ಉಗ್ರರಿಂದ ಜೀವ ಬೆದರಿಕೆ: ಮೋದಿ ಭದ್ರತೆ ಇನ್ನಷ್ಟು ಬಿಗಿ, No Roadshow
Team Udayavani, Jun 26, 2018, 3:42 PM IST
ಹೊಸದಿಲ್ಲಿ : ಸಿಪಿಐ-ಎಂ ಮಾವೋವಾದಿಗಳು ಮತ್ತು ಪಾಕ್ ಬೆಂಬಲಿತ ಉಗ್ರ ಸಮೂಹಗಳಿಂದ ಹೆಚ್ಚುತ್ತಿರುವ ಬೆದರಿಕೆಯನ್ನು ಪರಿಗಣಿಸಿ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಯನ್ನು ಕೇಂದ್ರ ಗೃಹ ಸಚಿವಾಲಯ ಬಿಗಿಗೊಳಿಸಿದೆ.
2019ರ ಲೋಕಸಭಾ ಚುನಾವಣೆಗಳಿಗೆ ಇನ್ನು ಕೆಲವು ತಿಂಗಳು ಮಾತ್ರವೇ ಇದ್ದು ಪ್ರಧಾನಿ ಮೋದಿ ಅವರು ಭದ್ರತೆ ಬೆದರಿಕೆ ಕಾರಣಕ್ಕೆ ಯಾವುದೇ ರೋಡ್ ಶೋ ನಡೆಸದಂತೆ ಕೂಡ ಗೃಹ ಸಚಿವಾಲಯ ಸೂಚಿಸಿದೆ.
ವರದಿಗಳ ಪ್ರಕಾರ ಗೃಹ ಸಚಿವಾಲಯ ಈ ವಿಷಯದಲ್ಲಿ ರಾಜ್ಯ ಸರಕಾರಗಳಿಗೆ ಹೊಸ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದೆ. ಪ್ರಧಾನಿ ಮೋದಿ ಅವರು ರಾಜ್ಯಗಳಿಗೆ ಭೇಟಿ ನೀಡಿದ ಸಂದರ್ಭಗಳಲ್ಲೆಲ್ಲ ಅವರ ರಕ್ಷಣೆ ಮತ್ತು ಭದ್ರತೆಗೆ ಸಾಧ್ಯವಿರುವ ಎಲ್ಲ ಗರಿಷ್ಠ ಕ್ರಮಗಳನ್ನು ಕೈಗೊಳ್ಳುವಂತೆ ಅಲ್ಲಿನ ಸರಕಾರಗಳಿಗೆ ಸೂಚಿಸಿದೆ.
ಭದ್ರತಾ ಅನುಮತಿ ಇಲ್ಲದೆ ಯಾವದೇ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಪ್ರಧಾನಿ ಮೋದಿ ಅವರ ಸನಿಹಕ್ಕೆ ಹೋಗುವಂತಿಲ್ಲ ಎಂದು ಗೃಹ ಸಚಿವಾಲಯ ಹೇಳಿದೆ.
ಪ್ರಧಾನಿ ಮೋದಿ ಅವರ ನಿವಾಸದಲ್ಲಿ ಸಭೆ ಕೈಗೊಳ್ಳುವ ಸಂದರ್ಭದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗುತ್ತಿದೆ ಎಂದು ಗೃಹ ಸಚಿವಾಲಯ ಹೇಳಿದೆ.
ಪ್ರಧಾನಿ ಮೋದಿ ಅವರಿಗೆ ಬಹು ಸ್ತರಗಳ ಮತ್ತು ಭೇದಿಸಲಾಗದ Z+ ಸೆಕ್ಯುರಿಟಿ ನೀಡಲಾಗಿದ್ದು ಇದನ್ನು ಆಗಾಗ ಪರಾಮರ್ಶಿಸಲು ಸಮಿತಿಯೊಂದನ್ನು ರೂಪಿಸಲಾಗಿದೆ ಎಂದು ಗೃಹ ಸಚಿವಾಲಯ ಹೇಳಿದೆ.
ಪ್ರಧಾನಿ ಮೋದಿ ಅವರ ಭದ್ರತೆಯನ್ನು ಹೆಚ್ಚಿಸುವ ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಾಲ್, ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಗೌಬಾ, ಗುಪ್ತಚರ ದಳದ ನಿರ್ದೇಶಕ ರಾಜೀವ್ ಜೈನ್ ಮತ್ತು ಇತರ ಉನ್ನತ ಸರಕಾರಿ ಅಧಿಕಾರಿಗಳು ಹಾಜರಿದ್ದರು.
ಮೋದಿ ಅವರಿಗೆ ಮಾವೋ ಉಗ್ರರಿಂದ ಮತ್ತು ಪಾಕ್ ಬೆಂಬಲಿತ ಉಗ್ರ ಸಮೂಹಗಳಿಂದ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಗೃಹ ಸಚಿವ ರಾಜನಾಥ್ ಸಿಂಗ್ ಅವರ ನಿವಾಸದಲ್ಲಿ ಈ ಉನ್ನತ ಮಟ್ಟದ ಸಭೆಯನ್ನು ನಡೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.