ತರಗತಿಗೆ ಹಳೆಯ ಕಟ್ಟಡ, ಗುಜರಿ ದಾಸ್ತಾನಿಗೆ ಹೊಸ ಕೊಠಡಿ!


Team Udayavani, Jun 25, 2018, 3:29 PM IST

25-june-12.jpg

ಉಪ್ಪಿನಂಗಡಿ: ಹೊಸ ಕಟ್ಟಡವಿದ್ದರೂ ಈ ಶಾಲೆಯಲ್ಲಿ ಅದನ್ನು ಬಳಸದೆ ಬಾಗಿಲು ಹಾಕಿದ್ದು, ಅವ್ಯವಸ್ಥೆ ಸೃಷ್ಟಿಯಾಗಿದೆ. ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ಕರಾಯ ಸರಕಾರಿ ಪ್ರೌಢಶಾಲೆಯ ದುಸ್ಥಿತಿ ಇದು. ಎರಡು ವರ್ಷಗಳ ಹಿಂದೆ ಶಾಲೆಗೆ ನೂತನ ಕಟ್ಟಡ ನಿರ್ಮಾಣವಾಗಿದ್ದು, ಅದನ್ನು ಬಳಸಬೇಕಾದ ಶಿಕ್ಷಕ ವೃಂದ, ಅದಕ್ಕೆ ಬೀಗ ಹಾಕಿಟ್ಟಿದೆ. ಹಳೆಯ ಕಟ್ಟಡದಲ್ಲೇ ಪಾಠ-ಪ್ರವಚನ ನೀಡಲಾಗುತ್ತಿದ್ದು, ನೂತನ ಕಟ್ಟಡವನ್ನು ನಿರುಪಯುಕ್ತ ಸ್ಥಿತಿಯಲ್ಲಿ ಇರಿಸಲಾಗಿದೆ.

ಕರಾಯ ಸರಕಾರಿ ಪ್ರೌಢಶಾಲೆಗೆ 2013-14ರಲ್ಲಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆ ಅಡಿಯಲ್ಲಿ 43 ಲಕ್ಷ ರೂ. ಮಂಜೂರು ಆಗಿದ್ದು, 4 ಕೊಠಡಿಗಳನ್ನು ಒಳಗೊಂಡಿರುವ ಕಟ್ಟಡವನ್ನು ನಿರ್ಮಿಸಲಾಗಿದೆ. 2016ರಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು, ಕಟ್ಟಡವನ್ನು ಬಳಕೆಗಾಗಿ ಶಾಲೆಗೆ ಹಸ್ತಾಂತರಿಸಲಾಗಿದೆ. ಅದಾಗಿ ಎರಡು ವರ್ಷಗಳೇ ಕಳೆದರೂ ತರಗತಿ ನಡೆಸಲು ಅದನ್ನು ಬಳಸಿಕೊಂಡಿಲ್ಲ. ಹಳೆಯ ಕಟ್ಟಡದಲ್ಲೇ ಮಕ್ಕಳನ್ನು ಕೂರಿಸಿ ತರಗತಿ ನಡೆಸುತ್ತಿದ್ದು, ಹೊಸ ಕಟ್ಟಡವೂ ಶಿಥಿಲಗೊಳ್ಳುತ್ತಿದೆ ಎಂದು ಮಕ್ಕಳ ಹೆತ್ತವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಾಲಾ ಕಟ್ಟಡದಲ್ಲಿ ಒಟ್ಟು ನಾಲ್ಕು ಕೊಠಡಿಗಳಿವೆ. ಇವುಗಳ ಪೈಕಿ ಒಂದರಲ್ಲಿ ಶಾಲೆಯ ಹಳೆಯ ಗುಜರಿ ಸಾಮಗ್ರಿಗಳನ್ನು ದಾಸ್ತಾನು ಇಡಲಾಗಿದೆ. ಇನ್ನೆರಡು ಕೊಠಡಿಗಳಲ್ಲಿ ಶಾಲೆಯ ಹಳೆಯ ಬೆಂಚು- ಡೆಸ್ಕ್ಗಳನ್ನು ಇಡಲಾಗಿದೆ. ಇನ್ನೊಂದು ಕೊಠಡಿ ಸಭಾಂಗಣ ರೀತಿಯಲ್ಲಿ ಇದ್ದು, ಇದರಲ್ಲಿ ಒಂದು ಸಭೆ ನಡೆಸಿರುವ ಕುರುಹು ಕಂಡು ಬರುತ್ತಿದೆ. ಮತ್ತೊಂದು ಕೊಠಡಿ ಖಾಲಿ ಯಾಗಿಯೇ ಇದೆ. ಎಲ್ಲ ಕೊಠಡಿಗಳ ಬಾಗಿಲು ಮುಚ್ಚಿ, ಬೀಗ ಹಾಕಲಾಗಿದೆ.

