ಬ್ಯಾಂಕ್ ಆಫ್ ಮಹಾರಾಷ್ಟ್ರದ ಮಾಜಿ ಸಿಎಂಡಿ ಸಹಿತ 6 ಮಂದಿ ಅರೆಸ್ಟ್
Team Udayavani, Jun 20, 2018, 5:12 PM IST
ಪುಣೆ : ನಗರದ ರಿಯಲ್ ಎಸ್ಟೇಟ್ ಡೆವಲಪರ್ ಆಗಿರುವ ಡಿ ಎಸ್ ಕುಲಕರ್ಣಿ ಮತ್ತು ಅವರ ಪತ್ನಿಯ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪುಣೆ ಪೊಲೀಸ್‌ನ ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳು ಬ್ಯಾಂಕ್ ಆಫ್ ಮಹಾರಾಷ್ಟ್ರದ ಮಾಜಿ ಸಿಎಂಡಿ, ಹಾಲಿ ಎಂ.ಡಿ., ಸೇರಿದಂತೆ ಒಟ್ಟು ಆರು ಮಂದಿಯನ್ನು ಬಂಧಿಸಿದ್ದಾರೆ.
ಅರೆಸ್ಟ್ ಆಗಿರುವ ವ್ಯಕ್ತಿಗಳೆಂದರೆ ಬ್ಯಾಂಕ್ ಆಫ್ ಮಹಾರಾಷ್ಟ್ರ ಇದರ ಹಾಲಿ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ರವೀಂದ್ರ ಮರಾಠೆ, ಕಾರ್ಯನಿರ್ವಾಹಕ ನಿರ್ದೇಶಕ ರಾಜೇಂದ್ರ ಗುಪ್ತಾ, ಝೋನಲ್ ಮ್ಯಾನೇಜರ್ ನಿತ್ಯಾನಂದ ದೇಶ್‌ಪಾಂಡೆ, ಬ್ಯಾಂಕಿನ ಮಾಜಿ ಸಿಎಂಡಿ ಸುಶೀಲ್ ಮುಹನೋತ್, ಕುಲಕರ್ಣಿ ಅವರ ಸಿಎ ಸುನೀಲ್ ಘಟಪಾಂಡೆ, ಮತ್ತು ಉಪಾಧ್ಯಕ್ಷ ರಾಜೀವ್ ನೇವಸ್ಕರ್ (ಇವರು ಕುಲಕರ್ಣಿ ಅವರ ಡಿಎಸ್‌ಕುಲಕರ್ಣಿ ಡೆವಲಪರ್ಸ್ ಲಿಮಿಟೆಡ್‌ನ ಇಂಜಿನಿಯರಿಂಗ್ ವಿಭಾಗದವರು).
ಬಂಧಿತರಲ್ಲಿ ದೇಶಪಾಂಡೆ ಅವರನ್ನು ಅಹ್ಮದಾಬಾದ್ ನಲ್ಲಿ, ಮುನಹೋತ್ ಅವರನ್ನು ಜೈಪುರದಲ್ಲಿ ಮತ್ತು ಇತರ ಎಲ್ಲರನ್ನೂ ಪುಣೆಯಲ್ಲಿ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.