ಜಿ.ಪಂ.ಎಂಜಿನಿಯರ್‌ ಗೋವರ್ಧನ್‌ ಪರಿಶೀಲನೆ

Team Udayavani, Jun 21, 2018, 2:22 PM IST

21-june-11.jpg

ಸವಣೂರು: ಕಳೆದ 10 ದಿನಗಳ ಅಂತರದಲ್ಲಿ 3ನೇ ಬಾರಿಗೆ ಸಂಪರ್ಕ ಕಡಿತಗೊಂಡ ಪಾಲ್ತಾಡಿ ಗ್ರಾಮದ ಪರಣೆಯಿಂದ ಮೀನಕೊಳೆಂಜಿ, ಜಾರಿಗೆತ್ತಡಿ, ಚಾಕೋಟೆತ್ತಡಿ ಸೇರಿದಂತೆ ಬಂಬಿಲಬೈಲು ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಜಿ.ಪಂ. ಎಂಜಿನಿಯರ್‌ ಗೋವರ್ಧನ್‌ ಬುಧವಾರ ಬೇಟಿ ನೀಡಿ ಪರಿಶೀಲಿಸಿದರು.

ಈ ರಸ್ತೆಯ ಸಮಸ್ಯೆಯ ಕುರಿತು ಈ ಹಿಂದೆ ಹಲವು ಬಾರಿ ಉದಯವಾಣಿ ಸುದಿನದಲ್ಲಿ ಜು. 24, ಮಳೆ ಬಂದಾಗ
ಮುಳುಗಡೆಯಾದ ಕುರಿತು ಜೂ.9,ಜೂ.19ರ ಸಂಚಿಕೆಯಲ್ಲಿ ವರದಿ ಪ್ರಕಟಿಸಿ ಸಂಬಂಧಿಸಿದವರನ್ನು ಎಚ್ಚರಿಸಲಾಗಿತ್ತು. ಅಲ್ಲದೆ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಪುತ್ತೂರು ಉಪ ವಿಭಾಗದ ಸಹಾಯಕ ಕಮೀಷನರ್‌ ಎಚ್‌. ಕೆ. ಕೃಷ್ಣ ಮೂರ್ತಿ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರಿಗೂ ದೂರವಾಣಿ ಮೂಲಕ ಸಮಸ್ಯೆ ಪರಿಹರಿಸುವಂತೆ ಸ್ಥಳೀಯರು ಕೇಳಿಕೊಂಡಿದ್ದರು.

ಈ ರಸ್ತೆಯ ಮೂಲಕ ಸುಮಾರು 50ಕ್ಕೂ ಅಧಿಕ ಕುಟುಂಬಗಳಿಗೆ ಸಂಪರ್ಕವಿದ್ದು, ಮನೆ ತಲುಪಲು ಹರಸಾಹಸ
ಪಡಬೇಕಾದ ಸ್ಥಿತಿ. ಈ ರಸ್ತೆಯನ್ನು ದಾಟಿ ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳು ತೆರಳುತ್ತಿದ್ದು, ಸಣ್ಣಮಕ್ಕಳನ್ನು ಹೆತ್ತವರು ಭಯದಲ್ಲೇ ಕಳುಹಿಸಬೇಕಾದ ಸ್ಥಿತಿ ಇತ್ತು. ಈ ಕುರಿತು ಉದಯವಾಣಿ ಸುದಿನ ವರದಿಯಲ್ಲಿ ಸಚಿತ್ರ ವರದಿ ಪ್ರಕಟಿಸಿ ಗಮನ ಸೆಳೆದಿತ್ತು.

ಈ ವರದಿಗೆ ಎಚ್ಚೆತ್ತು ಜಿ.ಪಂ. ಎಂಜಿನಿಯರ್‌ ಗೋವರ್ಧನ್‌ ಅವರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿದರು. ಇಲ್ಲಿನ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಅಂದಾಜು ಪಟ್ಟಿ ಹಾಗೂ ವರದಿಯನ್ನು ಜಿ.ಪಂ. ಗೆ ಸಲ್ಲಿಸಿ ಅಗತ್ಯ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ., ಅಭಿವೃದ್ಧಿ ಅಧಿಕಾರಿ ದೇವಪ್ಪ ಪಿ.ಆರ್‌., ಸದಸ್ಯ ಸತೀಶ್‌ ಅಂಗಡಿಮೂಲೆ, ಸಿಬಂದಿ ಪ್ರಮೋದ್‌ ಕುಮಾರ್‌ ರೈ, ದಯಾನಂದ ಸ್ಥಳೀಯರಾದ ಸೋಮಪ್ಪ ಗೌಡ, ಕೃಷ್ಣಪ್ಪ ಪೂಜಾರಿ, ಕಿಟ್ಟಣ್ಣ ರೈ ಬರೆಮೇಲು, ವಸಂತ ಗೌಡ ಚಾಕೋಟೆತ್ತಡಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.