ಮೌಲ್ವಿ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ
Team Udayavani, Jun 24, 2018, 7:30 AM IST
ಬೆಂಗಳೂರು : ರಂಜಾನ್ ಆಚರಣೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಜಯಪುರದ ಧಾರ್ಮಿಕ ಮುಖಂಡ ಮೌಲ್ವಿ ತನ್ವೀರ್ ಪೀರ್ ಹಶ್ಮಿ ವಿರುದ್ಧ ಕಠಿಣ ಕ್ರಮ ತೆಗದುಕೊಳ್ಳುವಂತೆ ರಾಜ್ಯ ಬಿಜೆಪಿಯ ಗೋ ರಕ್ಷಣ ಪ್ರಕೋಷ್ಠ ಆಗ್ರಹಿಸಿದೆ.
ಸದ್ಯದಲ್ಲೇ ಬರಲಿರುವ ಬಕ್ರಿದ್ಗೆ ಗೋವುಗಳ ಜತೆಗೆ ಇನ್ನೊಂದು ಬಲಿಯಾಗಬೇಕಿದೆ ಎಂದು ಹೇಳಿಕೆ ನೀಡಿದ್ದ ಮೌಲ್ವಿ ವಿರುದ್ಧ ವಿಜಯಪುರ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾಡಳಿತ ಯಾವುದೇ ರೀತಿಯ ಕಾನೂನು ಕ್ರಮ ತೆಗೆದುಕೊಂಡಿಲ್ಲ. ಗೋ ಹತ್ಯೆಯ ಬಗ್ಗೆ ಮಾತನಾಡಿರುವುದು ರಾಜ್ಯದ ಗೋ ರಕ್ಷಣೆ ಕಾನೂನಿಗೆ ವಿರುದ್ಧವಾಗಿದೆ. ಅಲ್ಲದೇ ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಅವರನ್ನು ಕೇಂದ್ರವಾಗಿಟ್ಟುಕೊಂಡು ಮೌಲ್ವಿಯವರು ಈ ಹೇಳಿಕೆ ನೀಡಿದ್ದಾರೆ ಎಂದು ಪ್ರಕೋಷ್ಠದ ಸಂಯೋಜಕ ಸಿದ್ಧಾರ್ಥ ಗೋಯಾಂಕ್ ಆರೋಪಿಸಿದ್ದಾರೆ.
ಹೀಗಾಗಿ, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಮೌಲ್ವಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?
MUST WATCH
ಹೊಸ ಸೇರ್ಪಡೆ
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.