ರಾಜಧಾನಿಗೆ 216ನೇ ರ್‍ಯಾಂಕ್‌


Team Udayavani, Jun 25, 2018, 11:55 AM IST

rajadhani.jpg

ಬೆಂಗಳೂರು: ತ್ಯಾಜ್ಯ ವಿಲೇವಾರಿ, ಸಂಸ್ಕರಣೆ, ನಗರದ ಸ್ವತ್ಛತೆಗೆ ಬಿಬಿಎಂಪಿ ಕೈಗೊಂಡ ಕ್ರಮಗಳು ಕೇಂದ್ರ ಸರ್ಕಾರದ ಪ್ರಶಂಸೆಗೆ ಪಾತ್ರವಾದರೂ, ಕೇಂದ್ರ ನಗರಭಿವೃದ್ಧಿ ಇಲಾಖೆಯ ಸ್ವಚ್ಛ ಸರ್ವೆಕ್ಷನ್‌ ಅಭಿಯಾನದಲ್ಲಿ ಬೆಂಗಳೂರಿಗೆ 216ನೇ ರ್‍ಯಾಂಕ್‌ ಸಿಕ್ಕಿದೆ.

ಕ್ಲೀನ್‌ ಬೆಂಗಳೂರು ಅಭಿಯಾನ, ವಾರ್ಡ್‌ವಾರು ಕಾಂಪೋಸ್ಟ್‌ ಸಂತೆ, ಇ-ಶೌಚಾಲಯ, ವೈಜ್ಞಾನಿಕ ತ್ಯಾಜ್ಯ ಸಂಸ್ಕರಣೆ ಸೇರಿದಂತೆ ಹಲವು ಕಾರ್ಯಕ್ರಮಗಳ ಮೂಲಕ ಈ ಬಾರಿಯ ಅಭಿಯಾನದಲ್ಲಿ ಉತ್ತಮ ರ್‍ಯಾಂಕಿಂಗ್‌ ಪಡೆಯುವ ಭರವಸೆಯನ್ನು ಪಾಲಿಕೆ ಹೊಂದಿತ್ತು. ಆದರೆ, ಶನಿವಾರ ಘೋಷಣೆಯಾಗಿರುವ ಪಟ್ಟಿಯಲ್ಲಿ ಬಿಬಿಎಂಪಿಗೆ ಹಿನ್ನಡೆಯಾಗಿದೆ.

ಸ್ವತ್ಛ ಸವೇಕ್ಷಣ್‌ ಸಮೀಕ್ಷೆಯಲ್ಲಿ ಕಳೆದ ಎರಡು ವರ್ಷಗಳಿಂದ ಉತ್ತಮ ಸ್ಥಾನ ಪಡೆಯುವಲ್ಲಿ ವಿಫ‌ಲವಾಗಿದ್ದ ಬಿಬಿಎಂಪಿ, 2018ನೇ ಸಾಲಿನಲ್ಲಿ ಉತ್ತಮ ರ್‍ಯಾಂಕ್‌ ಪಡೆಯಲೇಬೇಕೆಂಬ ಉದ್ದೇಶದಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು.

ಅದರಂತೆ ಸ್ವತ್ಛತೆ ಕಾರ್ಯಕ್ರಮ, ಮೊಬೈಲ್‌ ಆ್ಯಪ್‌ ಮೇಲ್ವಿಚಾರಣೆ, ಅಭಿಪ್ರಾಯ ಸಂಗ್ರಹ, ತ್ಯಾಜ್ಯದಿಂದ ವಿದ್ಯುತ್‌ ತಯಾರಿಕಾ ಘಟಕಗಳ ನಿರ್ಮಾಣ, ರಸ್ತೆ, ಮೇಲ್ಸೇತುವೆ ಸುಂದರೀಕರಣಕ್ಕಾಗಿ ಕ್ಲೀನ್‌ ಬೆಂಗಳೂರು ಅಭಿಯಾನ, ಯಾಂತ್ರೀಕೃತ ಕಸ ಗುಡಿಸುವ ಯಂತ್ರ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ರೂಪಿಸಿತ್ತು.

ಇವೆಲ್ಲದರ ಹೊರತಾಗಿಯೂ ಬಿಬಿಎಂಪಿಗೆ 216ನೇ ಸ್ಥಾನ ಸಿಕ್ಕಿರುವುದು ಅಭಿಯಾನದ ಬಗ್ಗೆಯೇ ಅನುಮಾನ ಮೂಡಿಸುವಂತೆ ಮಾಡಿದ್ದು, ಮುಂದಿನ ವರ್ಷದಿಂದ ಅಭಿಯಾನದಲ್ಲಿ ಪಾಲ್ಗೊಳ್ಳದಿರಲು ಪಾಲಿಕೆ ಚಿಂತಿಸಿದೆ ಎನ್ನಲಾಗಿದೆ.

