ಕಾವೇರಿ ಜಲ ವಿವಾದ: 30ರಂದು ಸರ್ವಪಕ್ಷ ಸಭೆ
Team Udayavani, Jun 28, 2018, 6:30 AM IST
ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಜೂ. 30ರಂದು ವಿಧಾನ ಮಂಡಲದ ಉಭಯ ಸದನಗಳ ಮುಖಂಡರು, ಸಂಸದರು, ಕಾವೇರಿ ಜಲಾನಯನ ಪ್ರದೇಶದ ಶಾಸಕರ ಸಭೆಯನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕರೆದಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯುವ ಸಭೆಯಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ನೀರು ನಿಯಂತ್ರಣಾ ಸಮಿತಿ ರಚನೆಯಿಂದ ರಾಜ್ಯಕ್ಕೆ ಆಗುವ ತೊಂದರೆ ಮತ್ತು ಅವುಗಳನ್ನು ಬಗೆಹರಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಯಲಿದ್ದು, ಇದರ ವಿರುದಟಛಿ ಕಾನೂನು ಹೋರಾಟ ಮುಂದುವರಿಸಬೇಕೇ, ಬೇಡವೇ ಎಂಬ ಕುರಿತೂ ಸಮಾಲೋಚನೆ ನಡೆಯಲಿದೆ. ಅಲ್ಲದೆ, ಸಂಸತ್ತಿನಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆವ ಬಗ್ಗೆಯೂ ಚರ್ಚಿಸಲಾಗುತ್ತದೆ.
ಈ ಮಧ್ಯೆ ಜುಲೈ 2ರಂದು ದೆಹಲಿಯಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಮೊದಲ ಸಭೆ ನಡೆಯಲಿದ್ದು, ರಾಜ್ಯದಿಂದ ಸದಸ್ಯರಾಗಿ ಜಲ ಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಪ್ರಾಧಿಕಾರದ
ಸಭೆಯಲ್ಲಿ ಭಾಗವಹಿಸಲಿದ್ದಾರೆ.
30ರಂದು ನಡೆಯುವ ಸಭೆಯಲ್ಲಿ ರಾಜ್ಯದ ಅಭಿಪ್ರಾಯಗಳನ್ನು ಅಂತಿಮಗೊಳಿಸಿ ಅದನ್ನು ಜಲ ಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ಮೂಲಕ ಪ್ರಾಧಿಕಾರದ ಸಭೆಯಲ್ಲಿ ಮಂಡಿಸಲಾಗುವುದು ಎಂದು ಮೂಲಗಳು ಹೇಳಿವೆ.
ಸಭೆಯಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಪ್ರತಿಪಕ್ಷಗಳ ಮುಖಂಡರು, ಕೇಂದ್ರ ಸಚಿವರು ಸೇರಿದಂತೆ ರಾಜ್ಯವನ್ನು ಪ್ರತಿನಿಧಿಸುವ ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು, ಕಾವೇರಿ ಜಲಾನಯನ ವ್ಯಾಪ್ತಿಯ ಎಲ್ಲಾ
ಶಾಸಕರು, ನೀರಾವರಿ ವ್ಯಾಜ್ಯಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಗಳಲ್ಲಿ ರಾಜ್ಯವನ್ನು ಪ್ರತಿನಿಧಿಸುವ ವಕೀಲರು ಮತ್ತು ಅಡ್ವೋಕೇಟ್ ಜನರಲ್ ಪಾಲ್ಗೊಂಡು ಅಭಿಪ್ರಾಯಗಳನ್ನು ನೀಡಲಿದ್ದಾರೆ. ಆ ಮೂಲಕ ಸರ್ವಸಮ್ಮತ ಅಭಿಪ್ರಾಯದೊಂದಿಗೆ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತೀರ್ಮಾನ ಕೈಗೊಳ್ಳಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.