ಗೋ ಸಚಿವಾಲಯ ಸ್ಥಾಪಿಸಿ: ಮಧ್ಯ ಪ್ರದೇಶ ಸಚಿವ ಒತ್ತಾಯ
Team Udayavani, Jun 20, 2018, 4:25 PM IST
ಭೋಪಾಲ : ಸಾಧುಗಳು ಮತ್ತು ಸನ್ಯಾಸಿಗಳಿಗೆ ಉನ್ನತ ರಾಜಕೀಯ ಹುದ್ದೆಗಳನ್ನು ಕೊಡುತ್ತಿದ್ದಾರೆಂಬ ಕಾರಣಕ್ಕೆ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ತೀವ್ರ ಟೀಕೆಗೆ ಗುರಿಯಾಗಿರುವ ನಡುವೆಯೇ ಇದೀಗ ಅವರ ಕ್ಯಾಬಿನೆಟ್ ಸಚಿವ ಅಖೀಲೇಶ್ವರಾನಂದ ಅವರು ರಾಜ್ಯದಲ್ಲಿ ದನಗಳ ಸಂರಕ್ಷಣೆಗಾಗಿ “ಗೋ ಸಚಿವಾಲಯ’ ವನ್ನು ಸ್ಥಾಪಿಸಬೇಕು ಎಂದು ಆಗ್ರಹಿಸಿದ್ದಾರೆ.
ಗೋ ರಕ್ಷಣಾ ಮಂಡಳಿಯ ಅಧ್ಯಕ್ಷರಾಗಿದ್ದ ಅಖೀಲೇಶ್ವರಾನಂದ ಅವರನ್ನು ಕಳೆದ ವಾರದಲ್ಲಷ್ಟೇ ಕ್ಯಾಬಿನೆಟ್ ಸಚಿವರನ್ನಾಗಿ ಮಾಡಲಾಗಿತ್ತು.
”ನಾನು ಮಧ್ಯಪ್ರದೇಶದ ಗೋ ರಕ್ಷಣಾ ಮಂಡಳಿಯ ಅಧ್ಯಕ್ಷನಾಗಿ ತೋರಿರುವ ದಕ್ಷ ಕಾರ್ಯನಿರ್ವಹಣೆಯಿಂದಾಗಿ ತನಗೆ ಅರ್ಹತೆಯ ಆಧಾರದಲ್ಲಿ ಸಚಿವ ಪದ ನೀಡಲಾಗಿದೆ” ಎಂದು ಅಖೀಲೇಶ್ವರನಾಂದ ಹೇಳಿಕೊಂಡಿದ್ದರು.
ರಾಜ್ಯದಲ್ಲಿ ಗೋ ಸಚಿವಾಲಯವನ್ನು ಸ್ಥಾಪಿಸಬೇಕೆಂದು ಸಚಿವ ಅಖೀಲೇಶ್ವರಾನಂದ ಅವರು ಟ್ವಿಟರ್‌ನಲ್ಲಿ ಅಭಿಪ್ರಾಯ ವ್ಯಕ್ತಿಪಡಿಸಿದ್ದು ಅದಕ್ಕೆ ತೀವ್ರ ಟೀಕೆ ವ್ಯಕ್ತವಾಗಿದೆ. ರಾಜ್ಯದಲ್ಲಿ ಇನ್ನೂ ಎಷ್ಟೋ ಗಂಭೀರ ಸಮಸ್ಯೆಗಳಿದ್ದು ಆ ಬಗ್ಗೆ ಸರಕಾರ ಚಿಂತಿಸಬೇಕಿದೆ ಎಂಬ ವ್ಯಾಪಕ ಟೀಕೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.