ಉನ್ನತ ಶಿಕ್ಷಣದಲ್ಲಿ ಹುಡುಗಿಯರ ಪ್ರಾಬಲ್ಯ
Team Udayavani, Jun 21, 2018, 6:00 AM IST
ಬೆಂಗಳೂರು: “ಬೇಟಿ ಬಚಾವೋ ಬೇಟಿ ಪಡಾವೋ’ ಎಂದು ಕೇಂದ್ರ ಸರ್ಕಾರ ಮಹಿಳಾ ಶಿಕ್ಷಣಕ್ಕೆ ಒತ್ತು ನೀಡುತ್ತಿರುವ ಬೆನ್ನಲ್ಲೇ ರಾಜ್ಯದಲ್ಲಿ ಪದವಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಯರ ಸಂಖ್ಯೆ ವಿದ್ಯಾರ್ಥಿಗಳಿಗಿಂತ ಹೆಚ್ಚಿದೆ ಎನ್ನುವ ಖುಷಿಯ ಸಂಗತಿ ಬೆಳಕಿಗೆ ಬಂದಿದೆ.
ಕೇರಳದ ನಂತರ ಇದೀಗ ಕರ್ನಾಟಕದಲ್ಲಿಯೂ ಹುಡುಗರಿಗಿಂತ ಹುಡುಗಿಯರೇ ಹೆಚ್ಚು ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ. ಕೇರಳದಲ್ಲಿ ಪ್ರತಿ 100 ಹುಡುಗರಿಗೆ 141 ಹುಡುಗಿಯರು ಪದವಿಗೆ ಪ್ರವೇಶ ಪಡೆಯುತ್ತಿದ್ದಾರೆ. ಕರ್ನಾಟಕದಲ್ಲಿ ಈ ಅನುಪಾತ 100 ಹುಡುಗರಿಗೆ 103 ಹುಡುಗಿಯರಷ್ಟಕ್ಕೆ ಏರಿಕೆಯಾಗಿದೆ. ಇದೇ ವೇಳೆ ಪದವಿ ಪ್ರವೇಶ ಭಾರತದ ಸರಾಸರಿ ಪ್ರಮಾಣ 100 ಹುಡುಗರಿಗೆ 94 ಹುಡುಗಿಯರಷ್ಟಿದೆ.
2017-18 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ 1,22,375 ಹುಡುಗರು ಪ್ರವೇಶ ಪಡೆದಿದ್ದರೆ, 1,74,290 ಹುಡುಗಿಯರು ಪ್ರವೇಶ ಪಡೆದಿದ್ದಾರೆ. ರಾಜ್ಯದಲ್ಲಿ ವಿದ್ಯಾರ್ಥಿಗಳಿಗಿಂತ ವಿದ್ಯಾರ್ಥಿನಿಯರ ಪ್ರವೇಶ ಪ್ರತಿ ವರ್ಷ ಹೆಚ್ಚಾಗುತ್ತಿರುವುದು ಕಂಡು ಬಂದಿದೆ.
ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಈ ಬಗ್ಗೆ ಕಳೆದ ಏಳು ವರ್ಷಗಳಲ್ಲಿ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರ ಲಿಂಗಾನುಪಾತ ಮಾಹಿತಿ ಸಂಗ್ರಹಿಸಿದ್ದು, 2010-11ರ ಶೈಕ್ಷಣಿಕ ವರ್ಷದಲ್ಲಿ 100 ವಿದ್ಯಾರ್ಥಿಗಳಿಗೆ 92 ವಿದ್ಯಾರ್ಥಿನಿಯರು ಪ್ರವೇಶ ಪಡೆಯುತ್ತಿದ್ದರು. 2015-16ನೇ ಸಾಲಿಗೆ ಈ ಪ್ರಮಾಣ 100ಕ್ಕೆ 99ರಷ್ಟು ವಿದ್ಯಾರ್ಥಿನಿಯರು ಪ್ರವೇಶ ಪಡೆದಿದ್ದರು. 16-17 ನೇ ಸಾಲಿಗೆ ಹುಡುಗರನ್ನು ದಾಟಿ ಮುನ್ನಡೆದ ಹುಡುಗಿಯರು ಅನುಪಾತವನ್ನು 100: 101ಕ್ಕೆ ಹೆಚ್ಚಿಸಿಕೊಂಡರು. 17-18ನೇ ಸಾಲಿನಲ್ಲಿ ಹುಡುಗಿಯರ ಈ ಪ್ರಮಾಣ 103ಕ್ಕೆ ಹೆಚ್ಚಳವಾಗಿದೆ. ಈ ಶೈಕ್ಷಣಿಕ ವರ್ಷದಲ್ಲಿ ಈ ಪ್ರಮಾಣ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ಮಧ್ಯೆ, ಪಿಯುಸಿ ಹಾಗೂ ಉನ್ನತ ಶಿಕ್ಷಣ ಪಡೆಯುವಲ್ಲಿಯೂ ಹುಡುಗರಿಗೆ ಸರ್ಕಾರದಿಂದ ಯಾವುದೇ ಉಚಿತ ಯೋಜನೆಗಳು ದೊರೆಯುತ್ತಿಲ್ಲ. ಆರ್ಥಿಕ ಸಮಸ್ಯೆಯಿಂದ ಬಹಳಷ್ಟು ಯುವಕರು ಉನ್ನತ ಶಿಕ್ಷಣದಿಂದ ಹಿಂದೆ ಸರಿಯುತ್ತಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೂ ಸರ್ಕಾರ ಹೆಚ್ಚಿನ ಶೈಕ್ಷಣಿಕ ಸವಲತ್ತು ನೀಡುವಂತೆ ಈಗಾಗಲೇ ಉನ್ನತ ಶಿಕ್ಷಣ ಪರಿಷತ್ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಸರ್ಕಾರದ ಸವಲತ್ತು ಕಾರಣ
ರಾಜ್ಯ ಸರ್ಕಾರ ಪಿಯುಸಿ ವರೆಗೂ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ ನೀಡುತ್ತಿದೆ. ಪದವಿಯಲ್ಲಿಯೂ ವಿದ್ಯಾರ್ಥಿನಿಯರಿಗೆ ಶೈಕ್ಷಣಿಕವಾಗಿ ಅನೇಕ ಸವಲತ್ತುಗಳನ್ನು ನೀಡುತ್ತಿದ್ದು, ಪ್ರವೇಶ ಶುಲ್ಕ, ಟ್ಯೂಶನ್ ಶುಲ್ಕ, ಲ್ಯಾಬ್ ಶುಲ್ಕವನ್ನು ಸರ್ಕಾರವೇ ಭರಿಸುತ್ತಿರುವುದರಿಂದ ವಿದ್ಯಾರ್ಥಿನಿಯರ ಸೇರ್ಪಡೆ ಸಂಖ್ಯೆ ಹೆಚ್ಚಳವಾಗುತ್ತಿದೆ ಎಂದು ಹೇಳಲಾಗಿದೆ. ಅಲ್ಲದೇ ಸರ್ಕಾರ ಪದವಿವರೆಗೂ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ ನೀಡುವ ಭರವಸೆ ನೀಡಿರುವುದರಿಂದ ವಿದ್ಯಾರ್ಥಿನಿಯರ ಪದವಿ ಸೇರ್ಪಡೆ ಪ್ರಮಾಣ ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
2016-17 ನೇ ಸಾಲಿನ ಅಂಕಿ ಅಂಶ
ರಾಜ್ಯ ಹುಡುಗರು ಹುಡುಗಿಯರು
ಆಂಧ್ರಪ್ರದೇಶ 100 78
ಕರ್ನಾಟಕ 100 101
ಕೇರಳ 100 141
ಮಹಾರಾಷ್ಟ್ರ 100 88
ತಮಿಳನಾಡು 100 95
ತೆಲಂಗಾಣ 100 88
ಭಾರತ 100 94
ಕರ್ನಾಟಕದಲ್ಲಿ ಪದವಿ ಪ್ರವೇಶ 2017-18
ಹುಡುಗರು 1,22,375
ಹುಡುಗಿಯರು 1,74,290
ಕರ್ನಾಟಕದಲ್ಲಿ ಪಿಯುಸಿ ಪ್ರವೇಶ 2017-18
ಹುಡುಗರು 79602
ಹುಡುಗಿಯರು 1,02,751
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.