ಮುಖ್ಯ ವಿತ್ತ ಸಲಹೆಗಾರ ಅರವಿಂದ ರಾಜೀನಾಮೆ
Team Udayavani, Jun 21, 2018, 6:00 AM IST
ನವದೆಹಲಿ: ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್ ವೈಯಕ್ತಿಕ ಕಾರಣಗಳಿಂದಾಗಿ ಹುದ್ದೆ ತೊರೆಯಲು ನಿರ್ಧರಿಸಿದ್ದಾರೆ. 2014ರ ಅಕ್ಟೋಬರ್ನಲ್ಲಿ ಹಣಕಾಸು ಸಚಿವಾಲಯಕ್ಕೆ ಮೂರು ವರ್ಷಗಳ ಅವಧಿಗೆ ಅವರು ನೇಮಕವಾಗಿದ್ದರು. ನಂತರ ಒಂದು ವರ್ಷಗಳವರೆಗೆ ಅವರ ಅವಧಿಯನ್ನು ವಿಸ್ತರಿಸಲಾಗಿತ್ತು. ಅರವಿಂದ್ ನಿರ್ಗಮನದ
ನಿರ್ಧಾರವನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಫೇಸ್ಬುಕ್ನಲ್ಲಿ ಪ್ರಕಟಿಸಿದ್ದಾರೆ. ಅಕ್ಟೋಬರ್ನಲ್ಲಿ ಅವಧಿ ಮುಗಿಯಲಿದ್ದರೂ, ಸೆಪ್ಟೆಂಬರ್ನಲ್ಲೇ ಅಮೆರಿಕಕ್ಕೆ ತೆರಳಲು ನಿರ್ಧರಿಸಿ ರುವುದಾಗಿ ಅರವಿಂದ್ ತಿಳಿಸಿದ್ದಾರೆ.
ಜೇಟ್ಲಿ ಹೇಳಿದ್ದು
ಕೆಲವು ದಿನಗಳ ಹಿಂದೆ ಅರವಿಂದ್ ನನ್ನ ಜೊತೆ ಮಾತನಾಡಿದ್ದರು. ಕೌಟುಂಬಿಕ ಕಾರಣ ದಿಂದಾಗಿ ಅಮೆರಿಕಕ್ಕೆ ತೆರಳುತ್ತೇನೆ ಎಂದಿದ್ದರು. ಕಾರಣಗಳು ವೈಯಕ್ತಿಕ ವಾಗಿದ್ದರೂ, ಅವರಿಗೆ ಪ್ರಮುಖವಾಗಿತ್ತು. ನನ್ನ ಬಳಿ ಬೇರೆ ಆಯ್ಕೆ ಇರಲಿಲ್ಲ. ಹೀಗಾಗಿ ಸಮ್ಮತಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.