ಪಾಕ್ ಇಂಜಿನಿಯರ್ಗಳಿಗೆ ಎಲ್ಇಟಿ ಮ್ಯಾನೇಜ್ಮೆಂಟ್ ಕೋರ್ಸ್ !
Team Udayavani, Jun 21, 2018, 3:48 PM IST
ಹೊಸದಿಲ್ಲಿ : ಪಾಕಿಸ್ಥಾನದ ಲಷ್ಕರ್ ಎ ತಯ್ಯಬ ಉಗ್ರ ಸಂಘಟನೆ ನಿರುದ್ಯೋಗಿ ಪಾಕ್ ಇಂಜಿನಿಯರ್ಗಳಿಗೆ ಲಾಹೋರ್ನಲ್ಲಿ ಮ್ಯಾನೇಜ್ಮೆಂಟ್ ಕೋರ್ಸು ನೀಡುತ್ತಿರುವುದಾಗಿ ಮೂಲಗಳು ತಿಳಿಸಿವೆ.
ಈ ಕೋರ್ಸ್ ಮುಗಿದ ಬಳಿಕ ಪಾಕ್ ಇಂಜಿನಿಯರ್ಗಳು ಚೀನ-ಪಾಕಿಸ್ಥಾನ ಆರ್ಥಿಕ ವಲಯ ಯೋಜನೆಯಲ್ಲಿ ಉದ್ಯೋಗ ಪಡೆದು ತಮಗೆ ಸಿಗುವ ವೇತನದ ಒಂದು ಭಾಗವನ್ನು ಭಾರತದ ವಿರುದ್ಧ ಭಯೋತ್ಪಾದಕ ದಾಳಿ ನಡೆಸುವ ಎಲ್ಇಟಿ ಉಗ್ರ ಸಂಘಟನೆಗೆ ನೀಡಬೇಕು ಎಂದು ತಾಕೀತು ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.
ಪಾಕ್ ಇಂಜಿನಿಯರುಗಳಿಗೆ ಉದ್ಯಮ ವ್ಯವಸ್ಥಾಪನೆ ಕೋರ್ಸ್ ನಡೆಸುವ ಪರಿಣತಿ ಲಷ್ಕರ್ ಉಗ್ರ ಸಂಘಟನೆಗೆ ಏನಿದೆ ಎಂಬ ಮೂಲಭೂತ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ; ಆದರೆ ಪಾಕ್ ಇಂಜಿನಿಯರ್ಗಳು ಚೀನ-ಪಾಕ್ ಆರ್ಥಿಕ ವಲಯದಲ್ಲಿ ಕೆಲಸ ಮಾಡುವ ಮೂಲಕ ಚೀನೀ ಇಂಜಿನಿಯರ್ಗಳ ಸುರಕ್ಷೆ ಮತ್ತು ಭದ್ರತೆಗೆ ಇನ್ನಷ್ಟು ಅಪಾಯ ಕಾದಿರುವುದನ್ನು ಶಂಕಿಸಲಾಗಿದೆ.
ಅಂದ ಹಾಗೆ ಪಾಕ್ ಇಂಜಿನಿಯರ್ಗಳಿಗೆ ಮ್ಯಾನೇಜ್ಮೆಂಟ್ ಕೋರ್ಸ್ ನೀಡುವ ಸಂಪೂರ್ಣ ಹೊಣೆಗಾರಿಕೆಯನ್ನು ಎಲ್ಇಟಿ ಉಗ್ರ ಮತ್ತು ಮುಂಬಯಿ ದಾಳಿಯ ಮಾಸ್ಟರ್ ಮೈಂಡ್ ಎನ್ನಲಾದ ಅಬ್ದುಲ್ ರೆಹಮಾನ್ ಮಕ್ಕಿ ಗೆ ನೀಡಲಾಗಿದೆ.ಸುಮಾರು 300 ಪಾಕ್ ಇಂಜಿನಿಯರ್ಗಳು ಈಗಾಗಲೇ ಮ್ಯಾನೇಜ್ಮೆಂಟ್ ಕೋರ್ಸಿಗೆ ಸೇರಿದ್ದಾರೆಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.