ಅಯ್ಯಪ್ಪ ಸ್ವಾಮಿ ದೇವಸ್ಥಾನ ಕಾತ್ರಜ್ ಪುಣೆ ಯೋಗ ಶಿಬಿರ, ಸಮ್ಮಾನ
Team Udayavani, Jun 24, 2018, 5:10 PM IST
ಪುಣೆ: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪುಣೆಯ ಕಾತ್ರಜ್ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘದ ಆಯೋಜಕತ್ವದಲ್ಲಿ ಜೂ. 21 ರಂದು ಬೆಳಗ್ಗೆ 8 ರಿಂದ ಯೋಗ ಶಿಬಿರವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ 2017-2018 ನೇ ಶೈಕ್ಷಣಿಕ ಎಚ್‌ಎಸ್‌ಸಿ ಮತ್ತು ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ಶೇ. 80 ಕ್ಕಿಂತ ಅಧಿಕ ಅಂಕಗಳನ್ನು ಪಡೆದ ಪುಣೆಯ ತುಳು ಕನ್ನಡಿಗ ವಿದ್ಯಾರ್ಥಿಗಳನ್ನು ದೇವಸ್ಥಾನದ ವತಿಯಿಂದ ಸಮ್ಮಾನಿಸಲಾಯಿತು. ಕಾತ್ರಜ್ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘದ ವಿಶ್ವಸ್ತ ಮಂಡಳಿಯ ಅಧ್ಯಕ್ಷ ಸುಭಾಷ್ ಶೆಟ್ಟಿ, ಸ್ಥಾಪಕಾಧ್ಯಕ್ಷ, ಕಾರ್ಯದರ್ಶಿ ರಘುರಾಮ್ ರೈ, ಕೋಶಾಧಿಕಾರಿ ಜಗದೀಶ್ ಶೆಟ್ಟಿ, ಉಪಾಧ್ಯಕ್ಷ ಸುಧಾಕರ್ ಶೆಟ್ಟಿ, ಮಾಜಿ ಅಧ್ಯಕ್ಷ ಶೇಖರ್ ಟಿ. ಪೂಜಾರಿ, ಜೊತೆ ಕಾರ್ಯದರ್ಶಿ ಸಚ್ಚಿದಾನಂದ ಶೆಟ್ಟಿ, ಜೊತೆ ಕೋಶಾಧಿಕಾರಿ ಬಾಲಕೃಷ್ಣ ಗೌಡ, ವಿಶ್ವಸ್ತ ಭಾಸ್ಕರ್ ಶೆಟ್ಟಿ, ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘದ ಕಾರ್ಯಕಾರಿ ಸಮಿತಿಯ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ವಿನೋದಾ ಶೆಟ್ಟಿ ಮತ್ತು ಪದಾಧಿಕಾರಿಗಳು ಅರ್ಹ ವಿದ್ಯಾರ್ಥಿಗಳಿಗೆ ಶಾಲು, ಪುಷ್ಪಗುತ್ಛ, ಸ್ಮರಣಿಕೆ ಹಾಗೂ ಆಶೀರ್ವಾದ ಹೊಟೇಲ್‌ನ ಮಾಲಕ ಮಾಧವ ಶೆಟ್ಟಿಯವರ ಪ್ರಾಯೋಜಕತ್ವದಲ್ಲಿ ಕೊಡಮಾಡುವ ಪ್ರೋತ್ಸಾಹ ಧನವನ್ನು ನೀಡಿ ಸಮ್ಮಾನಿಸಿ ಗೌರವಿಸಿದರು.
ಪುಣೆಯ ವಿವಿಧ ಹೈಸ್ಕೂಲ್ ಮತ್ತು ಕಾಲೇಜು ಗಳ ವಿದ್ಯಾರ್ಥಿಗಳಾದ ನಿಧಿ ಜೆ. ಶೆಟ್ಟಿ, ಪ್ರಥ್ವಿ ಬಿ. ಕೊಟ್ಟಾರಿ, ವಿಂಧ್ಯಾ ಪಿ. ಗೌಡ , ಸಂವೇದ್ ಎಸ್. ಶೆಟ್ಟಿ, ತ್ರಿಜûಾ ಗೌಡ, ಹರ್ಷ್ ಎಸ್. ಕೋಟ್ಯಾನ್, ಕೌಶಿಕ್ ಎಸ್. ಪೂಜಾರಿ, ಸ್ನೇಹಾ ಎಸ್. ಸಫಲಿಗ, ಅಸ್ಮಿತಾ ಎಸ್. ಸಾಲ್ಯಾನ್, ದೀಪಕ್ ಆರ್. ಮೂಲ್ಯ, ಸೌಜನ್ಯಾ ಜೆ. ಪೂಜಾರಿ, ಪಾರ್ಥ್ ಎಸ್. ಶೆಟ್ಟಿ, ಹೃದಯ್ ಅರ್. ಶೆಟ್ಟಿ, ಶ್ವೇತಾ ಮೂಲ್ಯ, ಅಕಾಂಕ್ಷ ದೇವಾಡಿಗ, ವೈಷ್ಣವಿ ಎಸ್. ಹೆಗ್ಡೆ, ದೇವಿಕಾ ಡಿ. ರಾವ್ ಮೊದಲಾದವರನ್ನು ಪ್ರತಿಭಾ ಪುರಸ್ಕಾರವನ್ನಿತ್ತು ಸಮ್ಮಾನಿಸಲಾಯಿತು.
