29ರಂದು ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸಮಿತಿ ಅಂತಿಮ ಸಭೆ
Team Udayavani, Jun 26, 2018, 6:55 AM IST
ಬೆಂಗಳೂರು: ಸಮ್ಮಿಶ್ರ ಸರ್ಕಾರದ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳ ಪಟ್ಟಿ ಜೂ. 29ರಂದು ಸಿದ್ಧವಾಗಲಿದೆ.
ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪಿಸುವ ಸಮಿತಿಯ ಸಭೆ ಸೋಮವಾರ ಸಂಸದ ಎಂ.ವೀರಪ್ಪ ಮೊಯ್ಲಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾರ್ಯಕ್ರಮಗಳಲ್ಲಿ ಏನೆಲ್ಲಾ ಅಂಶಗಳಿರಬೇಕು ಎಂಬ ಬಗ್ಗೆಯೂ ಸಮಾಲೋಚನೆ ನಡೆಯಿತು. ಸಭೆ ಬಳಿಕ ಮಾತನಾಡಿದ ಸಮಿತಿ ಅಧ್ಯಕ್ಷ ಎಂ.ವೀರಪ್ಪ ಮೊಯ್ಲಿ, ಸಭೆಯಲ್ಲಿ ಸಾಲ ಮನ್ನಾ, ಸಾಮಾನ್ಯ ಕಾರ್ಯಕ್ರಮಗಳು
ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಚರ್ಚಿಸಿದ್ದು, ಜೂ.29ರಂದು ಅಂತಿಮ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಬಳಿಕ ಪಟ್ಟಿ ಹೊರ ಬೀಳಲಿದೆ ಎಂದು ಹೇಳಿದರು.
ಎಚ್.ಡಿ. ರೇವಣ್ಣ ಮಾತನಾಡಿ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಎಲ್ಲ ಇಲಾಖೆಗಳ ಜತೆ ಬಜೆಟ್ ಪೂರ್ವಬಾವಿ ಸಭೆ ನಡೆಸುತ್ತಿದ್ದಾರೆ ಅವರ ಸಭೆಯಲ್ಲಿನ ವಿಷಯಗಳ ಬಗ್ಗೆಯೂ ಸಮಿತಿ ಸಭೆಯಲ್ಲಿ ಚರ್ಚಿಸಿ ವರದಿ ಸಿದ್ಧಪಡಿಸುತ್ತೇವೆ ಎಂದರು.
ಮಾಜಿ ಸಿಎಂ ಸಿದ್ದರಾಮಯ್ಯ ಮಂಡಿಸಿದ್ದ ಬಜೆಟ್ನಲ್ಲಿನ ಕಾರ್ಯಕ್ರಮಗಳನ್ನು ಕೈ ಬಿಡುವುದಿಲ್ಲ. ಐದು ವರ್ಷದ
ಅವಧಿಯಲ್ಲಿ ಹಂತ ಹಂತವಾಗಿ ಎಲ್ಲವನ್ನೂ ಜಾರಿ ಮಾಡುತ್ತೇವೆ.
– ಆರ್.ವಿ.ದೇಶಪಾಂಡೆ,
ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸಮಿತಿ ಸದಸ್ಯ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.