಮೊದಲು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅಕ್ಷರ ಯೋಗ ಅಕಾಡೆಮಿಯ ಸಂಸ್ಥಾಪಕ ಮಹಾಯೋಗಿ ಅಕ್ಷರ್ನಾಥ್, ಯೋಗ ಇಂದು ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ ಇಡೀ ಜಗತ್ತಿಗೆ ಪರಿಚಯವಾಗಿದೆ. ಯೋಗದಿಂದ ಮಾತ್ರ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದರು. ಅಜ್ಮೆರಾ ಗ್ರೂಪ್ನ ಸಿಇಒ ದೀಪಕ್ ಮಾತನಾಡಿ, ಭಾರತದ ಯೋಗವನ್ನು ಇಡೀ ವಿಶ್ವವೇ ಆಚರಿಸುವಂತೆ ಮಾಡಿದ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಗಾಂಜಾ ಸೇವನೆ; ಯುವಕನ ಬಂಧನ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.