ಬಂಟ್ವಾಳ ತಾ| ಆಸ್ಪತ್ರೆಯಲ್ಲಿ ಅರ್ಧದಷ್ಟೂ  ಸಿಬಂದಿ ಇಲ್ಲ 

Team Udayavani, Jun 24, 2018, 10:18 AM IST

24-june-2.jpg

ಬಂಟ್ವಾಳ : ಹಲವು ವೈದ್ಯಕೀಯ ಸೌಲಭ್ಯಗಳೊಂದಿಗೆ ನೂರು ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಲ್ಪಟ್ಟ ಬಂಟ್ವಾಳ ತಾ| ಸಾರ್ವಜನಿಕ ಆಸ್ಪತ್ರೆ ಸಿಬಂದಿ ಕೊರತೆ ಸಮಸ್ಯೆ ಎದುರಿಸುತ್ತಿದೆ. ಇಲ್ಲಿಗೆ 82 ಹುದ್ದೆಗಳು ಮಂಜೂರಾಗಿದ್ದರೂ ಈಗ ಇರುವುದು 38 ಸಿಬಂದಿ ಮಾತ್ರ. ನಿಗದಿತ ಸಂಖ್ಯೆಯ ಅರ್ಧಕ್ಕಿಂತಲೂ ಕಡಿಮೆ ಸಿಬಂದಿ ಇದ್ದಾರೆ. ಅಂದರೆ 44 ಹುದ್ದೆಗಳು ಖಾಲಿಯಾಗಿವೆ. ಕಳೆದ ಐದು ವರ್ಷಗಳಿಂದ ಇದೇ ಪರಿಸ್ಥಿತಿ ಮುಂದುವರಿದು ಬಂದಿದೆ.

ಸುಮಾರು 6.15 ಕೋಟಿ ರೂ. ವೆಚ್ಚದಲ್ಲಿ ಬಂಟ್ವಾಳದ ಸಮುದಾಯ ಆರೋಗ್ಯ ಕೇಂದ್ರವನ್ನು ನೂರು ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿ ಕಟ್ಟಡ ಸಹಿತ ಇತರ ಸೌಲಭ್ಯಗಳನ್ನು ಒದಗಿಸಲಾಗಿತ್ತು. 2017ರಲ್ಲಿ ಮೇಲ್ದರ್ಜೆಗೇರಿದ ಆಸ್ಪತ್ರೆಯನ್ನು ಸಿಎಂ ಉದ್ಘಾಟಿಸಿದ್ದರು. ಆದರೆ ಸಾಕಷ್ಟು ಹುದ್ದೆಗಳನ್ನು ತುಂಬುವಲ್ಲಿ ಮಾತ್ರ ವಿಫಲವಾಗಿತ್ತು. ಇದ ರಿಂದ ಗುರಿ ಸಾಧಿಸುವಲ್ಲಿ ವಿಫಲವಾಗಿದೆ.

ರೋಗಿಗಳು
ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳೆದ ಮೇ ತಿಂಗಳೊಂದರಲ್ಲಿ 749 ಮಂದಿ ಒಳರೋಗಿಗಳಾಗಿ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. 10,494 ಮಂದಿ ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ. ಸಹಸ್ರಾರು ಸಂಖ್ಯೆಯ ರೋಗಿಗಳು ಇಲ್ಲಿನ ಆಸ್ಪತ್ರೆಯ ಸದುಪಯೋಗ ಪಡೆಯುತ್ತಿದ್ದಾರೆ. ಆದರೆ ಸಾಕಷ್ಟು ಸಂಖ್ಯೆಯಲ್ಲಿ ಸಿಬಂದಿ ನೇಮಿಸದ
ಕಾರಣ ಎಲ್ಲವೂ ಗುತ್ತಿಗೆ ಗ್ರೂಪ್‌ ಡಿ. ನೌಕರರ ಕೊರತೆ ನೀಗಿಸಲು 18 ಮಂದಿ ಹೊರಗುತ್ತಿಗೆ ಸಿಬಂದಿಯನ್ನು ನೇಮಿಸಲಾಗಿದೆ. ಇಬ್ಬರು ಚಾಲಕರು ಹೊರಗುತ್ತಿಗೆಯವರು, ವೈದ್ಯರನ್ನು ಹೊರಗುತ್ತಿಗೆಯಲ್ಲಿ ನೇಮಿಸಿದ್ದರೂ ಅವರು ಬರಲು ಒಪ್ಪದ ಕಾರಣ ಸ್ತ್ರೀರೋಗ ವೈದ್ಯರ ಹುದ್ದೆ ಖಾಲಿಯಾಗಿದೆ. ಇದರಿಂದ ಪ್ರಸವ ಉದ್ದೇಶಕ್ಕೆ ಬರುವ ಮಹಿಳೆಯರ ಸಂಖ್ಯೆ ಸಾಕಷ್ಟು ಕಡಿಮೆ ಆಗಿದೆ ಎಂದು ವೈದ್ಯಾಧಿಕಾರಿ ತಿಳಿಸಿದ್ದಾರೆ.

