ಕೈ ಭಿನ್ನಮತ ಶಮನಕ್ಕೆ ರಾಹುಲ್ ಮೊರೆ
Team Udayavani, Jun 19, 2018, 6:00 AM IST
ಬೆಂಗಳೂರು: ಸಂಪುಟ ವಿಸ್ತರಣೆ ವಿಚಾರದಲ್ಲಿ ರಾಜ್ಯದ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷವಾಗಿರುವ ಕಾಂಗ್ರೆಸ್‌ನಲ್ಲಿ ಉದ್ಭವಿಸಿರುವ ಗೊಂದಲ ಬಗೆಹರಿಸುವುದೂ ಹಾಗೂ ಕಾರ್ಯಸೂಚಿ ಬಗ್ಗೆ ಚರ್ಚಿಸಲು ಸೋಮವಾರ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಹತ್ವದ ಸಮಾಲೋಚನೆ ನಡೆಸಿದ್ದಾರೆ. ಭಿನ್ನಮತ ಶಮನಕ್ಕೆ ಮಧ್ಯಪ್ರವೇಶಿಸುವಂತೆ ರಾಹುಲ್ ಅವರಲ್ಲಿ ಮನವಿ ಮಾಡಿದ್ದಾರೆ.
ಮಿತ್ರ ಪಕ್ಷ ಕಾಂಗ್ರೆಸ್‌ನಲ್ಲಿ ಉದ್ಭವಿಸಿರುವ ಭಿನ್ನಮತವನ್ನು ಶಮನ ಮಾಡುವ ಬಗ್ಗೆ ಪ್ರಸ್ತಾಪಿಸಿರುವ ಸಿಎಂ, ಸಂಪುಟ ವಿಸ್ತರಣೆಗೆ ಮುನ್ನ ಪ್ರಮುಖ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುವ ಬಗ್ಗೆ ರಾಹುಲ್ ಗಾಂಧಿ ಆಸಕ್ತಿ ತೋರಿದ್ದಾರೆ. ಹೀಗಾಗಿ ಮೊದಲು ಸುಮಾರು 30 ನಿಗಮ-ಮಂಡಳಿಗೆ ಅಧ್ಯಕ್ಷರನ್ನು ನೇಮಿಸಿ ಬಳಿಕ ಸಂಪುಟ ವಿಸ್ತರಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕ ಎರಡೂ ಪ್ರಕ್ರಿಯೆಗಳನ್ನು ಬಜೆಟ್ ಅಧಿವೇಶನ ಆರಂಭವಾಗುವುದರೊಳಗೆ ಮುಗಿಸಿದರೆ ಉತ್ತಮ ಎಂದು ಇದೇ ಸಂದರ್ಭದಲ್ಲಿ ಸಿಎಂ ಕುಮಾರಸ್ವಾಮಿ ಹೇಳಿದರು. ಇದಕ್ಕೆ ರಾಹುಲ್ ಗಾಂಧಿ ಅವರು ಪೂರಕವಾಗಿ ಸ್ಪಂದಿಸಿದರು ಎಂದು ತಿಳಿದು ಬಂದಿದೆ.
ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ, ಸೋಮವಾರ ಬೆಳಗ್ಗೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದು, ರಾಜ್ಯದಲ್ಲಿ ಸುಭದ್ರ ಸಮ್ಮಿಶ್ರ ಸರ್ಕಾರ ನಡೆಸುವ ಸಂಬಂಧ ಅನುಸರಿಸಬೇಕಾದ ಹಲವು ಮಾಹಿತಿಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ.
