ಬಜೆಟ್ ಅಧಿವೇಶನ ನಂತರ ಕುಲಪತಿ ನೇಮಕ ಪ್ರಕ್ರಿಯೆ
Team Udayavani, Jun 25, 2018, 6:50 AM IST
ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯ ಸೇರಿ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಕುಲಪತಿ
ಹುದ್ದೆಯ ನೇಮಕಾತಿ ಬಗ್ಗೆ ಬಜೆಟ್ ಅಧಿವೇಶನದ ನಂತರ ಮುಖ್ಯಮಂತ್ರಿ ಕುಮಾರಸ್ವಾಮಿಯವರೊಂದಿಗೆ
ಚರ್ಚಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 27ರಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ
ಯವರು ಉನ್ನತ ಶಿಕ್ಷಣ ಇಲಾಖೆ ಆದ್ಯತೆಗಳ ಕುರಿತು ಬಜೆಟ್ ಪೂರ್ವ ಸಭೆ ಕರೆದಿದ್ದಾರೆ. ಇಲಾಖೆಯ ತುರ್ತು
ಅಗತ್ಯತೆಗಳನ್ನು ಮುಖ್ಯಮಂತ್ರಿಗಳ ಮುಂದಿಡಲಿದ್ದೇವೆ. ಸರ್ಕಾರಿ ಪದವಿ ಕಾಲೇಜಿಗೆ ಮೂಲಸೌಕರ್ಯ ಕಲ್ಪಿಸುವುದೇ ನಮ್ಮ ಮೊದಲ ಆದ್ಯತೆಯಾಗಿದೆ.
ಮೈಸೂರು ವಿಶ್ವವಿದ್ಯಾಲಯ ಸೇರಿ ರಾಜ್ಯದ ಮೂರು ವಿವಿಗಳಲ್ಲಿ ಖಾಲಿ ಇರುವ ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳ ನೇಮಕ ಸಂಬಂಧ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಲಾಗುವುದು. ಅಲ್ಲದೆ, ಪದವಿ ಕಾಲೇಜಿನಲ್ಲಿ ಖಾಲಿ ಇರುವ 400 ಪ್ರಾಂಶುಪಾಲರ ಹುದ್ದೆ ನೇಮಕ ಸಂಬಂಧವೂ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ಹೇಳಿದರು.
ಯುಜಿಸಿ 7ನೇ ವೇತನ ಆಯೋಗದಂತೆ ಪರಿಷ್ಕೃತ ವೇತನ ನೀಡುವಂತೆ ಪ್ರಾಧ್ಯಾಪಕರು ಮನವಿ ಮಾಡಿದ್ದಾರೆ. ಈ ಸಂಬಂಧ ಬಿಹಾರ, ಪಶ್ಚಿಮಬಂಗಾಳ, ಆಂಧ್ರಪ್ರದೇಶ ಸೇರಿ ವಿವಿಧ ರಾಜ್ಯದ ಮಾಹಿತಿಯನ್ನು ಕಲೆ ಹಾಕುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಅವಶ್ಯವಾಗಿದ್ದು, ಹಿಂದಿನ ಸರ್ಕಾರ ಘೋಷಣೆ ಮಾಡಿದ್ದಂತೆ ಎಲ್ಲ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್ ನೀಡುತ್ತೇವೆ. ಹಂಚಿಕೆಯಲ್ಲಿ ಆಗಿರುವ ಗೊಂದಲವನ್ನು ಸರಿಪಡಿಸಲಿದ್ದೇವೆ ಎಂದರು.
ಕೆಎಸ್‌ಒಯು ಮಾನ್ಯತೆ ಪಡೆಯುತ್ತೇವೆ
ಮೈಸೂರಿನಲ್ಲಿರುವ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ (ಕೆಎಸ್‌ಒಯು) ಮಾನ್ಯತೆಯನ್ನು ಪಡೆದೇ ಪಡೆ
ಯುತ್ತೇವೆ. ಈ ಸಂಬಂಧ ನಾನೇ ಖುದ್ದಾಗಿ ವಿಶ್ವವಿದ್ಯಾಲಯ ಅನುದಾನ ಆಯೋಗದ ಮುಖ್ಯಸ್ಥರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದೇನೆ. ಕೆಎಸ್‌ಒಯು ಅಭ್ಯರ್ಥಿಗಳಿಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತೇವೆ. ವಿಶ್ವವಿದ್ಯಾಲಯದ ಭೂಮಿಯನ್ನು ಯಾರಿಗೂ ನೀಡುವುದಿಲ್ಲ ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.