ಫಲಾನುಭವಿಗಳಿಗೆ ಮಂಜೂರಾತಿ ಪತ್ರ ಹಂಚಿಕೆ ಆಗ್ರಹ
Team Udayavani, Jun 24, 2018, 4:28 PM IST
ಗದಗ: ನಗರಸಭೆಯಿಂದ ಫಾರಂ ನಂ.3 ವಿತರಿಸುವುದು ಮತ್ತು ವಸತಿರಹಿತ ಫಲಾನುಭವಿಗಳಿಗೆ ಮಂಜೂರಾತಿ ಪತ್ರಗಳನ್ನು ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿ ರಾಜ್ಯ ಸ್ಲಂ ಜನಾಂದೋಲನ ಹಾಗೂ ಜಿಲ್ಲಾ ಕೊಳಚೆ ನಿವಾಸಿಗಳ ಹಿತರಕ್ಷಣ ಸಮಿತಿ ನೇತೃತ್ವದಲ್ಲಿ ನೂರಾರು ಸ್ಲಂ ನಿವಾಸಿಗಳು ಶುಕ್ರವಾರ ನಗರಸಭೆ ಮುಂದೆ ಪ್ರತಿಭಟನಾ ಧರಣಿ ನಡೆಸಿದರು.
ಈ ವೇಳೆ ನಗರಾಡಳಿತದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ನಗರಸಭೆ ಸ್ಲಂ ನಿವಾಸಿಗಳ ವಿರೋ ಧಿನೀತಿ ಅನುಸರಿಸುತ್ತಿದೆ. ವಸತಿರಹಿತ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ಹಂಚುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಗರದ ಸ್ಲಂ ಪ್ರದೇಶದ ಕುಟುಂಬಗಳಿಗೆ ಫಾರಂ ನಂ.3 ವಿತರಿಸಬೇಕು, ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಿಕೊಳ್ಳಲು ಅನುದಾನ ಮಂಜೂರು ಮಾಡಬೇಕು. ಸ್ಲಂ ಪ್ರದೇಶಗಳ ಅಭಿವೃದ್ಧಿಗಾಗಿ ಪ್ರತ್ಯೇಕ ಅನುದಾನ ಮೀಸಲಿಡಬೇಕು, ವಾಜಪೇಯಿ ನಗರ ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ಆಗಿದ್ದು, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಗಂಗಿಮಡಿ ಪ್ರದೇಶದಲ್ಲಿ 3630 ವಸತಿ ರಹಿತ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡುವ ಕಾಮಗಾರಿ ನಡೆಯುತ್ತಿದೆ. ಆದರೆ, 350 ಮೂಲ ವಸತಿ ರಹಿತ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಿ, ಉಳಿದವರನ್ನು ಪರಿಗಣಿಸಬೇಕು ಎಂದು ಒತ್ತಾಯಿಸಿದರು. ನಗರಸಭೆ ಅಧಿಕಾರಿಗಳು ಕೊಳಚೆ ಪ್ರದೇಶ ನಿವಾಸಿಗಳ ಅಗತ್ಯ ಬೇಡಿಕೆ ಈಡೇರಿಸುವಲ್ಲಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ನಗರಸಭೆ ಎದುರು ಕೊಳಚೆ ಪ್ರದೇಶದ ನೂರಾರು ನಿವಾಸಿಗಳೊಂದಿಗೆ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಸ್ಲಂ ಸಮಿತಿ ಪ್ರಧಾನ ಕಾರ್ಯದರ್ಶಿ ಇಮ್ತಿಯಾಜ್ ಆರ್.ಮಾನ್ವಿ, ಯುಸೂಫ್ ನಮಾಜಿ, ಅಶೋಕ ಮ್ಯಾಗೇರಿ, ಅಶೋಕ ಕುಡತಿನ್ನಿ, ಇಮ್ತಿಯಾಜ್ ಮಾನ್ವಿ, ಅಬೂಬ್ಕರ್ ಮಕಾನದಾರ, ಇಬ್ರಾಹಿಂ ಮುಲ್ಲಾ, ಮುಮ್ತಾಜ್ ಮಕಾನದಾರ, ಮೆಹರುನ್ನೀಸಾ ಡಾಲಾಯತ್, ನಜೀರಸಾಬ್ ಹಾಳಕೇರಿ ಹಾಗೂ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.