ಸಚಿವರ ಹೊಸ ಕಾರಿಗೆ ಸಿಎಸ್ ರತ್ನಪ್ರಭಾ ಬ್ರೇಕ್
Team Udayavani, Jun 23, 2018, 6:30 AM IST
ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚಿಸಿರುವ ಹಿನ್ನೆಲೆಯಲ್ಲಿ ಹೊಸ ಸಚಿವರ ಹೊಸ ಕಾರು ಬೇಡಿಕೆಗೆ ಮುಖ್ಯ ಕಾರ್ಯದರ್ಶಿ “ಬ್ರೇಕ್’ ಹಾಕಿದ್ದಾರೆ.
ಹೊಸ ಕಾರು ಬೇಕೆಂಬ ಸಚಿವರ ಬೇಡಿಕೆ ಹಿನ್ನೆಲೆಯಲ್ಲಿ ಹೊಸ ಕಾರುಗಳ ಖರೀದಿಗೆ ಸಿದ್ಧಪಡಿಸಲಾಗಿದ್ದ ಪ್ರಸ್ತಾವನೆಯನ್ನು ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ವಾಪಸ್ ಕಳುಹಿಸಿದ್ದಾರೆಂದು ಹೇಳಲಾಗಿದೆ.
ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ, ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಜಯಮಾಲಾ, ಆರೋಗ್ಯ ಸಚಿವ ಶಿವಾನಂದ ಪಾಟೀಲ್, ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಹೊಸ ಕಾರು ಖರೀದಿಗೆ ಅನುಮತಿ ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಮುಖ್ಯ ಕಾರ್ಯದರ್ಶಿ ಒಪ್ಪಿಗೆ ನೀಡಿಲ್ಲ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUDA case; ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಕರೆದ ಲೋಕಾಯುಕ್ತ ಪೊಲೀಸರು
Waqf Notice: ʼವಕ್ಫ್ ಬೋರ್ಡ್ಗೆ ಆಸ್ತಿ ನೋಂದಣಿ ತಕ್ಷಣ ಸ್ಥಗಿತಗೊಳಿಸಲು ಸಿಎಸ್ಗೆ ಸೂಚಿಸಿʼ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.