ಮರ್ದಾಳ: ಮಳೆ ನೀರು ಸಂಗ್ರಹವಾಗಿ ಹಳ್ಳವಾಗಿದೆ ರಸ್ತೆ ಬದಿ
Team Udayavani, Jun 24, 2018, 11:53 AM IST
ಕಡಬ : ಕಡಬ-ಸುಬ್ರಹ್ಮಣ್ಯ ರಾಜ್ಯರಸ್ತೆಯಲ್ಲಿ ಮರ್ದಾಳದಿಂದ ಕರ್ಮಾಯಿಯತ್ತ ಸಾಗುವ ರಸ್ತೆ ಕವಲೊಡೆಯುವಲ್ಲಿ ಡಾಮರು ರಸ್ತೆಯ ಪಕ್ಕ ಮಳೆನೀರು ಸಂಗ್ರಹಗೊಂಡು ದೊಡ್ಡ ಹೊಂಡವಾಗಿ ತೀವ್ರ ತೊಂದರೆಯಾಗುತ್ತಿರುವ ಕುರಿತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಮುಖ್ಯ ರಸ್ತೆಯಲ್ಲಿ ವೇಗವಾಗಿ ಸಾಗುವ ವಾಹನಗಳು ಈ ಹೊಂಡದ ಮೇಲೆ ಚಲಿಸಿದಾಗ ರಸ್ತೆಯ ಪಕ್ಕದಲ್ಲಿ ನಡೆದು ಹೋಗುವ ಜನರಿಗೆ ಕೆಸರು ನೀರಿನ ಅಭಿಷೇಕ ಇಲ್ಲಿ ದಿನನಿತ್ಯದ ಗೋಳು. ಪಕ್ಕದಲ್ಲಿಯೇ ಇರುವ ಪ್ರೌಢಶಾಲೆಯ ವಿದ್ಯಾರ್ಥಿಗಳು ಕೆಸರು ನೀರಿನ ಸಿಂಚನದಿಂದಾಗಿ ದಿನಂಪ್ರತಿ ತೊಂದರೆ ಎದುರಿಸುತ್ತಿದ್ದಾರೆ. ದ್ವಿಚಕ್ರ ವಾಹನ ಸವಾರರು ನೀರಿನಲ್ಲಿ ಹೊಂಡದ ಅರಿವಾಗದೆ ಹಲವಾರು ಅಪಘಾತಗಳು ಇಲ್ಲಿ ಸಂಭವಿಸಿವೆ. ಈ ಕುರಿತು ಗ್ರಾಮಸಭೆಯಲ್ಲಿ ಹಲವು ಬಾರಿ ದೂರಿಕೊಂಡರೂ ಸಮಸ್ಯೆ ಬಗೆಹರಿಸಲು ಯಾರೂ ಮುಂದೆ ಬಂದಿಲ್ಲ ಎಂದು ಸ್ಥಳೀಯ ಮುಂದಾಳು ಶಿವಪ್ರಸಾದ್ ಕೈಕುರೆ ಆರೋಪಿಸಿದ್ದಾರೆ.
ಮನವಿ ಮಾಡಲಾಗಿದೆ
ಸಮಸ್ಯೆ ನಮ್ಮ ಗಮನಕ್ಕೂ ಬಂದಿದೆ. ಅಲ್ಲಿ ಹೊಂಡ ಮುಚ್ಚಿದರೆ ಪ್ರಯೋಜನವಿಲ್ಲ. ಮಳೆಯ ನೀರು ಸಮರ್ಪಕವಾಗಿ ಹರಿದುಹೋಗಲು ವ್ಯವಸ್ಥೆ ಮಾಡದೇ ಇದ್ದರೆ ಸಮಸ್ಯೆ ಬಗೆಹರಿಯದು. ಆದುದರಿಂದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಮೂಲಕ ರಸ್ತೆ ಬದಿಯ ಚರಂಡಿ ದುರಸ್ತಿಪಡಿಸಿ ಮಳೆನೀರು ಸರಾಗವಾಗಿ ಹರಿದುಹೋಗುವಂತೆ ಮಾಡಿ ಹೊಂಡ ಮುಚ್ಚಿಸುವ ಬಗ್ಗೆ ಮನವಿ ಮಾಡಲಾಗಿದೆ.
– ಲಲಿತಾ ಎಂ. ರೈ,
ಅಧ್ಯಕ್ಷರು, ಮರ್ದಾಳ ಗ್ರಾ.ಪಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.