ಆರ್‌ಟಿಐ ಅರ್ಜಿಗಳಿಗೆ ಭಯ ಬೇಡ

Team Udayavani, Jun 23, 2018, 5:12 PM IST

23-june-20.jpg

ಬೆಳಗಾವಿ: ಜಿಲ್ಲೆಯಲ್ಲಿರುವ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ ಸಹಾಯಕ ಸಾರ್ವಜನಿಕ ಮಾಹಿತಿ ಅಧಿಕಾರಿಗಳ ಕುರಿತ ಮಾಹಿತಿ ಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ಕೆ.ಎಂ. ಚಂದ್ರೇಗೌಡ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಾರ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ ಮಾಹಿತಿ ಹಕ್ಕು ಕಾಯ್ದೆಯ ಕುರಿತು ಹಮ್ಮಿಕೊಂಡಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಾಹಿತಿ ಹಕ್ಕು ಕಾಯ್ದೆಯ ಕುರಿತು ಎಲ್ಲ ಅಧಿಕಾರಿಗಳು ತಿಳಿದುಕೊಳ್ಳಬೇಕು. ಆರ್‌ಟಿಐ ಅಡಿ ಅರ್ಜಿ ಸಲ್ಲಿಕೆಯಾದ ತಕ್ಷಣ ಅಧಿಕಾರಿಗಳು ಭಯ ಪಡುವ ಅಗತ್ಯವಿಲ್ಲ. ಪ್ರತಿದಿನ ಕಚೇರಿಗೆ ತೆರಳಿದ ತಕ್ಷಣ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಶೀಲಿಸಬೇಕು ಎಂದರು. ಈ ಅರ್ಜಿಗಳನ್ನು ಸರಿಯಾಗಿ ಸಂಗ್ರಹಿಸಿಟ್ಟು, ಬೇಗನೆ ಮಾಹಿತಿ ಒದಗಿಸಬೇಕು. ಉತ್ತರ ನೀಡಲು ಆಗದಂತಹ ಪ್ರಶ್ನೆಗಳಿದ್ದರೆ ಅದರ ಬಗ್ಗೆಯೂ ವಿಳಂಬ ಮಾಡದೇ ಅರ್ಜಿದಾರರಿಗೆ ತಿಳಿಸಬೇಕು ಎಂದು ಹೇಳಿದರು.

ಅರ್ಜಿದಾರರಿಗೆ ಉತ್ತರ ನೀಡುವಾಗ ಮಾಹಿತಿ ಸಂಗ್ರಹಿಸಲು ಹಾಗೂ ಝರಾಕ್ಸ್‌ ಪ್ರತಿಗಳಿಗೆ ತಗುಲಿದ ವೆಚ್ಚವನ್ನು ಪಡೆಯಬಹುದು. ರಜೆದಿನ ಸೇರಿ 30 ದಿನಗಳೊಳಗಾಗಿ ಉತ್ತರ ನೀಡಬೇಕು. 3 ತಿಂಗಳಲ್ಲಿ ಮಾಹಿತಿ ಕೊಡದಿದ್ದರೆ ಅರ್ಜಿದಾರರಿಗೆ ಉಚಿತವಾಗಿ ಮಾಹಿತಿ ಒದಗಿಸಬೇಕಾಗುತ್ತದೆ. ಆಗ ಅಧಿಕಾರಿಗಳ ವೇತನದಲ್ಲಿನ ಹಣ ಕಡಿತಗೊಳಿಸಬೇಕಾಗುತ್ತದೆ ಎಂದು ಹೇಳಿದರು.

ಅರ್ಜಿಗಳ ಪರಿಶೀಲನೆ: ವಿವಿಧ ಇಲಾಖೆಗಳಲ್ಲಿ ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಆಯುಕ್ತರು ಪರಿಶೀಲಿಸಿ, ಪರಿಹಾರ ಸೂಚಿಸಿದರು. ಕೆಲವು ಇಲಾಖೆಯ ಅಧಿಕಾರಿಗಳಿಗೆ ಶೀಘ್ರ ಮಾಹಿತಿ ಒದಗಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಎಸ್‌. ಜಿಯಾವುಲ್ಲಾ ಮಾತನಾಡಿ, ಮಾಹಿತಿ ಹಕ್ಕು ಕುರಿತು ಅಧಿಕಾರಿಗಳು ಭಯಪಡುವ ಅಗತ್ಯವಿಲ್ಲ. ಅರ್ಜಿಗಳಿಗೆ ಉತ್ತರ ನೀಡಲು ಅನಗತ್ಯ ವಿಳಂಬ ಮಾಡುವ ಬದಲು ತಮ್ಮ ಕಚೇರಿಯಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸೂಕ್ತ ರೀತಿಯಲ್ಲಿ ಸಂಗ್ರಹಿಸಿ ಬೇಗ ಉತ್ತರ ಒದಗಿಸಬೇಕು ಎಂದು ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಎಚ್‌.ಬಿ. ಬೂದೆಪ್ಪ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಶೇಖರ್‌. ಎಚ್‌.ಟಿ ಉಪಸ್ಥಿತರಿದ್ದರು. ಉಪವಿಭಾಗಾಧಿಕಾರಿ ಕವಿತಾ ಯೋಗಪ್ಪನವರ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎನ್‌. ಮುನಿರಾಜು ಅಗತ್ಯ ಮಾಹಿತಿ ನೀಡಿದರು.

ಬೆಳಗಾವಿ: ಜಿಲ್ಲಾಧಿಕಾರಿ ಕಚೇರಿ ಸಭಾಭನವದಲ್ಲಿ ಶುಕ್ರವಾರ ಮಾಹಿತಿ ಹಕ್ಕು ಕಾಯ್ದೆಯ ಕುರಿತು ಹಮ್ಮಿಕೊಂಡಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ರಾಜ್ಯ ಮಾಹಿತಿ ಆಯೋಗದ ಆಯುಕ್ತ ಕೆ.ಎಂ. ಚಂದ್ರೇಗೌಡ ಮಾತನಾಡಿದರು.

ಟಾಪ್ ನ್ಯೂಸ್

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pro Kabaddi: ಪಾಟ್ನಾ-ಗುಜರಾತ್‌ ಟೈ

Pro Kabaddi: ಪಾಟ್ನಾ-ಗುಜರಾತ್‌ ಟೈ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.