ಸರ್ಜಿಕಲ್ ಸ್ಟ್ರೈಕ್ ವಿಡಿಯೋ ಬಹಿರಂಗ: ಕಾಂಗ್ರೆಸ್-ಬಿಜೆಪಿ ವಾಕ್ಸಮರ
Team Udayavani, Jun 28, 2018, 11:47 AM IST
ಹೊಸದಿಲ್ಲಿ : 2016ರಲ್ಲಿ ಭಾರತೀಯ ಸೇನೆ ನಡೆಸಿದ್ದ ಪಿಓಕೆ ಮೇಲಿನ ಸರ್ಜಿಕಲ್ ಸ್ಟ್ರೈಕ್ ವಿಡಿಯೋವನ್ನು ಇದೀಗ ಬಹಿರಂಗಪಡಿಸುವ ಮೂಲಕ ಎನ್‌ಡಿಎ ಸರಕಾರ ಇದನ್ನು ರಾಜಕೀಯ ಉದ್ದೇಶಕ್ಕೆ ಬಳಸುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಆಳುವ ಪಕ್ಷದ ಈ ಹುನ್ನಾರವನ್ನು ಬಲವಾಗಿ ಖಂಡಿಸಿದೆ.
2016 ಸೆ.28 ಮತ್ತು 29ರ ನಡುವಿನ ರಾತ್ರಿ ಭಾರತೀಯ ಸೇನೆಯ ಎಲೈಟ್ ಪ್ಯಾರಾ ಕಮಾಂಡೋಗಳು ಪಿಓಕೆಯಲ್ಲಿನ ಉಗ್ರರ ತರಬೇತಿ ಶಿಬಿರಗಳ ಮೇಲೆ ನಡೆಸಿದ್ದ ಸರ್ಜಿಕಲ್ ಸ್ಟ್ರೈಕ್ ದಾಳಿಯ ವಿಡಿಯೋವನ್ನು ಎನ್‌ಡಿಎ ಸರಕಾರ ಇಂದು ಬುಧವಾರ ಬಿಡುಗಡೆಗೊಳಿಸಿದೆ. ಇದು ದೇಶಾದ್ಯಂತ ರಾಜಕೀಯ ಬಿರುಗಾಳಿಯನ್ನು ಸೃಷ್ಟಿಸಿದೆ. ವಿರೋಧ ಪಕ್ಷಗಳು ಕೇಂದ್ರ ಸರಕಾರ ಭಾರತೀಯ ಸೇನಾ ಕಾರ್ಯಾಚರಣೆಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಕಟುವಾಗಿ ಟೀಕಿಸಿವೆ.
ಆದರೆ ಆಳುವ ಭಾರತೀಯ ಜನತಾ ಪಕ್ಷದ ಎನ್‌ಡಿಎ ಸರಕಾರ ವಿಪಕ್ಷಗಳ ಈ ಆರೋಪವನ್ನು ತಿರಸ್ಕರಿಸಿದೆ.
ಸರ್ಜಿಕಲ್ ಸ್ಟ್ರೈಕ್ ನಡೆದ 637 ದಿನಗಳ ಬಳಿಕ ಝೀ ಮಾಧ್ಯಮಕ್ಕೆ ದೊರಕಿರುವ ವಿಡಿಯೋ ಚಿತ್ರಿಕೆಯಲ್ಲಿ ಭಾರತೀಯ ಸೇನೆಯ ಎಂಟೆದೆಯ ಕಮಾಂಡೋಗಳು ಪಿಓಕೆಯಲ್ಲಿನ ಉಗ್ರ ಶಿಬಿರಗಳನ್ನು ನಾಶಪಡಿಸುವುದು, ವ್ಯಾಪಕ ನಾಶ ನಷ್ಟ ಉಂಟು ಮಾಡಿರುವುದು ಎಲ್ಲವೂ ಸ್ಪಷ್ಟವಾಗಿ ಕಂಡುಬಂದಿದೆ.
ಈಗ ಈ ವಿಡಿಯೋ ಸಾರ್ವಜನಿಕವಾಗಿ ಲಭ್ಯವಾಗಿರುವುದನ್ನು ಕಾಂಗ್ರೆಸ್ ಟೀಕಿಸಿದೆ; ಪ್ರಧಾನಿ ನರೇಂದ್ರ ಮೋದಿ ಸರಕಾರ ಇದರ ರಾಜಕೀಯ ಲಾಭವನ್ನು ಪಡೆಯಲು ಯತ್ನಿಸುತ್ತಿದೆ ಎಂದು ಆರೋಪಿಸಿದೆ.
ರಾಷ್ಟ ರಾಜಧಾನಿಯಲ್ಲಿಂದು ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್‌ಜೇವಾಲಾ ಅವರು “ಸೇನೆಯ ತ್ಯಾಗವನ್ನು ಆಳುವ ಪಕ್ಷ ಓಟು ಗಳಿಕೆಯ ಪರಿಕರವನ್ನಾಗಿ ಬಳಸಬಾರದು; ಸೈನಿಕರು ಆತ್ಮಾರ್ಪಣೆ ಮಾಡಿರುವುದನ್ನು ಮೋದೀಜಿ ವಿಜೃಂಭಣೆಗೆ ಬಳಸಲಾಗುತ್ತಿರುವುದು ಖಂಡನೀಯ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್?
India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!
MUST WATCH
ಹೊಸ ಸೇರ್ಪಡೆ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.