ಸರಕಾರಿ ಬಸ್ ವ್ಯವಸ್ಥೆ ಒದಗಿಸಲು ಡಿಸಿಗೆ ಮನವಿ
Team Udayavani, Jun 28, 2018, 10:08 AM IST
ಪುಂಜಾಲಕಟ್ಟೆ: ಮೂಲರಪಟ್ಣದಲ್ಲಿ ಸೇತುವೆ ಕುಸಿತದ ಸ್ಥಳಕ್ಕೆ ಮಂಗಳವಾರ ಜಿಲ್ಲಾಧಿಕಾರಿ ಸಹಿತ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿ ಸ್ಥಳೀಯರಿಂದ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಮೂಲರಪಟ್ನ ಮತ್ತು ಮುತ್ತೂರು ಭಾಗಗಳ ಜನರು ಮಂಗಳೂರು ಮತ್ತು ಬಂಟ್ವಾಳ ತಾಲೂಕುಗಳಿಗೆ ಸಂಚರಿಸಲು ಅನುಕೂಲವಾಗುವ ದೃಷ್ಟಿಯಿಂದ ಸರಕಾರಿ ಬಸ್ ವ್ಯವಸ್ಥೆಗೊಳಿಸುವಂತೆ ಅರಳ ಗ್ರಾ.ಪಂ. ಉಪಾಧ್ಯಕ್ಷ ಜಗದೀಶ್ ಆಳ್ವ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಇಲ್ಲಿನ ಶಾಲಾ-ಕಾಲೇಜು ವಿದ್ಯಾರ್ಥಿಗಳ ಮತ್ತು ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡುವ ನಿಟ್ಟಿನಲ್ಲಿ ಪಕ್ಕದ ತೂಗುಸೇತುವೆಯ ತನಕ ತೆರಳಲು ಮಂಗಳೂರು ಮತ್ತು ಬಂಟ್ವಾಳ ಭಾಗದಲ್ಲಿ ಮಿನಿ ಬಸ್, ಲಘು ವಾಹನಗಳ ಸಂಚಾರಕ್ಕೆ ಹಾಗೆಯೇ ಮೂಲರಪಟ್ನ, ಬಿ.ಸಿ. ರೋಡ್ ಮಾರ್ಗವಾಗಿ ಮಂಗಳೂರಿಗೆ 2 ಸರಕಾರಿ ಬಸ್ ಸೌಲಭ್ಯವನ್ನು ಈ ಕೂಡಲೇ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಅವರು ಭರವಸೆ ನೀಡಿದರು. ಕೊಳತ್ತಮಜಲು, ಪೊಳಲಿ, ಕೈಕಂಬ ಮೂಲಕ ಈಗಾಗಲೇ ಸಂಚರಿಸುತ್ತಿರುವ ಸರಕಾರಿ ಬಸ್ಸನ್ನು ಪ್ರಯಾಣಿಕರ ಅನುಕೂಲಕ್ಕಾಗಿ ಮೂಲರಪಟ್ನಕ್ಕೂ ಬರುವಂತೆ ಸೂಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಈ ಸಂದರ್ಭದಲ್ಲಿ ಹೇಳಿದರು. ತೂಗು ಸೇತುವೆಯ ಇಕ್ಕೆಲಗಳಲ್ಲಿ ತೆರಳಲು ರಸ್ತೆ, ಕಾಲು ಸಂಕವನ್ನು ತತ್ಕ್ಷಣ ದುರಸ್ತಿಗೊಳಿಸಲು ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿದ್ದ ಲೋಕೋಪಯೋಗಿ ಎಂಜಿನಿಯರ್ಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ| ಎಂ.ಆರ್. ರವಿ, ಮಂಗಳೂರು
ಉಪವಿಭಾಗದ ಸಹಾಯಕ ಕಮಿಷನರ್ ರೇಣುಕಾ ಪ್ರಸಾದ್, ಬಂಟ್ವಾಳ ಪ್ರಭಾರ ತಹಶೀಲ್ದಾರ್ ಸಂತೋಷ್ ಜಿ. ಹಾಗೂ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ಗಳಾದ ಉಮೇಶ್ ಭಟ್, ರವಿ ಕುಮಾರ್, ಆರ್ಟಿಒ ಜಾನ್ ಮಿಸ್ಕಿತ್ ಈ ವೇಳೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.