ಅಭಿಯಾನದಿಂದ ದೂರ: ಕೇಂದ್ರದಿಂದ ಆಯೋಜಿಸುತ್ತಿರುವ ಸ್ವತ್ಛ ಸರ್ವೇಕ್ಷನ್‌ನಲ್ಲಿ ಪ್ರತಿ ಬಾರಿ ಬೆಂಗಳೂರಿಗೆ ಕಳಪೆ ಸ್ಥಾನ ದೊರೆಯುವುದು ಅನುಮಾನಗಳಿಗೆ ಕಾರಣವಾಗಿದ್ದು, ಮುಂದಿನ ವರ್ಷದಿಂದ ಅಭಿಯಾನದಲ್ಲಿ ಭಾಗವಹಿಸದಿರುವ ಕುರಿತು ಪಾಲಿಕೆ ಹಾಗೂ ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗುತ್ತಿದೆ. ಜತೆಗೆ ಸರ್ವೇಕ್ಷನ್‌ಗೆ ಪರ್ಯಾಯವಾಗಿ ರಾಜ್ಯಮಟ್ಟದಲ್ಲಿಯೇ ಅಭಿಯಾನ ನಡೆಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಲು ಚಿಂತನೆ ನಡೆಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಬಿಬಿಎಂಪಿಗೆ ಮಾರಕವಾದ ಅಂಶವೇನು?: ನಗರಾಭಿವೃದ್ಧಿ ಇಲಾಖೆಯ ಸ್ವಚ್ಛ ಸರ್ವೇಕ್ಷಣ್‌ ಸಮೀಕ್ಷೆಯಂತೆ ನಗರಗಳು ಸಂಪೂರ್ಣವಾಗಿ “ಬಯಲು ಶೌಚ ಮುಕ್ತ’ ಎಂದು ಘೋಷಿಸಿಕೊಳ್ಳಬೇಕು. ರ್‍ಯಾಂಕಿಂಗ್‌ ನೀಡುವ ವೇಳೆಯಲ್ಲಿಯೂ ಇದೇ ಅಂಶವನ್ನು ಪ್ರಮುಖ ಮಾನದಂಡವಾಗಿ ಪರಿಗಣಿಸಲಾಗುತ್ತದೆ.

ಆದರೆ, ಬಿಬಿಎಂಪಿ ವ್ಯಾಪ್ತಿಯಲ್ಲಿನ 198 ವಾರ್ಡ್‌ಗಳ ಪೈಕಿ ಈವರೆಗೆ ಯಾವುದೇ ವಾರ್ಡ್‌ ಅಧಿಕೃತವಾಗಿ ಬಯಲು ಶೌಚ ಮುಕ್ತವಾಗಿಲ್ಲ. ಸಮೀಕ್ಷೆ ಆರಂಭವಾದ ಹಿನ್ನೆಲೆಯಲ್ಲಿ ಸುಮಾರು 100 ವಾರ್ಡ್‌ಗಳು ಬಯಲು ಶೌಚ ಮುಕ್ತವಾಗಿದೆ ಎಂಬ ಪ್ರಸ್ತಾವನೆಯನ್ನು ಪಾಲಿಕೆಯ ಕೌನ್ಸಿಲ್‌ ಮುಂದಿಟ್ಟರೂ, ಈವರೆಗೆ ಅನುಮೋದನೆ ಸಿಕ್ಕಿಲ್ಲ.

ಹಲವು ಕಾರ್ಯಕ್ರಮಗಳನ್ನು ರೂಪಿಸಿದರೂ ಬೆಂಗಳೂರಿಗೆ ಉತ್ತಮ ರ್‍ಯಾಂಕಿಂಗ್‌ ದೊರೆಯದಿರುವುದು ಬೇಸರ ತಂದಿದೆ. ಯಾವ ಕಾರಣದಿಂದ ಬೆಂಗಳೂರಿಗೆ ಕಡಿಮೆ ರ್‍ಯಾಂಕ್‌ ಬಂದಿದೆ ಎಂಬ ಕುರಿತು ಮಾಹಿತಿ ನೀಡುವಂತೆ ಕೇಂದ್ರ ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆಯಲಾಗುವುದು.
-ಆರ್‌.ಸಂಪತ್‌ ರಾಜ್‌, ಮೇಯರ್‌

ಟಾಪ್ ನ್ಯೂಸ್

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

1-nikil

Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪ‌ಲಾಯನ ಮಾಡಲ್ಲ: ನಿಖಿಲ್‌

1-bank

Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?

renukaacharya

BJP; ಹರಕುಬಾಯಿ ನಾಯಕರಿಂದಲೇ ಸೋಲು: ರೇಣುಕಾಚಾರ್ಯ ಆಕ್ರೋಶ

Arrest

Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

6-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕಳ್ಳತನ: ಇಬ್ಬರು ಆರೋಪಿಗಳ ಸೆರೆ‌, 60 ಫೋನ್‌ ಜಪ್ತಿ

5-bng

Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ

4-bng

Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

1-nikil

Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪ‌ಲಾಯನ ಮಾಡಲ್ಲ: ನಿಖಿಲ್‌

1-bank

Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.