ಜನೌಷಧ ಕೇಂದ್ರ
ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಜನೌಷಧ ಕೇಂದ್ರವನ್ನು ಒದಗಿಸಲಾಗಿದೆ. ಇದರಿಂದ ದೊಡ್ಡ ಸಂಖ್ಯೆಯ ರೋಗಿಗಳಿಗೆ ಪ್ರಯೋಜನ ಆಗಿದೆ. ಸರಕಾರಿ ಆಸ್ಪತ್ರೆಯಲ್ಲಿ ಸಿಗದ ಔಷಧಗಳು ಇಲ್ಲಿ ಲಭ್ಯವಿವೆ. ಅನೇಕ ಸಂದರ್ಭಗಳಲ್ಲಿ  ರೋಗ್ಯ ಇಲಾಖೆ ಇಲ್ಲಿಂದಲೇ ಔಷಧಗಳನ್ನು ಖರೀದಿಸುವ ಸಂದರ್ಭವೂ ಎದುರಾಗಿದೆ. ಅತ್ಯಂತ ಕಡಿಮೆ ದರದಲ್ಲಿ, ಅಂದರೆ ಶೇ. 80ರಷ್ಟು ಕಡಿಮೆ ದರದಲ್ಲಿ ಇಲ್ಲಿ ಔಷಧಗಳು ಲಭ್ಯವಾಗುತ್ತವೆ. 

ಗಮನಕ್ಕೆ ತರಲಾಗಿದೆ
ಆರೋಗ್ಯ ಕೇಂದ್ರದಲ್ಲಿ ದೊಡ್ಡ ಸಂಖ್ಯೆಯ ಸಿಬಂದಿ ಕೊರತೆ ಇದ್ದರೂ ಅದನ್ನು ಹೊರಗುತ್ತಿಗೆ ಮತ್ತು ಎರವಲು ಸೇವೆಯ ಮೂಲಕ ತುಂಬುವ ಕೆಲಸ ಆಗಿದೆ. ರೋಗಿಗಳಿಗೆ ಸಮಸ್ಯೆಯಾಗದಂತೆ ಕ್ರಮ ಮಾಡಿದೆ. ಸಿಬಂದಿ ಕೊರತೆಯನ್ನು ತುಂಬುವಲ್ಲಿ ಸರಕಾರಕ್ಕೆ ಬರೆಯಲಾಗಿದೆ. ಮುಂದಿನ ದಿನಗಳಲ್ಲಿ ಸರಕಾರದಿಂದ ಸೂಕ್ತ ಕ್ರಮ ಆಗಬಹುದು.
– ಡಾ| ಸದಾಶಿವ
ಮುಖ್ಯ ವೈದ್ಯಾಧಿಕಾರಿ, 
ಬಂಟ್ವಾಳ ತಾ| ಸಾರ್ವಜನಿಕ ಆಸ್ಪತ್ರೆ

ರಾಜಾ ಬಂಟ್ವಾಳ

ಟಾಪ್ ನ್ಯೂಸ್

BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ

BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ

BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.