ಕಡಿದ ಮರಗಳು ರಸ್ತೆಯಲ್ಲಿ, ಬೀದಿ ದೀಪ ಮಾಯ!


Team Udayavani, Jun 21, 2018, 12:30 PM IST

21-june-7.jpg

ಮಹಾನಗರ: ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ನಗರದ ಬಹುತೇಕ ಭಾಗ ಕೃತಕ ನೆರೆಯಿಂದ ಮುಳುಗಡೆಗೊಂಡು ಅನೇಕ ನಾಶನಷ್ಟಗಳು ಉಂಟಾಗಿತ್ತು. ಇದರಿಂದ ಎಚ್ಚೆತ್ತ ಪಾಲಿಕೆ ಚರಂಡಿ ಸ್ವಚ್ಛತೆ, ಅಪಾಯಕಾರಿ ಮರಗಳ ತೆರವು ಕಾರ್ಯ ಮುಂದಾಗಿತ್ತು. ಆದರೆ ಕೆಲವು ಭಾಗಗಳಲ್ಲಿ ಕಡಿದ ಮರಗಳನ್ನು ರಸ್ತೆಯಲ್ಲೇ ಬಿಟ್ಟು ಹೋಗಿರುವುದು ವಾಹನ ಸವಾರರ ಪಾಲಿಕೆ ಸಂಕಷ್ಟವಾಗಿ ಪರಿಣಮಿಸಿದೆ.

 ದೇರೆಬೈಲು-ಎಯ್ನಾಡಿ ಸಂಪರ್ಕಿಸುವ ಹರಿಪದವು ರಸ್ತೆ ನೋಡಲು ಕಾಂಕ್ರೀಟ್‌ ಹಾಕಿ ಸುಂದರವಾಗಿಯೇ ಇದೆ. ಆದರೆ ಈ ಒಂದು ರಸ್ತೆಯಲ್ಲಿ ಹಲವು ಸಮಸ್ಯೆಗಳಿವೆ. ಅಪಾಯಕಾರಿ ಮರಗಳನ್ನು ಪಾಲಿಕೆ ಸಿಬಂದಿಗಳು ಇತ್ತೀಚೆಗೆ ಕಡಿದಿದ್ದರೂ ಅದನ್ನು ತೆರವು ಮಾಡುವಲ್ಲಿ ನಿರ್ಲಕ್ಷ್ಯ ತೋರಿರುವುದರಿಂದ ಸುಮಾರು ಒಂದು ತಿಂಗಳಿನಿಂದ ಮರ, ಗೆಲ್ಲುಗಳು ರಸ್ತೆಯಲ್ಲೇ ಬಿದ್ದಿವೆ. ಇದರಿಂದ ಈ ಭಾಗದಲ್ಲಿ ಓಡಾಡುವ ಜನರಿಗೆ ತೊಂದರೆಯಾಗುತ್ತಿದೆ.

ದಾರಿದೀಪವಿಲ್ಲ
 ಹರಿಪದವು ರಸ್ತೆಯನ್ನು ಎಯ್ನಾಡಿಗೆ ತೆರಳಲು ಅಡ್ಡರಸ್ತೆಯಾಗಿ ಬಳಸಲಾಗುತ್ತದೆ. ಅಲ್ಲದೆ ಹಲವು ಮನೆಗಳಿರುವ ಮಂದಾರಬೈಲು ಭಾಗಕ್ಕೂ ಈ ರಸ್ತೆಯ ಮೂಲಕವೇ ಸಾಗಬೇಕು. ಅದರೊಂದಿಗೆ ಒಂದು ಖಾಸಗಿ ಆಸ್ಪತ್ರೆಯ ವಸತಿನಿಲಯ, ಬೃಹತ್‌ ಖಾಸಗಿ ಕಂಪೆನಿಯೂ ಇದೆ. ಈ ಹಿನ್ನಲೆಯಲ್ಲಿ ದಿನನಿತ್ಯ ಈ ಭಾಗದಲ್ಲಿ ನೂರಾರು ಜನ ಓಡಾಟ ನಡೆಸುತ್ತಾರೆ. ಆದರೆ ಈ ಭಾಗದಲ್ಲಿ ಬೀದಿ ದೀಪಗಳಿಲ್ಲದೆ ಜನರು ಕತ್ತಲಲ್ಲೇ ಸಾಗಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಇದರಿಂದ ರಾತ್ರಿ ವೇಳೆ ಮಹಿಳೆಯರು ಈ ಭಾಗದಲ್ಲಿ ಸಂಚರಿಸಲು ಆತಂಕಕ್ಕೊಳಗಾಗುತ್ತಿದ್ದಾರೆ. ಅಲ್ಲದೆ ಈ ಕಾರಣದಿಂದ ಈ ಭಾಗದಲ್ಲಿ ಅನೈತಿಕ ಚಟುವಟಿಕೆಗಳು ನಡೆಯುವ ಸಾಧ್ಯತೆ ಇದೆ ಎಂಬುದು ಸ್ಥಳೀಯರು ಆತಂಕ
ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸ್ಥಳೀಯ ಪ್ರತಿನಿಧಿಯನ್ನು ಕೇಳಿದರೆ ಸೂಕ್ತ ಸ್ಪಂದನೆ ನೀಡುತ್ತಿಲ್ಲ ಎಂಬುದಾಗಿ ಅಲ್ಲಿನ ನಿವಾಸಿಯೊಬ್ಬರು ಸುದಿನಕ್ಕೆ ತಿಳಿಸಿದ್ದಾರೆ.

ಗುಡ್ಡ ಕುಸಿದು ತಿಂಗಳೂ ಕಳೆದರೂ ಕೇಳ್ಳೋರಿಲ್ಲ
ಮೇ 29ರಂದು ಸುರಿದ ಭಾರಿ ಮಳೆಗೆ ದೇರೆಬೈಲಿನಿಂದ ಹರಿಪದವು ರಸ್ತೆ ಆರಂಭವಾಗುವ ತಿರುವಿನಲ್ಲಿ ಗುಡ್ಡ ಕುಸಿದು ರಸ್ತೆಗೆ ಮಣ್ಣು ಬಿದ್ದಿದ್ದು, ಈವರೆಗೆ ಅದನ್ನು ತೆರವು ಗೊಳಿಸುವ ಕಾರ್ಯ ಪಾಲಿಕೆ ಮಾಡಿಲ್ಲ. ಮಳೆ ನೀರಿಗೆ ಮಣ್ಣುಗಳೆಲ್ಲಾ ರಸ್ತೆಯಲ್ಲೇ ಹರಿಯುತ್ತಿದ್ದು, ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ಕೆಸರಿನಲ್ಲೇ ಸಾಗಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಪಾಲಿಕೆಯನ್ನು ಅನೇಕ ಬಾರಿ ಸಂಪರ್ಕಿಸಿದರೂ ಯಾವುದೇ ಪ್ರಯೋಜನವಾಗಿಲ್ಲ . 

ಟಾಪ್ ನ್ಯೂಸ್

Eye Surgeries: ಪದವಿ ಪೂರ್ಣಗೊಳಿಸದೆ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ…

Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

11-kambala

Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

16-uv-fusion

Discipline: ಬದುಕಿನಲ್ಲಿ ಶಿಸ್ತಿರಲಿ

15-

Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು

Eye Surgeries: ಪದವಿ ಪೂರ್ಣಗೊಳಿಸದೆ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ…

Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

14-uv-fusion

Mother: ಅಮ್ಮನ ಜೀವನವೇ ಆದರ್ಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.