ಕರಾವಳಿಯಲ್ಲಿ ಇಂದು ಭಾರೀ ಮಳೆ ನಿರೀಕ್ಷೆ
Team Udayavani, Jun 24, 2018, 6:35 AM IST
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆ ಅಬ್ಬರ ಕಡಿಮೆ ಇರಲಿದ್ದು, ನಂತರದ ಮೂರು ದಿನಗಳು ಕರಾವಳಿ ಸೇರಿದಂತೆ ಆಯ್ದ ಭಾಗಗಳಲ್ಲಿ ಭಾರಿ ಮಳೆ ನಿರೀಕ್ಷೆ ಇದೆ.
ಭಾನುವಾರ ಮತ್ತು ಸೋಮವಾರ ಒಳನಾಡು ಪ್ರದೇಶಗಳಲ್ಲಿ ಮಳೆ ಬಹುತೇಕ ವಿರಾಮ ನೀಡಲಿದೆ. ಜೂನ್ 26ರಿಂದ 28ರವರೆಗೆ ಉತ್ತರದ ಬೀದರ್, ಬೆಳಗಾವಿ, ಕಲಬುರಗಿ, ಯಾದಗಿರಿ ಹಾಗೂ ದಕ್ಷಿಣದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಉತ್ತಮ ಮಳೆ ಆಗಲಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಭಾನುವಾರ ಭಾರಿ ಮಳೆ ಆಗಲಿದ್ದು, ಸೋಮವಾರ ಒಣಹವೆ ಮುಂದುವರಿಯಲಿದೆ.
ತದನಂತರದ ಮೂರು ದಿನಗಳು ಅತಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿ ತಿಳಿಸಿದೆ.
ರಾಜ್ಯದಲ್ಲಿ ಶನಿವಾರ ಬೆಳಿಗ್ಗೆ ಕಾರ್ಕಳದಲ್ಲಿ ಅತಿ ಹೆಚ್ಚು 50 ಮಿ.ಮೀ. ಮಳೆ ದಾಖಲಾಗಿದೆ. ಉಡುಪಿಯ ಕುಂದಾಪುರ, ಮಂಗಳೂರು, ಬಾಗಲಕೋಟೆ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದ ಆಯ್ದ ಪ್ರದೇಶಗಳಲ್ಲಿ 20ರಿಂದ 40 ಮಿ.ಮೀ. ಮಳೆ ಬಿದ್ದಿದೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.