ಬಹಳಷ್ಟು ಶಾಲೆಗಳಲ್ಲಿ ಇಂತಹ ಸೌಲಭ್ಯ ಇರುವುದಿಲ್ಲ. ಹೊಸ ಕಟ್ಟಡವಿದ್ದರೂ ಬಳಸಿಕೊಳ್ಳಲು ಇಚ್ಛಾಶಕ್ತಿ ಇಲ್ಲದಂತಾಗಿದೆ. ಹೊಸ ಕಟ್ಟಡವನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿಗಳ ಹೆತ್ತವರು, ಗ್ರಾಮಸ್ಥರು ಶಿಕ್ಷಣ ಇಲಾಖೆಯನ್ನು ಆಗ್ರಹಿಸಿದ್ದಾರೆ.

ತರಗತಿ ನಡೆಸುತ್ತಿದ್ದೇವೆ 
ಶಾಲಾ ಮುಖ್ಯ ಶಿಕ್ಷಕ ಶಿವಬಾಳು ಪ್ರತಿಕ್ರಿಯಿಸಿ, ತರಗತಿ ನಡೆಸುತ್ತೇವೆ. ಒಂದರಲ್ಲಿ ಲೈಬ್ರೆರಿ, ಇನ್ನೊಂದರಲ್ಲಿ ವಿಜ್ಞಾನ ಪರಿಕರ ಇಟ್ಟಿದ್ದೇವೆ. ಶೀಘ್ರದಲ್ಲೇ ಹಳೆ ಕಟ್ಟಡದಲ್ಲಿರುವ ತರಗತಿಗಳನ್ನು ಅಲ್ಲಿಗೆ ಸ್ಥಳಾಂತರ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಕಳಪೆ ಕಾಮಗಾರಿ
ಕಟ್ಟಡ ನಿರ್ಮಿಸಿದ ಗುತ್ತಿಗೆದಾರರು ಕಳಪೆ ಮಟ್ಟದ ಕಾಮಗಾರಿ ನಿರ್ವಹಿಸದ ಹಿನ್ನೆಲೆಯಲ್ಲಿ ಈ ಹಿಂದಿನ ಶಾಸಕರು ಉದ್ಘಾಟನೆ ಮಾಡಲು ಒಪ್ಪಿರಲಿಲ್ಲ.
– ಜಯವಿಕ್ರಮ್‌ ಕಲಾಪು
ಅಧ್ಯಕ್ಷರು, ತಣ್ಣೀರುಪಂಥ ಗ್ರಾ.ಪಂ.

ಟಾಪ್ ನ್ಯೂಸ್

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ಜೈಲು ಶಿಕ್ಷೆ

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

9-uv-fusion

Grandfather: ಬಡ ತಾತನ ಹೃದಯ ಶ್ರೀಮಂತಿಕೆ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ಜೈಲು ಶಿಕ್ಷೆ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.