ಮಳೆಗೆ ಕುಸಿದು ಬಿದ್ದ ಶಾಲಾ ಕೊಠಡಿ
Team Udayavani, Jun 24, 2018, 3:46 PM IST
ಬಾದಾಮಿ: ಶುಕ್ರವಾರ ರಾತ್ರಿ ಬಿದ್ದ ಮಳೆಗೆ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ಕಟ್ಟಡ ಕುಸಿದು ಬಿದ್ದಿದೆ. ಇಂತಹ ಶಿಥಿಲಾವಸ್ಥೆಯ ಕಟ್ಟಡದಲ್ಲಿ ಮಕ್ಕಳು ಭಯದ ವಾತಾವರಣದಲ್ಲಿ ಕಲಿಯುತ್ತಿದ್ದಾರೆ.
ತಾಲೂಕು ಕೇಂದ್ರದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯು 1965ರಲ್ಲಿ ಅಂದಿನ ಶಾಸಕರಾಗಿದ್ದ ದಿಂ.ಕೆ.ಎಂ.ಪಟ್ಟಣಶೆಟ್ಟಿಯವರು ಶಂಕುಸ್ಥಾಪನೆ ನೆರವೇರಿಸಿದ್ದರು. ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ಈ ಶಾಲೆಯಲ್ಲಿ 1 ರಿಂದ 7 ನೇ ತರಗತಿಯವರೆಗೆ ಶಿಕ್ಷಣ ನೀಡುತ್ತಿದ್ದು, ಒಟ್ಟು 185 ಮಕ್ಕಳು ಅಧ್ಯಯನ ಮಾಡುತ್ತಿದ್ದಾರೆ. ಒಟ್ಟು 8 ಜನ ಶಿಕ್ಷಕರಿದ್ದಾರೆ. ತರಗತಿಗೆ ತಕ್ಕಂತೆ ಈ ಶಾಲೆಗೆ 7 ಕೊಠಡಿಗಳು ಬೇಕಾಗಿದ್ದು, ಈಗ 4 ಕೊಠಡಿಗಳಿವೆ. ಇದರಲ್ಲಿ 3 ಹಂಚಿನ ಕಟ್ಟಡ ಸುಸ್ಥಿತಿಯಲ್ಲಿವೆ. ಈಗ ಒಂದು ಕೊಠಡಿ ಶಿಥಿಲಾವಸ್ಥೆಯಿಂದ ಕುಸಿದು ಬಿದ್ದಿದೆ.
ಬಯಲಲ್ಲಿಯೇ ಪಾಠ: ಶಾಲೆಯಲ್ಲಿ ಅಗತ್ಯ ತಕ್ಕಂತೆ ಶಾಲಾ ಕೊಠಡಿಗಳು ಇಲ್ಲದ ಕಾರಣ ಮಕ್ಕಳು ಶಾಲೆಯ ಹೊರಗೆ ಬಯಲಿನಲ್ಲಿ ಪಾಠ ಅಧ್ಯಯನ ಮಾಡುತ್ತಿದ್ದಾರೆ. ಮಕ್ಕಳ ಸಂಖ್ಯೆ ಮತ್ತು ತರಗತಿಗೊಂದರಂತೆ ಶಾಲಾ ಕೊಠಡಿಗಳು ಇಲ್ಲದ ಕಾರಣ ಕೊಠಡಿ ಕೊರತೆ ಇರುವುದರಿಂದ ಪಾಠ ಮಾಡಲು ತೊಂದರೆಯಾಗಿದೆ.
