ಆಂಧ್ರ ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ
Team Udayavani, Jun 24, 2018, 11:05 AM IST
ಬೆಂಗಳೂರು: ಆಂಧ್ರಪ್ರದೇಶ ಮೂಲದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೀಣ್ಯದ ಖಾಸಗಿ ಕಾಲೇಜಿನ ಹಾಸ್ಟೆಲ್ನಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ ಸಾಯಿಶ್ರೀ (22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಮೊದಲ ವರ್ಷದ ಎಂಎಸ್ಸಿ ವ್ಯಾಸಂಗ ಮಾಡುತ್ತಿದ್ದ ಸಾಯಿಶ್ರೀ, ಕಾಲೇಜಿನ ಹಾಸ್ಟೆಲ್ನಲ್ಲಿ ಉಳಿದುಕೊಂಡಿದ್ದರು. ಗುರುವಾರ ಎಂದಿನಂತೆ ಕಾಲೇಜಿಗೆ ತೆರಳಿ, ತರಗತಿ ಮುಗಿಸಿಕೊಂಡು ಮಧ್ಯಾಹ್ನ ಹಾಸ್ಟೆಲ್ಗೆ ವಾಪಸ್ ಬಂದ ನಂತರ ನೇಣಿಗೆ ಶರಣಾಗಿದ್ದಾರೆ. ಸಹಪಾಠಿಗಳು ಕೊಠಡಿಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಸ್ಥಳದಲ್ಲಿ ಯಾವುದೇ ಡೆತ್ನೋಟ್ ಪತ್ತೆಯಾಗಿಲ್ಲ. ವಿದ್ಯಾರ್ಥಿನಿ ಪೋಷಕರು ಕೂಡ ಯಾರ ಮೇಲೂ ಅನುಮಾನ ವ್ಯಕ್ತಪಡಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ರಾಜಗೋಪಾಲನಗರ ಠಾಣೆಯಲ್ಲಿ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.