ಪ್ರಾರಂಭದಲ್ಲಿ ಯೋಗ ದಿನ ಆಚರಣೆಯ ಅಂಗವಾಗಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘ ಮಹಿಳಾ ವಿಭಾಗದ ಸದಸ್ಯೆ, ಯೋಗ ಶಿಕ್ಷಕಿ ಪ್ರಮೀಳಾ ಜಗದೀಶ್ ಶೆಟ್ಟಿ ಇವರ ಮುಂದಾಳತ್ವ ದಲ್ಲಿ ಹಾಗೂ ಜಗದೀಶ್ ಶೆಟ್ಟಿಯವರ ಸಹಕಾರ ದೊಂದಿಗೆ ಯೋಗ ಶಿಬಿರವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು, ಹೆಚ್ಚಿನ ಸಂಖ್ಯೆಯ ಭಕ್ತರು, ಯೋಗಾಸಕ್ತರು, ವಿದ್ಯಾರ್ಥಿಗಳು, ಮಕ್ಕಳ ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.
ಅಧ್ಯಕ್ಷ ಸುಭಾಷ್ ಶೆಟ್ಟಿ ಇವರು ಮಾತನಾಡಿ, ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಈ ಸುಸಂದರ್ಭದಲ್ಲಿ ಅಯ್ಯಪ್ಪ ದೇವಸ್ಥಾನದ ಸೇವಾ ಸಂಘದ ವತಿಯಿಂದ ಪ್ರತಿ ವರ್ಷವೂ ಯೋಗ ದಿನಾಚರಣೆ ಹಾಗೂ ವಿದ್ಯಾರ್ಥಿಗಳ ಸಮ್ಮಾನ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಕ್ಕಳಿಗೆ ಪ್ರೋತ್ಸಾಹಿಸುತ್ತಿದೆ. ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ ಮುಂದಿನ ವಿದ್ಯಾಭ್ಯಾಸಕ್ಕೆ ಶುಭ ಕೋರಿದರು. ಅಲ್ಲದೆ ಯೋಗ ಶಿಬಿರದ ಉಸ್ತುವಾರಿ ವಹಿಸಿಕೊಂಡು ಉತ್ತಮ ಯೋಗಾಭ್ಯಾಸವನ್ನು ನಡೆಸಿಕೊಟ್ಟ ಪ್ರಮೀಳಾ ಜಗದೀಶ್ ಶೆಟ್ಟಿ ದಂಪತಿಯನ್ನು ಶಾಲು ಹೊದೆಸಿ, ಪುಷ್ಪಗುತ್ಛವನ್ನಿತ್ತು ಅಭಿನಂದಿಸಿದರು. ಕೊನೆಯಲ್ಲಿ ಅಂಬಿಕಾ ವಿಶ್ವನಾಥ್ ಶೆಟ್ಟಿ ಮತ್ತು ಶೇಖರ್ ಟಿ. ಪೂಜಾರಿ ಅವರ ಪ್ರಾಯೋಜಕತ್ವದಲ್ಲಿ ಲಘು ಉಪಾಹಾರದ ವ್ಯವಸ್ಥೆಯನ್ನು ಆಯೋಜಿಸ ಲಾಗಿತ್ತು. ವಿಶ್ವಸ್ತ ಮಂಡಳಿಯ ಕಾರ್ಯದರ್ಶಿ ರಘುರಾಮ್ ರೈ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಚಿತ್ರ-ವರದಿ : ಹರೀಶ್ ಪಡುಬಿದ್ರೆ ಪುಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್‌ಪ್ರೆಸ್ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.