ರತ್ನಪ್ರಭಾ ಮುಂದುವರಿಕೆ ಹಿಂದಿನ ಗುಟ್ಟೇನು?
Team Udayavani, Jun 22, 2018, 6:00 AM IST
ಬೆಂಗಳೂರು: ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರ ಅಧಿಕಾರ ಅವಧಿ ವಿಸ್ತರಣೆ ಮಾಡಿರುವ ಬಗ್ಗೆ ರಾಜ್ಯ ರಾಜಕೀಯ ಹಾಗೂ ಆಡಳಿತ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಈಗಾಗಲೇ ನಿವೃತ್ತಿಯಾಗಿ ಒಂದು ಬಾರಿ ಮೂರು ತಿಂಗಳಿಗೆ ಅವಧಿ ವಿಸ್ತರಣೆಯಾಗಿರುವ ರತ್ನಪ್ರಭಾರ ಸೇವಾವಧಿ ಜೂ.30 ಕ್ಕೆ ಮುಕ್ತಾಯವಾಗಲಿದೆ.
ಈ ನಡುವೆ ಅವರ ಸೇವಾವಧಿಯನ್ನು ಮತ್ತೆ ಮೂರು ತಿಂಗಳು ಮುಂದುವರಿಸುವಂತೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಸೆ.30ರವರೆಗೂ ಅವಧಿ ವಿಸ್ತರಣೆಯಾಗಲಿದೆ.
ರತ್ನಪ್ರಭಾ ಅವರ ಮುಂದುವರಿಕೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೇ ಕಾರಣ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಡಿಸಿಎಂ ಪರಮೇಶ್ವರ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ವಿಜಯ ಭಾಸ್ಕರ್ ಅಥವಾ ಡಿ.ವಿ. ಪ್ರಸಾದ್ರನ್ನು ಮುಖ್ಯ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲು ಲೆಕ್ಕಾಚಾರ ಹಾಕಿದ್ದರು ಎಂದು ತಿಳಿದುಬಂದಿದೆ.
ಹೀಗಾಗಿಯೇ ಮೊದಲಿಗೆ ರತ್ಮಪ್ರಭಾ ಅವರು, ಮತ್ತೆ ಮೂರು ತಿಂಗಳು ಅವಧಿ ವಿಸ್ತರಣೆಗೆ ದಲಿತ ಕಾರ್ಡ್ ಬಳಸಿ ಪ್ರಯತ್ನ ಪಟ್ಟಿದ್ದರೂ ಸರ್ಕಾರ ಒಪ್ಪಿರಲಿಲ್ಲ. ದೇವೇಗೌಡರ ಸೂಚನೆ ಹಿನ್ನೆಲೆಯಲ್ಲಿ ಮತ್ತೆ 3 ತಿಂಗಳ ಅವಧಿಗೆ ಸೇವಾವಧಿ ವಿಸ್ತರಣೆ ಮಾಡಲಾಗಿದೆ ಎನ್ನಲಾಗಿದೆ.
ಕ್ರೆಡಿಟ್ಗೆ ಪೈಪೋಟಿ: ರತ್ನಪ್ರಭಾ ಅವರನ್ನು ಮುಂದುವರಿಸಲು ರಾಜ್ಯ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದ ಬೆನ್ನಲ್ಲೇ ಅವರನ್ನು ಮುಂದುವರಿಸುವ ತೀರ್ಮಾನ ತಮ್ಮಿಂದಲೇ ಆಯಿತು ಎಂಬ ಕ್ರೆಡಿಟ್ ಪಡೆಯಲು ಸಿಎಂ ಕುಮಾರಸ್ವಾಮಿ ಹಾಗೂ ಡಿಸಿಎಂ ಪರಮೇಶ್ವರ್ ಪ್ರತ್ಯೇಕವಾಗಿ ಪ್ರಯತ್ನ ನಡೆಸಿದ್ದಾರೆ ಎಂಬ ಮಾತು ವಿಧಾನಸೌಧದ ಪಡಸಾಲೆಯಲ್ಲಿ ಕೇಳಿ ಬರುತ್ತಿವೆ.
