ಮಹಾರಾಣಾ ಪ್ರತಾಪ್ ಯುವಕರಿಗೆ ಮಾದರಿ: ಶೆಟ್ಟರ
Team Udayavani, Jun 25, 2018, 5:07 PM IST
ಹುಬ್ಬಳ್ಳಿ: ಧೈರ್ಯ ಹಾಗೂ ಶೂರತನಕ್ಕೆ ಹೆಸರಾಗಿದ್ದ ರಾಷ್ಟ್ರವೀರ ಮಹಾರಾಣಾ ಪ್ರತಾಪ ಸಿಂಗ್ ಇಂದಿನ ಯುವಕರಿಗೆ ಮಾದರಿ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು. ಮಹಾರಾಣಾ ಪ್ರತಾಪ ಸಿಂಗ್ ಅವರ 478ನೇ ಜಯಂತಿ ಪ್ರಯುಕ್ತ ಇಲ್ಲಿನ ಕೋರ್ಟ್ ವೃತ್ತದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತನ್ನ ರಾಜ್ಯವನ್ನು ಸುಭಿಕ್ಷೆಯಿಂದ ಮುನ್ನಡೆಸುವ ಕಾರಣಕ್ಕೆ ಬಲಿಷ್ಠ ರಾಜರನ್ನು ಹಿಮ್ಮೆಟ್ಟಿಸಿದ ಕೀರ್ತಿ ಇವರದ್ದು. ಇವರ ಶೂರತನ ಹಾಗೂ ಧೈರ್ಯ ಇಂದಿನ ಯುವ ಸಮೂಹಕ್ಕೆ ಮಾದರಿ ಎಂದರು.
ದೇಶದಲ್ಲಿ ಹೆಚ್ಚಾಗಿರುವ ಉಗ್ರರ ಹಾಗೂ ನಕ್ಸಲ್ ಚಟುವಟಿಕೆಯನ್ನು ಸೆದೆಬಡೆಯಲು ರಾಣಾ ಪ್ರತಾಪಸಿಂಗ್ ನಡೆಸಿದ ಹೋರಾಟಗಳು ಮರುಕಳಿಸಬೇಕಿದೆ. ಇಂದಿನ ಪ್ರಧಾನಿ ನರೇಂದ್ರ ಮೋದಿ ದೇಶ ವಿರೋಧಿ ಚಟುವಟಿಕೆ ನಡೆಸುತ್ತಿರುವ ಉಗ್ರ ಹಾಗೂ ನಕ್ಸಲ್ ಚಟುವಟಿಕೆ ವಿರುದ್ಧ ದೊಡ್ಡ ಸಮರವನ್ನೇ ಸಾರಿದ್ದಾರೆ. ದೇಶದಲ್ಲಿ ಬೇರು ಸಮೇತ ಸಮಾಜಘಾತುಕ ಶಕ್ತಿಗಳನ್ನು ಕಿತ್ತು ಹಾಕಬೇಕೆಂಬ ಪಣ ತೊಟ್ಟಿದ್ದಾರೆ ಎಂದರು.
ಪ್ರಜ್ಞಾ ಪ್ರವಾಹ ದಕ್ಷಿಣ ಮಧ್ಯ ಕ್ಷೇತ್ರದ ಸಂಯೋಜಕ ರಘುನಂದನ ಮಾತನಾಡಿ, ಸಮಾಜ ಸುಧಾರಕರು, ಮಹಾನ್ ವ್ಯಕ್ತಿಗಳ ಜಯಂತಿಯನ್ನು ಕೇವಲ ಒಂದು ಸಮಾಜ ಆಚರಿಸುವುದಕ್ಕಿಂತ ಎಲ್ಲಾ ಸಮುದಾಯಗಳು ಒಗ್ಗೂಡಿಕೊಂಡು ಆಚರಿಸಿದಾಗ ಮಾತ್ರ ನಿಜವಾದ ಅರ್ಥ ಬರುತ್ತಿದೆ. ಇತ್ತೀಚಿನ ದಿನಗಳಲ್ಲಿ ಮನುಷ್ಯನ ಮನಸ್ಸು ಸಂಕುಚಿತಗೊಳ್ಳುತ್ತಿದ್ದು, ಮಹಾನ್ ವ್ಯಕ್ತಿಗಳನ್ನು ಒಂದು ಸಮಾಜಕ್ಕೆ ಸೀಮಿತ ಮಾಡಲಾಗುತ್ತಿದೆ. ಒಂದೊಂದು ಸಮಾಜಕ್ಕೊಬ್ಬ ಮಹಾನ್ ನಾಯಕರನ್ನಾಗಿ ಮಾಡಿಕೊಳ್ಳುವ ಸಂಕುಚಿತ ಭಾವನೆ ತೊಲಗಬೇಕಿದೆ. ಸಂಘಟನೆಯಲ್ಲಿ ಮಹಿಳೆಯರಿಗೆ ಪ್ರಾತಿನಿದ್ಯ ನೀಡುವ ಮೂಲಕ ಸಂಕುಚಿತ ಭಾವನೆಯಿಂದ ಹೊರಬರಬೇಕಿದೆ ಎಂದರು.
ಮಾಜಿ ಶಾಸಕ ಅಶೋಕ ಕಾಟವೆ, ಉದಯಸಿಂಗ್, ಗೋಪಾಲಸಿಂಗ್ ಹಜಾರೆ, ಪರ್ಬತಸಿಂಗ್ ಖಚಿ, ಸುಭಾಸಸಿಂಗ್ ಜಮಾದಾರ, ಶಂಕರಪ್ಪ ಬಿಜವಾಡ, ಡಿ.ಕೆ. ಚವ್ಹಾಣ, ಬಲವೀರ ಸಿಂಗ್ ಠಾಕೂರ, ಸಂತೋಷ ಸಿಂಗ್ ಠಾಕೂರ, ಡಾಕಪ್ಪ ಕಲಾಲ, ಅನಂತಸಿಂಗ್ ರಜಪೂತ, ಸುರ್ಜಿತಸಿಂಗ್ ಠಾಕೂರ ಇನ್ನಿತರರಿದ್ದರು. ವೇದಿಕೆ ಕಾರ್ಯಕ್ರಮ ನಂತರ ಮಹಾರಾಣಾ ಪ್ರತಾಪಸಿಂಗ್‌ರ ಭಾವಚಿತ್ರ ಮೆರವಣಿಗೆ ರಾಣಾ ಪ್ರತಾಪ ಸಿಂಗ್ ವೃತ್ತದಿಂದ ಆರಂಭಗೊಂಡು ದಾಜಿಬಾನ ಪೇಟೆ ಮೂಲಕ ಹಳೇ ಹುಬ್ಬಳಿಯ ಅರವಿಂದ ನಗರದವರೆಗೆ ನಡೆಯಿತು. ಸಮಾಜ ಬಾಂಧವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.