ಸಂಪುಟ ವಿಸ್ತರಣೆಯಾಗಿ ಎರಡು ವಾರ ಕಳೆದರೂ ಕಾಂಗ್ರೆಸ್‌ನಲ್ಲಿ ಭಿನ್ನಮತ ತಣ್ಣಗಾಗದ ಕಾರಣ ಸರ್ಕಾರಕ್ಕೆ ಮುಜುಗರ ತರುವ ಬೆಳವಣಿಗೆಗಳು ನಡೆಯುತ್ತಿವೆ. ಆದರೆ, ಕಾಂಗ್ರೆಸ್‌ನಲ್ಲಿ ಸಚಿವಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವುದರಿಂದ ಸಂಪುಟ ವಿಸ್ತರಣೆಯಾದರೆ ಹಲವು ಸಮಸ್ಯೆಗಳು ಎದುರಾಗುವ ಸಾಧ್ಯತೆಯೂ ಇದೆ. ಹೀಗಾಗಿ ಇದನ್ನು ನಾಜೂಕಾಗಿ ಬಗೆಹರಿಸಲು ಮಧ್ಯಪ್ರವೇಶಿಸುವಂತೆ ರಾಹುಲ್ ಗಾಂಧಿ ಅವರಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಸಂಪುಟ ಮತ್ತೆ ಕಗ್ಗಂಟಾಗುವ ಆತಂಕ:
ಸಂಪುಟ ವಿಸ್ತರಣೆ ಮತ್ತೆ ಗೊಂದಲ ಹೆಚ್ಚಿಸುವ ಆತಂಕವನ್ನು ರಾಹುಲ್ ಗಾಂಧಿ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ಗೆ ಹಂಚಿಕೆಯಾಗಿರುವ ಬಹುತೇಕ ಪ್ರಮುಖ ಖಾತೆಗಳನ್ನು ಈಗಾಗಲೇ ಹಂಚಿಕೆ ಮಾಡಲಾಗಿದೆ. ಪ್ರಸ್ತುತ ಸಂಪುಟ ಸೇರಲು ತುದಿಗಾಲಲ್ಲಿ ನಿಂತಿರುವವರು ಹಿರಿಯರಾಗಿದ್ದು, ಅವರಿಗೆ ಸಣ್ಣ ಪುಟ್ಟ ಖಾತೆಗಳನ್ನು ವಹಿಸಿದರೆ ಅಸಮಾಧಾನಗೊಳ್ಳಬಹುದು. ಈಗಾಗಲೇ ಹಂಚಿಕೆ ಮಾಡಿರುವ ಖಾತೆಗಳನ್ನು ಬದಲಾವಣೆ ಮಾಡಿದರೆ ಹಾಲಿ ಸಚಿವರು ಸಿಟ್ಟಾಗಬಹುದು. ಹೀಗಾಗಿ ಈ ವಿಚಾರದಲ್ಲಿ ಎಚ್ಚರಿಕೆಯಿಂದ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಆದ್ದರಿಂದ ಮೊದಲು ನಿಗಮ-ಮಂಡಳಿ ಅಧ್ಯಕ್ಷರ ನೇಮಕ ಪ್ರಕ್ರಿಯೆ ಮುಗಿಸಿ ನಂತರ ಸಂಪುಟ ವಿಸ್ತರಣೆ ಮಾಡಿ ಎಂಬ ಸಲಹೆಯನ್ನು ಅವರು ಮುಖ್ಯಮಂತ್ರಿಯವರಿಗೆ ನೀಡಿದ್ದಾರೆ.ಅಲ್ಲದೆ, ಯಾವುದಕ್ಕೂ ಈ ಕುರಿತು ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ ಮಾಡಿ. ರಾಜಕೀಯ ಪರಿಸ್ಥಿತಿಗೆ ತಕ್ಕಂತೆ ಯಾವ ನಿರ್ಣಯ ಸೂಕ್ತ ಎಂಬುದನ್ನು ತಿಳಿದುಕೊಂಡು ಬಳಿಕ ಯಾವುದು ಮೊದಲು ಎಂಬುದನ್ನು ತೀರ್ಮಾನಿಸಿ ಎಂಬ ಸಲಹೆಯನ್ನೂ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಹೊಸ ಬಜೆಟ್‌ಗೆ ರಾಹುಲ್ ಗ್ರೀನ್‌ಸಿಗ್ನಲ್
ಸಮ್ಮಿಶ್ರ ಸರ್ಕಾರದಲ್ಲಿ ಹೊಸ ಬಜೆಟ್ ಮಂಡಿಸುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪ್ರಸ್ತಾವನೆಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮತಿಸಿದ್ದಾರೆ. ಇದರಿಂದಾಗಿ ಹೊಸ ಬಜೆಟ್ ಬೇಡ ಎಂಬ ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆ ತೀವ್ರ ಹಿನ್ನಡೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.