ತಾತ್ಕಾಲಿಕ ಬಸ್ ತಂಗುದಾಣ ಅಪಘಾತಗಳಿಗೆ ಕಾರಣ!
Team Udayavani, Jun 19, 2018, 6:10 AM IST
ತೆಕ್ಕಟ್ಟೆ: ಕುಂದಾಪುರ – ಸುರತ್ಕಲ್ ಚತುಷ್ಪಥ ಕಾಮಗಾರಿಯ ಸಂದರ್ಭದಲ್ಲಿ ತೆಕ್ಕಟ್ಟೆ ಗ್ರಾಮದಲ್ಲಿ ಶಾಶ್ವತ ಬಸ್ ತಂಗುದಾಣಕ್ಕೆ ಅವಕಾಶ ಕಲ್ಪಿಸದ ಹಿನ್ನೆಲೆಯಲ್ಲಿ ಸ್ಥಳೀಯ ಸಂಘ-ಸಂಸ್ಥೆಗಳು ತಾತ್ಕಾಲಿಕ ಬಸ್ ತಂಗುದಾಣಗಳನ್ನು ನಿರ್ಮಿಸಿವೆ. ಆದರೆ ಈ ತಂಗುದಾಣ ಸಮೀಪ ಬಸ್‌ಗಳು ನಿಂತಾಗ ಮಲ್ಯಾಡಿ ಒಳ ಮಾರ್ಗದಿಂದ ರಾ.ಹೆ.66 ಕ್ಕೆ ಪ್ರವೇಶಿಸುವ ವಾಹನಗಳಿಗೆ ಗೊಂದಲ ಏರ್ಪಟ್ಟು ಅಪಘಾತಕ್ಕೆ ಕಾರಣವಾಗುತ್ತಿದೆ.
ಪ್ರಮುಖ ಭಾಗದಲ್ಲಿ ತಾತ್ಕಾಲಿಕ ಬಸ್ ತಂಗುದಾಣ ನಿರ್ಮಿಸಿದರೂ ಇದು ರಸ್ತೆ ನಿಯಮಕ್ಕೆ ವಿರುದ್ಧವಾಗಿದ್ದು, ಸ್ಥಳಾಂತರಕ್ಕೆ ಸ್ಥಳೀಯರು ಒತ್ತಾಯಿಸಿದ್ದಾರೆ. ಈಗಿರುವ ತಾತ್ಕಾಲಿಕ ಬಸ್ ತಂಗುದಾಣ ತೆಕ್ಕಟ್ಟೆ ಶ್ರೀ ಮಹಾಲಿಂಗೇಶ್ವರ ದೇವಳ ಮುಂಭಾಗಕ್ಕೆ ಸ್ಥಳಾಂತರಗೊಳಿಸಿದರೆ ಒಳಿತು ಎಂದು ಸ್ಥಳೀಯರಾದ ಸುಧೀಂದ್ರ ಗಾಣಿಗ ಅಭಿಪ್ರಾಯಪಟ್ಟಿದ್ದಾರೆ.
ಪರಿಹಾರ ಕಂಡುಕೊಳ್ಳಲಿ
ವೈಜ್ಞಾನಿಕವಾಗಿ ಗ್ರಾ.ಪಂ ವ್ಯಾಪ್ತಿಯಲ್ಲಿನ ಒಳಚರಂಡಿ ಸಮಸ್ಯೆಯಿಂದಾಗಿ ಮಳೆ ಬಂದಾಗ ತಾತ್ಕಾಲಿಕ ಬಸ್ ತಂಗುದಾಣ ಸಂಪೂರ್ಣ ಜಲಾವೃತಗೊಳ್ಳುತ್ತಿದ್ದು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಇಲ್ಲಿನ ಸಮಸ್ಯೆ ಬಗ್ಗೆ ಅಧ್ಯಯನ ಮಾಡಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು.
– ಸತೀಶ್‌ಕುಮಾರ್, ತೆಕ್ಕಟ್ಟೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ
Udupi: ಟವರ್ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್ ದಾವೆ: ಸಂಸದ ಕೋಟ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.