ಶ್ರೀ ಆದಿಶಕ್ತಿ ಕನ್ನಡ ಶಾಲೆ:ಉಚಿತ ಪಠ್ಯ ಪುಸ್ತಕ ವಿತರಣೆ,ಅಭಿನಂದನೆ

Team Udayavani, Jun 24, 2018, 5:18 PM IST

2306mum05.jpg

ಥಾಣೆ: ಶ್ರೀ ಆದಿಶಕ್ತಿ ಕನ್ನಡ ಸಂಘ ಸಂಚಾಲಿತ ಶ್ರೀ ಆದಿಶಕ್ತಿ ಕನ್ನಡ ಶಾಲೆಯಲ್ಲಿ ಉಚಿತ ಪಠ್ಯ ಪುಸ್ತಕ ವಿತರಣೆ ಹಾಗೂ ಎಸ್‌ಎಸ್‌ಸಿಯಲ್ಲಿ ಶಾಲೆಗೆ ಶೇ. 100 ಫಲಿತಾಂಶ ತಂದುಕೊಟ್ಟ ವಿದ್ಯಾರ್ಥಿಗಳಿಗೆ ಅಭಿನಂದನ ಕಾರ್ಯಕ್ರಮವು ಜೂ. 15ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.

ಶಾಲಾ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಪ್ರಾರಂಭಗೊಂಡಿತು. ಮಾಧ್ಯಮಿಕ ವಿಭಾಗದ ಮುಖ್ಯ ಶಿಕ್ಷಕಿ ವಿಮಲಾ ವಿ. ಕರ್ಕೇರ ಅವರು ಸ್ವಾಗತಿಸಿದರು. ಹತ್ತನೇ ತರಗತಿಯ ವಿದ್ಯಾರ್ಥಿಗಳು ತಮ್ಮ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ ಸಹಕರಿಸಿದ ಶಿಕ್ಷಕರಿಗೆ ಮತ್ತು ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘ ಹಾಗೂ ಶಾಲೆಯ ಅಧ್ಯಕ್ಷ ಭಾಸ್ಕರ್‌ ಎಂ. ಶೆಟ್ಟಿ ಇವರು ಮಾತನಾಡಿ, ಎಸ್‌ಎಸ್‌ಸಿಯಲ್ಲಿ ವಿದ್ಯಾರ್ಥಿಗಳ ಶೇಕಡಾ 100 ಫಲಿತಾಂಶಕ್ಕಾಗಿ ಕಾರಣಕರ್ತರಾದ ಶಿಕ್ಷಕ ವರ್ಗದವರನ್ನು ಅಭಿನಂದಿಸಿದರು. ಅಲ್ಲದೆ ವಿದ್ಯಾರ್ಥಿಗಳು  ಮುಂದಿನ ಕಾಲೇಜು ಜೀವನದಲ್ಲಿಯೂ ಸಂಸ್ಕಾರವಂತರಾಗಿ ಬಾಳಬೇಕು. ಶಿಕ್ಷಣಕ್ಕೆ ಮೊದಲ ಪ್ರಾಧಾನ್ಯತೆಯನ್ನು ನೀಡಿ ವಿದ್ಯಾರ್ಥಿಗಳು ಬೆಳೆಯಬೇಕು ಎಂದು ನುಡಿದು ಮಕ್ಕಳ ಮುಂದಿನ ಶೈಕ್ಷಣಿಕ ಭವಿಷ್ಯಕ್ಕೆ ಶುಭಹಾರೈಸಿದರು.

ಸಂಸ್ಥೆಯ ಮಾಜಿ ಅಧ್ಯಕ್ಷ ಶಿಮಂತೂರು ಶಂಕರ ಶೆಟ್ಟಿ ಇವರು ಮಾತನಾಡಿ, ವಿದ್ಯಾರ್ಥಿಗಳ ಮುಂದಿನ ಜೀವನವನ್ನು ಆದರ್ಶಯುತವಾಗಿ ನಡೆಸಬೇಕು. ನಿಮ್ಮೆಲ್ಲರ ಜೀವನದ ಶಿಲ್ಪಿಗಳು ನೀವೆ ಆಗಬೇಕು. ಭವಿಷ್ಯದಲ್ಲಿ ಉತ್ತಮ ಹುದ್ಧೆಗಳನ್ನು ಅಲಂಕರಿಸಿದ ಈ ಶಾಲೆಯ ಋಣವನ್ನು ತೀರಿಸುವಲ್ಲೂ ಎಲ್ಲರು ಮುಂದಾಗಬೇಕು ಎಂದರು.

ಮಾಧ್ಯಮಿಕ ಶಾಲಾ ಮುಖ್ಯ ಶಿಕ್ಷಕಿ ವಿಮಲಾ ಕರ್ಕೇರ ಮತ್ತು ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರವೀಂದ್ರ ಬಿ. ಅವರು ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿ ಶುಭ ಹಾರೈಸಿದರು. ಶಿಕ್ಷಕ ವೃಂದದವರಾದ ವೆಂಕಟರಮಣ ಶೆಣೈ ಮತ್ತು ಸಂತೋಷ್‌ ದೊಡ್ಡಮನಿ ಅವರು ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಶುಭಹಾರೈಸಿದರು. ಅಧ್ಯಕ್ಷ ಭಾಸ್ಕರ ಎಂ. ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಿದರು. ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಘದ ವತಿಯಿಂದ ಕಿರುಕಾಣಿಕೆಯನ್ನು ಪ್ರದಾನಿಸಲಾಯಿತು.

ವೇದಿಕೆಯಲ್ಲಿ ಸಂಘದ ಕಾರ್ಯದರ್ಶಿ ವಾದಿರಾಜ್‌ ಶೆಟ್ಟಿ ಉಪಸ್ಥಿತರಿದ್ದರು. ಶಾಲಾ ಸಹಶಿಕ್ಷಕ ವೆಂಕಟರಮಣ ಶೆಣೈ ಕಾರ್ಯಕ್ರಮ ನಿರ್ವಹಿಸಿದರು. ಸಂತೋಷ್‌  ದೊಡ್ಡಮನಿ  ವಂದಿಸಿದರು. ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಶಿಕ್ಷಕ ವೃಂದದವರು, ಶಿಕ್ಷಕೇತರ ಸಿಬಂದಿಗಳು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಮಾರಂಭದ  ಯಶಸ್ಸಿಗೆ ಸಹಕರಿಸಿದರು.

ಟಾಪ್ ನ್ಯೂಸ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.