ತಾನು ದಲಿತ ಪರವಾಗಿದ್ದೇನೆ ಎನ್ನುವುದನ್ನು ಬಿಂಬಿಸಲು ಕುಮಾರಸ್ವಾಮಿ ಪ್ರಯತ್ನಿಸಿದರೆ,ರತ್ನಪ್ರಭಾ ಅವರನ್ನು ಮುಂದುವರಿಸಲು ನಾನೇ ಕಾರಣ ಎಂದು ಪರಮೇಶ್ವರ್ ತಮ್ಮ ಆಪ್ತರ ಬಳಿ ಹೇಳಿಕೊಳ್ಳುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಬಜೆಟ್ ಕಾರಣ ಸದ್ಯ ಸಮ್ಮಿಶ್ರ ಸರ್ಕಾರ ರಚನೆಯಾಗಿ ತಿಂಗಳು ಕಳೆದರೂ, ಇನ್ನೂ ಸರ್ಕಾರ ಅಧಿಕೃತವಾಗಿ
ಕಾರ್ಯಾರಂಭ ಮಾಡಿಲ್ಲ ಎನ್ನುವ ಭಾವನೆ ಸಾರ್ವಜ ನಿಕರಲ್ಲಿದೆ. ನೂತನ ಸಚಿವರು ಅಧಿಕಾರ ವಹಿಸಿಕೊಂಡು 15 ದಿನವಾಗುತ್ತ ಬಂದರೂ,ಇನ್ನೂ ಸರಿಯಾಗಿ ಇಲಾಖೆಗಳನ್ನು ತಿಳಿದುಕೊಳ್ಳುವ ಪ್ರಯತ್ನ ನಡೆಸಿದ್ದಾರೆ.
ಈ ನಡುವೆ ರಾಜ್ಯ ಸರ್ಕಾರ ಹೊಸ ಬಜೆಟ್ ಮಂಡನೆಗೆ ಮುಂದಾಗಿರುವುದು, ಸಾಲ ಮನ್ನಾದಂತಹ ಮಹತ್ವದ ಯೋಜನೆ ಜಾರಿಗೆ ಪ್ರಯತ್ನ ನಡೆಸುತ್ತಿದೆ. ಇಂತಹ ಸಂದರ್ಭದಲ್ಲಿ ಹೊಸ ಮುಖ್ಯ ಕಾರ್ಯದರ್ಶಿ ನೇಮಕವಾದರೆ, ಕೆಳಗಿನ ಅಧಿಕಾರಿಗಳೊಂದಿಗೆ ಹೊಂದಾಣಿಕೆ ಮಾಡಿಕೊ ಳ್ಳಲು ಸಮಯ ಬೇಕಾಗುತ್ತದೆ. ಅದು ಆಡಳಿತದ ಮೇಲೆ ಮತ್ತಷ್ಟು ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ದೇವೇಗೌಡರು ಹಾಲಿ ಮುಖ್ಯ ಕಾರ್ಯದರ್ಶಿಯನ್ನೇ ಮುಂದುವರಿಸಲು ಸೂಚಿಸಿದ್ದಾರೆ ಎನ್ನಲಾಗಿದೆ.
ಅಲ್ಲದೇ ರತ್ನಪ್ರಭಾ ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ಆ ಸಮುದಾಯಕ್ಕೆ ಜೆಡಿಎಸ್ ಸರ್ಕಾರ ಆದ್ಯತೆ ನೀಡಿದೆ ಎಂಬ ಸಂದೇಶ ರವಾನೆ ಮಾಡುವುದೂ ಕೂಡ ದೇವೇಗೌಡರ ತೀರ್ಮಾನದ ಹಿಂದಿನ ಲೆಕ್ಕಾಚಾರ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.