ಟ್ಯಾಂಕರ್ ದುರಂತ: ಚಾಲಕ ಸಾವು ಅಧಿಕಾರಿಗಳಿಂದ ಸ್ಥಳ ಪರಿಶೀಲನೆ
Team Udayavani, Jun 21, 2018, 2:12 PM IST
ಕಡೂರು: ಚಿಕ್ಕಮಗಳೂರು ಜಿಲ್ಲೆ ಗಿರಿಯಾಪುರದಲ್ಲಿ ಮಂಗಳವಾರಸಂಭವಿಸಿದ್ದ ಟ್ಯಾಂಕರ್ ದುರಂತದಲ್ಲಿ
ಗಾಯಗೊಂಡಿದ್ದ ಚಾಲಕ ಮೃತಪಟ್ಟಿದ್ದಾನೆ. ಬೆಂಕಿ ಆರಿಸಿದ ನಂತರ ಬುಧವಾರ ಟ್ಯಾಂಕರ್‌ನ್ನು ಮೇಲಕ್ಕೆತ್ತಿ
ಅದರಲ್ಲಿ ಉಳಿದಿದ್ದ ಪೆಟ್ರೋಲ್‌ನ್ನುಹೊರತೆಗೆಯಲಾಗಿದೆ.
ರಸ್ತೆ ಬದಿ ಪಲ್ಟಿಯಾದ ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಟ್ಯಾಂಕರ್‌ನ ಚಾಲಕ ಕೊನೆಗೂ ಮೃತಪಟ್ಟಿದ್ದಾನೆ. ಮೈಗೆ ಬೆಂಕಿ ಹೊತ್ತಿಕೊಂಡಿದ್ದರೂ ಟ್ಯಾಂಕರ್‌ನಿಂದ ಜಿಗಿದಿದ್ದ ದಾವಣಗೆರೆ ಮೂಲದ ಚಾಲಕನನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವೃವಾಗಿ ಗಾಯಗೊಂಡಿದ್ದ ಈತ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ. ಲಾರಿಯಲ್ಲಿದ್ದ ಕೀನ್ಲರ್ ಸಜೀವವಾಗಿ ದಹನಗೊಂಡಿದ್ದ ಎಂದು ಶಂಕಿಸಲಾಗಿತ್ತು. ಆದರೆ ಟ್ಯಾಂಕರ್‌ನಲ್ಲಿ ಚಾಲಕ ಓರ್ವನೇ ಇದ್ದ ಎಂದು ತಿಳಿದುಬಂದಿದೆ.
ಬುಧವಾರ ಬೆಳಗ್ಗೆ ಟ್ಯಾಂಕರ್‌ನ್ನು ಕ್ರೇನ್ ಮೂಲಕ ಬೇರ್ಪಡಿಸಿ ದೂರಕ್ಕೆ ಸಾಗಿಸಲಾಗಿದೆ. ಟ್ಯಾಂಕರ್ ಸಂಪೂರ್ಣ ಸುಟ್ಟಿದೆ. ಟ್ಯಾಂಕರ್‌ನ ನಾಲ್ಕು ಕಂಪಾರ್ಟ್ನಲ್ಲಿದ್ದ ಸುಮಾರು 15 ಸಾವಿರ ಲೀಟರ್ ಡೀಸೆಲ್ ಮತ್ತು 5 ಸಾವಿರ ಲೀಟರ್ ಪೆಟ್ರೊಲ್‌ನಲ್ಲಿ ಸುಮಾರು 4 ಸಾವಿರ ಲೀಟರ್ ಪೆಟ್ರೋಲ್ ಮಾತ್ರ ಉಳಿದಿದೆ. ಅದನ್ನು ಬೇರೆ ಟ್ಯಾಂಕರ್‌ಗೆ ವರ್ಗಾಯಿಸಲಾಗಿದೆ. ಉಳಿದ ಸುಮಾರು 15 ಸಾವಿರ ಲೀಟರ್ ಬೆಂಕಿಗಾಹುತಿಯಾಗಿದೆ.
ಘಟನೆಯಲ್ಲಿ ಮೂರು ದ್ವಿಚಕ್ರ ವಾಹನಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಇವುಗಳಲ್ಲಿ 2 ವಾಹನದ ಗುರುತು ತಿಳಿದಿದ್ದು ಹಾಗೂ ಇನ್ನೊಂದು ಯಾರಿಗೆ ಸೇರಿದ್ದೆಂಬುದು ತಿಳಿದಿಲ್ಲ. ಬೆಂಕಿ ಜ್ವಾಲೆಯಿಂದ ವಿದ್ಯುತ್ ಲೈನ್ ಗಳೆಲ್ಲ ಸುಟ್ಟಿರುವ ಕಾರಣ ಬುಧವಾರ ಬೆಳಗ್ಗೆಯಿಂದ ಸಂಜೆಯವರೆಗೆ ಮೆಸ್ಕಾಂ ಇಲಾಖೆಯ ಸಿಬ್ಬಂದಿ ಹೊಸ ತಂತಿ ಅಳವಡಿಸಿದರು.
ಟ್ಯಾಂಕರ್‌ನ ಮಾಲೀಕರು ದಾವಣಗೆರೆವರು ಎಂದು ತಿಳಿದು ಬಂದಿದೆ. ಜಿಲ್ಲಾಧಿಕಾರಿ ಶ್ರೀರಂಗಯ್ಯ ಅವರು ಘಟನೆಯ ಸಮಗ್ರ ಮಾಹಿತಿ ಪಡೆದಿದ್ದು, ದುರಂತದಿಂದ ಹಾನಿಗೊಳಗಾದ ನಷ್ಟವನ್ನು ಕಂದಾಯ ಅಧಿಕಾರಿಗಳು ಲೆಕ್ಕಹಾಕುತ್ತಿದ್ದಾರೆ. ಹಾನಿಗೊಳಗಾದ ಮನೆ ಮಾಲೀಕರಿಗೆ ಪರಿಹಾರ ನೀಡುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.
ಅಗ್ನಿ ಶಾಮಕ ದಳದವರು ಮತ್ತು ಗ್ರಾಮಸ್ಥರ ಸಹಕಾರದಿಂದ ಆಗುವ ಹೆಚ್ಚಿನ ಹಾನಿ ತಪ್ಪಿದೆ. ಶಿವಮೊಗ್ಗ, ತರೀಕೆರೆ, ಚನ್ನಗಿರಿ, ಹೊಸದುರ್ಗ, ಅರಸೀಕೆರೆ, ಚಿಕ್ಕಮಗಳೂರು ಮತ್ತು ಕಡೂರು ಅಗ್ನಿ ಶಾಮಕ ದಳದ 59 ಸಿಬ್ಬಂದಿ ಬೆಂಕಿ ಆರಿಸುವ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಎರಡು ದಿನಗಳಿಂದ ಸ್ಥಳದಲ್ಲೇ ಬೀಡು ಬಿಟ್ಟಿರುವ ಸುಮಾರು 200ಕ್ಕೂ ಹೆಚ್ಚಿನ ಪೊಲೀಸ್ ಮತ್ತು ಅಗ್ನಿ ಶಾಮಕ ದಳದವರು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಗ್ರಾಮಸ್ಥರು ಹೇಮರಡ್ಡಿ ಸಮುದಾಯ ಭವನದಲ್ಲಿ ಊಟ, ತಿಂಡಿ, ಕುಡಿಯುವ ನೀರಿನ ವ್ಯವಸ್ಥೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.