ಗುಣಮಟ್ಟದ ಶಿಕ್ಷಣ: ಶಾಲೆಯಲ್ಲಿ 8 ಜನ ಶಿಕ್ಷಕರು ಪಾಠ ಮಾಡುತಿದ್ದು, ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ಚೆಸ್‌ನಲ್ಲಿ ಈ ಶಾಲೆಯ ಮಹಾಲಕ್ಷ್ಮೀ ಕೋರನ್ನವರ, ಶೈಲಾ ನಂದಿಕೇಶ್ವರ ಸೇರಿದಂತೆ ಇತರ ಮಕ್ಕಳು ರಾಜ್ಯ ಮತ್ತು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ, ಬಹುಮಾನ ಪಡೆದಿದ್ದಾರೆ. ವಾಲಿಬಾಲ್, ಕಬಡ್ಡಿ, ಖೋಖೋ ಪಂದ್ಯಾವಳಿಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ನೂತನ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ಸಿಎಂ, ಶಾಸಕ ಸಿದ್ದರಾಮಯ್ಯನವರು ಕಳೆದ ಜೂ.11 ರಂದು ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಆಗ್ರಹಿಸಿ ಮನವಿ ಸಲ್ಲಿಸಿದ್ದಾರೆ. ಶಾಲೆಯಲ್ಲಿ ಮೂಲ ಸೌಕರ್ಯಗಳಾದ ನೀರು, ಶೌಚಾಲಯ, ಆಟದ ಮೈದಾನ, ಕೊಠಡಿಗಳಲ್ಲಿ ಶಾಲಾ ಶಿಕ್ಷಕರೇ ಸ್ವಂತ ಹಣದಿಂದ ಪೈಪ್‌ಲೈನ್ ಅಳವಡಿಸಿ ನೀರಿನ ಸೌಕರ್ಯ ಮಾಡಿಕೊಂಡಿದ್ದಾರೆ. ಶಾಲೆಯಲ್ಲಿ ಶೌಚಾಲಯ ಇಲ್ಲದಾಗಿದೆ. ನೂತನ ಶೌಚಾಲಯ ನಿರ್ಮಾಣಕ್ಕಾಗಿ ಸರಕಾರದಿಂದ ಕಳೆದ ವರ್ಷವೇ ರೂ.1,75,000 ಮಂಜೂರಾಗಿದೆ. ಆದರೆ ಇದುವರೆಗೂ ಶೌಚಾಲಯ ನಿರ್ಮಿಸಿಲ್ಲ. ಇದರಿಂದ ಮಕ್ಕಳು ತೊಂದರೆ ಪಡುವಂತಾಗಿದೆ. ಆಟದ ಮೈದಾನ ಮತ್ತು ಕೊಠಡಿಗಳು ಇಲ್ಲದ ಕಾರಣ ಮಕ್ಕಳ ಕಲಿಕೆಗೆ ಬಹಳಷ್ಟು ತೊಂದರೆಯಾಗಿದೆ ಎಂದು ಪಾಲಕರು ಆತಂಕ ವ್ಯಕ್ತಪಡಿಸಿದ್ದಾರೆ.
ಜನಪ್ರತಿನಿಧಿಗಳು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ತುರ್ತು ಗಮನಹರಿಸಿ ಅಗತ್ಯ ಶಾಲಾ ಕೊಠಡಿಗಳನ್ನು ನಿರ್ಮಿಸುವುದರ ಜೊತೆಗೆ ಹಾಲಿ ಇರುವ ಕೊಠಡಿ ದುರಸ್ತಿ ಮಾಡಿಸಬೇಕು ಎಂದು ಪಾಲಕರು, ಎಸ್‌ಡಿಎಂಸಿ ಸದಸ್ಯರು, ಗ್ರಾಮಸ್ಥರು ಆಗ್ರಹಿಸಿದ್ದಾರೆ .
ಶಾಸಕ ಸಿದ್ದರಾಮಯ್ಯನವರು ಊರಿಗೆ ಭೇಟಿ ನೀಡಿದಾಗ ಶಾಲೆಗೆ ಅಗತ್ಯ ಕೊಠಡಿ ನಿರ್ಮಿಸಬೇಕು ಎಂದು ಮನವಿ
ಸಲ್ಲಿಸಲಾಗಿದೆ. ಈ ಕುರಿತು ಇಲಾಖೆಯ ಮೇಲಾಧಿಕಾರಿಗಳಿಗೂ ಸಹ ಬೇಡಿಕೆ ಸಲ್ಲಿಸಲಾಗಿದೆ.
ಬಿ.ಎಂ.ರೂಢಗಿ, ಶಾಲಾ ಮುಖ್ಯಶಿಕ್ಷಕಿ.
ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ತಕ್ಕಂತೆ ಶಾಲಾ ಕೊಠಡಿಗಳು ಇಲ್ಲದಾಗಿದೆ. ಇದರಿಂದ ಶಿಕ್ಷಣಕ್ಕೆ ತೊಂದರೆಯಾಗಿದೆ. ಕೂಡಲೇ ಸಂಬಂಧಿಸಿದವರು ಗಮನಹರಿಸಿ ಶೌಚಾಲಯ ಮತ್ತು ಅಗತ್ಯ ಶಾಲಾ ಕೊಠಡಿ ನಿರ್ಮಿಸಬೇಕು.
ಮಕ್ಕಳ ಪಾಲಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.