ರಾಬರ್ಟ್ ವಾದ್ರಾ ತೆರಿಗೆ ವಂಚನೆ: ರಾಹುಲ್ ಗಾಂಧಿಗೆ ಬಿಜೆಪಿ ಪ್ರಶ್ನೆ
Team Udayavani, Jun 27, 2018, 3:55 PM IST
ಹೊಸದಿಲ್ಲಿ : “ನಿಮ್ಮ ಭಾವ ರಾಬರ್ಟ್ ವಾದ್ರಾ ಅವರಿಗೆ ಸೇರಿರುವ ದಿಲ್ಲಿ ಕಂಪೆನಿಯೊಂದು 25.8 ಕೋಟಿ ರೂ. ಆದಾಯ ತೆರಿಗೆಯನ್ನು ತಪ್ಪಿಸಿಕೊಂಡಿರುವ ಬಗ್ಗೆ ನೀವೇನು ಹೇಳುತ್ತೀರಿ ? ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಅವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ.
2010-11ರ ಹಣಕಾಸು ವರ್ಷದ ಆದಾಯ ತೆರಿಗೆಯನ್ನು ಪಾವತಿಸದೆ ಬಾಕಿ ಇರಿಸುವ ರಾಬರ್ಟ್ ವಾದ್ರಾ ಅವರ ಕಂಪೆನಿಗೆ ಐಟಿ ಇಲಾಖೆ ನೊಟೀಸ್ ಜಾರಿ ಮಾಡಿದೆ.
“ಈ ಬಗ್ಗೆ ರಾಹುಲ್ ಗಾಂಧಿ ಏನು ಹೇಳ ಬಯಸುತ್ತಾರೆ ಎಂಬುದನ್ನು ನಾವು ತಿಳಿಯಬಯಸುತ್ತೇವೆ’ ಎಂದು ಪಾತ್ರ ಹೇಳಿದ್ದಾರೆ.
ರಾಬರ್ಟ್ ವಾದ್ರಾ ಅವರಿಗೆ ಸೇರಿರುವ ದಿಲ್ಲಿಯ ಸ್ಕೈ ಲೈಟ್ ಹಾಸ್ಪಿಟಾಲಿಟಿ ಎಲ್ಎಲ್ಪಿ 2010-11 ರ ಸಾಲಿಗೆ ಬಾಕಿ ಇರಿಸುವ 25.8 ಕೋಟಿ ರೂ. ಆದಾಯ ತೆರಿಗೆಯನ್ನು ಪಾವತಿಸುವಂತೆ ಐಟಿ ಇಲಾಖೆ ನೊಟೀಸ್ ಜಾರಿ ಮಾಡಿರುವ ವಿಷಯವನ್ನು ರಿಪಬ್ಲಿಕ್ ಟಿವಿ ಚ್ಯಾನಲ್ ಬಹಿರಂಗಪಡಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮೇಲೆ ವಾಗ್ಧಾಳಿ ಆರಂಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.