ಸರ್ಕಾರಿ ಶಾಲೆ ದತ್ತು ಪಡೆಯಲು ಮುಂದಾದ ಕೆ.ಪಿ.ನಂಜುಂಡಿ
Team Udayavani, Jun 19, 2018, 11:58 AM IST
ಬೆಂಗಳೂರು: ರಾಜ್ಯ ವಿಧಾನಪರಿಷತ್ ಸದಸ್ಯರಾಗಿ ಹೊಸದಾಗಿ ಆಯ್ಕೆಗೊಂಡಿರುವ ಕೆ.ಪಿ.ನಂಜುಂಡಿ, ತಾವು ಓದಿದ ಸರ್ಕಾರಿ ಶಾಲೆ ದತ್ತು ಪಡೆಯಲು ಮುಂದಾಗಿದ್ದಾರೆ.
ಸೋಮವಾರ ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಕೆ.ಪಿ.ನಂಜುಂಡಿ ಅವರು ಊವರ್ಶಿ ಟಾಕೀಸ್ ಬಳಿ ಇರುವ ವಿನೋಭಾನಗರ ಕೊಳಗೇರಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಪರಿಶೀಲಿಸಿ ನಂತರ ಅದೇ ಪ್ರದೇಶದಲ್ಲಿದ್ದ ತಾವು ಓದಿದ ಸರ್ಕಾರಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಕಾಲ ಕಳೆದರು.
ಈ ವೇಳೆ ಶಾಲೆಯಲ್ಲಿರುವ ಅವ್ಯವಸ್ಥೆ ಹಾಗೂ 60 ವಿದ್ಯಾರ್ಥಿಗಳಿರುವ ಶಾಲೆಗೆ ಕೇವಲ ಇಬ್ಬರು ಶಿಕ್ಷಕರು ಇರುವುದನ್ನು ಗಮನಿಸಿ ಅಲ್ಲಿನ ಕ್ಷೇತ್ರ ಶಿಕ್ಷಾಣಾಧಿಕಾರಿ ಸಂಪರ್ಕಿಸಿ ಕೂಡಲೇ ಶಿಕ್ಷಕರನ್ನು ನೇಮಿಸಿ ಅಗತ್ಯ ಸೌಕರ್ಯಗಳನ್ನು ಒದಗಿಸುವಂತೆ ಸೂಚಿಸಿದರು.
ನಂತರ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಅವರು, ತಮ್ಮ ಜಾತಿ ಧರ್ಮಗಳನ್ನು ಬದಿಗಿರಿಸಿ ಎಲ್ಲ ಒಂದೇ ಭಾವದಿಂದ ಶಿಕ್ಷಣ ಪಡೆದುಕೊಳ್ಳಬೇಕು. ತಾವು ಬಡವರು ಎಂಬ ಯಾವ ಕೀಳರಿಮೆಯನ್ನು ಮಕ್ಕಳು ಬೆಳೆಸಿಕೊಳ್ಳಬಾರದು. ಉತ್ತಮ ಶಿಕ್ಷಣ ಪಡೆಯುವುದಷ್ಟೇ ತಮ್ಮ ಗುರಿಯಾಗಿರಬೇಕು ಎಂದು ಕಿವಿಮಾತು ಹೇಳಿದರು.
ಈ ಶಾಲೆಗೆ ಹಂತ ಹಂತವಾಗಿ ಸೌಕರ್ಯಗಳನ್ನು ಒದಗಿಸಿಲಾಗುವುದು. ಮಕ್ಕಳಿಗೆ ಸಮವಸ್ತ್ರ, ಕಂಪ್ಯೂಟರ್ ಶಿಕ್ಷಣ ನೀಡಲಾಗುವುದು. ಇದಕ್ಕಾಗಿ ಶಾಲೆಯನ್ನು ದತ್ತು ತೆಗೆದುಕೊಳ್ಳಲು ಆಲೋಚಿಸಿರುವೆ. ಇನ್ನೂ ಮುಂದೆ ಈ ಶಾಲೆ ನನ್ನ ಜೀವನದ ಒಂದು ಭಾಗವಾಗಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.